ಎ.27ರಂದು ಉಡುಪಿ ಜಿಪಂ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ
ಉಡುಪಿ, ಎ.18: ಉಡುಪಿ ಜಿಪಂನ ಅಧ್ಯಕ್ಷರ ಮತ್ತು ಉಪಾ ಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಎ.27ರಂದು ಮಧ್ಯಾಹ್ನ 1 ಗಂಟೆಗೆ ಮಣಿಪಾಲದಲ್ಲಿರುವ ಉಡುಪಿ ಜಿಪಂ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ.
ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತ ಎ.ಎಂ.ಕುಂಜಪ್ಪ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಲಿದ್ದು, ನಾಮಪತ್ರ ಸಲ್ಲಿಕೆ ಪೂರ್ವಾಹ್ನ 11ಕ್ಕೆ ಪ್ರಾರಂಭಗೊಳ್ಳಲಿದೆ. ಉಡುಪಿ ಜಿಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದೆ.
ಉಡುಪಿ ಜಿಪಂಗೆ ಬಿಜೆಪಿಯ 20 ಹಾಗೂ ಕಾಂಗ್ರೆಸ್‌ನ 6 ಮಂದಿ ಸದಸ್ಯರು ಆಯ್ಕೆಯಾಗಿದ್ದಾರೆ. ಉದ್ಯಾವರ ಕ್ಷೇತ್ರದಿಂದ ಮೊದಲ ಬಾರಿ ಜಿಪಂಗೆ ಆಯ್ಕೆಯಾಗಿರುವ ದಿನಕರ ಅಧ್ಯಕ್ಷ ಸ್ಥಾನಕ್ಕಿರುವ ಏಕೈಕ ಅಭ್ಯರ್ಥಿಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಹಿರಿಯ ಸದಸ್ಯರಾದ ಗೀತಾಂಜಲಿ ಸುವರ್ಣ ಹಾಗೂ ಶೀಲಾ ಕೆ.ಶೆಟ್ಟಿ ನಡುವೆ ಸ್ಪರ್ಧೆ ಇದೆ.
Next Story





