Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಡೀ ಕಂಪೆನಿ ಡಿಲೀಟ್ ಮಾಡಿದ್ದು ಸುಳ್ಳು-...

ಇಡೀ ಕಂಪೆನಿ ಡಿಲೀಟ್ ಮಾಡಿದ್ದು ಸುಳ್ಳು- ಕೇವಲ ಪ್ರಚಾರ ತಂತ್ರ !

ವಾರ್ತಾಭಾರತಿವಾರ್ತಾಭಾರತಿ19 April 2016 3:44 PM IST
share
ಇಡೀ ಕಂಪೆನಿ ಡಿಲೀಟ್ ಮಾಡಿದ್ದು ಸುಳ್ಳು- ಕೇವಲ ಪ್ರಚಾರ ತಂತ್ರ !

 ಲಂಡನ್ : ವಿಚಿತ್ರ ಘಟನೆಯೊಂದರಲ್ಲಿ ವೆಬ್ ಹೋಸ್ಟಿಂಗ್ ಕಂಪೆನಿಯೊಂದನ್ನು ನಡೆಸುತ್ತಿರುವ ಮಾರ್ಕೋ ಮರ್ಸಲ ಎಂಬ ವ್ಯಕ್ತಿಯೊಬ್ಬ ತಾನು ತನ್ನ ಇಡೀ ಕಂಪೆನಿ ಹಾಗೂ ಅದರ ಗ್ರಾಹಕರ ವೆಬ್ ಸೈಟುಗಳೆಲ್ಲವನ್ನೂ ತಪ್ಪಾದ ಕೋಡ್ ಒಂದನ್ನು ಟೈಪ್ ಮಾಡಿ ಡಿಲೀಟ್ ಮಾಡಿದ್ದೇನೆಂದು ಇತ್ತೀಚೆಗೆ ಹೇಳಿಕೊಂಡಿದ್ದ. ಮಾರ್ಕೋನ ಕಂಪೆನಿಗೆ 1,535ಕ್ಕೂ ಹೆಚ್ಚು ಗ್ರಾಹಕರಿದ್ದು ಈ ಗ್ರಾಹಕರ ವೆಬ್ ಸೈಟುಗಳ ಫೈಲುಗಳನ್ನು ಶೇಖರಿಸಲ್ಪಟ್ಟ ಸರ್ವರುಗಳು ಹಾಗೂ ಇಂಟರ್‌ನೆಟ್ ಸಂಪರ್ಕಗಳ ಮೇಲ್ವಿಚಾರಣೆಯನ್ನು ಆತನ ಕಂಪೆನಿ ನೋಡಿಕೊಳ್ಳುತ್ತಿತ್ತು. ಇತ್ತೀಚೆಗೆ ಆತ ‘ಸರ್ವರ್ ಫಾಲ್ಟ್’ ಎಂಬ ಸರ್ವರ್ ತಜ್ಞರ ಫೋರಂ ಒಂದರಲ್ಲಿ ತಾನು ಒಂದು ತಪ್ಪಾದ ಕೋಡನ್ನು ತನ್ನ ಕಂಪ್ಯೂಟರುಗಳಲ್ಲಿ ಆಕಸ್ಮಿಕವಾಗಿ ಹಾಕಿ ಸಿಕ್ಕಿಕೊಂಡಿದ್ದೇನೆಂದು ತನ್ನ ಗ್ರಾಹಕರ ವೆಬ್‌ಸೈಟುಗಳ ದಾಖಲೆಗಳೆಲ್ಲವೂ ಡಿಲೀಟ್ ಆಗಿದೆಯೆಂದು ಹೇಳಿಕೊಂಡಿದ್ದ.

ಆದರೆ ಇದೀಗ ಆತ ಹೇಳಿದ್ದೆಲ್ಲವೂ ಸುಳ್ಳು ಎಂದು ತಿಳಿದು ಬಂದಿದೆ. ರಿಪಬ್ಬ್ಲಿಕಾ ಐಟಿಗೆ ನೀಡಿದ ಹೇಳಿಕೆಯೊಂದರಲ್ಲಿ ಆತ ತಾನು ಈ ಹಿಂದೆ ಹೇಳಿದ್ದೆಲ್ಲವೂ ಕೇವಲ ಪ್ರಚಾರ ತಂತ್ರವೆಂದೂ ಯಾವುದೇ ದಾಖಲೆಗಳೂ ಕಳೆದು ಹೋಗಿಲ್ಲವೆಂದು ಸೃಷ್ಟೀಕರಣ ನೀಡಿದ್ದಾನೆ. ಈ ಬೆಳವಣಿಗೆ ಹಲವರಿಗೆ ತಮಾಷೆಯೆನಿಸಿದರೆ ಮತ್ತೆ ಕೆಲವರು ಆತನನ್ನು ಟೀಕಿಸಿದ್ದಾರೆ.

ತನ್ನ ಸ್ಟಾರ್ಟ್-ಅಪ್ ಸಂಸ್ಥೆಯನ್ನು ಜನಪ್ರಿಯಗೊಳಿಸಲು ತಾನು ಗೆರಿಲ್ಲಾ ಮಾರ್ಕೆಟಿಂಗ್ ತಂತ್ರಗಳನ್ನು ಬಳಸುತ್ತಿರುವುದಾಗಿ ಆತ ಹೇಳಿಕೊಂಡಿದ್ದಾನಲ್ಲದೆ ತಾನು ಈ ಹಿಂದೆ ಹೇಳಿದ್ದೆಲ್ಲಾ ಸುಳ್ಳು ಎನ್ನುವುದಕ್ಕೆ ತನ್ನ ಪೋಸ್ಟಿನಲ್ಲಿ ಕೆಲವು ಸುಳಿವುಗಳನ್ನು ಬಿಟ್ಟಿದ್ದಾಗಿಯೂ ಆತ ತಿಳಿಸಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X