ಬೆಂಗಳೂರಿನಲ್ಲಿ ಮುಂದುವರಿದ ಕಾರ್ಮಿಕರ ಪ್ರತಿಭಟನೆ

ಬೆಂಗಳೂರು, ಎ.19: ಕೇಂದ್ರ ಸರಕಾರದ ನೂತನ ಪಿ. ಎಫ್ ನೀತಿಯನ್ನು ವಿರೋಧಿಸಿ ಗಾರ್ಮೆಂಟ್ಸ್ ಕಾರ್ಮಿಕರು ಬೆಂಗಳೂರಿನಲ್ಲಿ ಇಂದು ಮತ್ತೆ ಬೀದಿಗಿಳಿದು ಪ್ರತಿಭಟನೆ ಮುಂದುವರಿಸಿದ್ದಾರೆ.
ಹೊಸೂರು ರಸ್ತೆಯ ಇಕ್ಕೆಲಗಳಲ್ಲೂ ಕಾರ್ಮಿಕರು ಜಮಾಯಿಸಿದ್ದಾರೆ. ಪರಿಣಾಮವಾಗಿ ವಾಹನಗಳ ಸಂಚಾರ ಅಸ್ತವ್ಯಸ್ತಗೊಂಡಿದೆ. ಸುಮಾರು 10 ಸಾವಿರ ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಭಾರೀ ಸಂಖ್ಯೆಯಲ್ಲಿ ಪೊಲೀಸರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಬೊಮ್ಮನಹಳ್ಳಿಯಲ್ಲಿ ಸೋಮವಾರ ನಡೆದ ಕಾರ್ಮಿಕರ ಪ್ರತಿಭಟನೆ ಹಿಂಸೆಗೆ ತಿರುಗಿ ಕಲ್ಲು ತೂರಾಟದಿಂದಾಗಿ ಹಲವು ಮಂದಿಗೆ ಗಾಯವಾಗಿತ್ತು. ಆನೇಕ ವಾಹನಗಳು ಜಖಂಗೊಂಡಿತ್ತು.
Next Story





