ಬಿಎಂಟಿಸಿಯಿಂದ 10.93 ಲಕ್ಷ ರೂ. ದಂಡ ವಸೂಲಿ
ಟಿಕೆಟ್ ರಹಿತ ಪ್ರಯಾಣ
ಬೆಂಗಳೂರು, ಎ.20: ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 7,407 ಮಂದಿ ಪ್ರಯಾಣಿಕರಿಂದ ಒಟ್ಟು 10.93 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ ಎಂದು ಸಾರಿಗೆ ಸಂಸ್ಥೆ ತಿಳಿಸಿದೆ.
ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ನಗರದಲ್ಲಿ ಸಂಚರಿಸುವ ವಾಹನಗಳನ್ನು ಮಾರ್ಚ್‌ನಲ್ಲಿ ಪರಿಶೀಲಿಸಿದ ತನಿಖಾ ತಂಡ, 27ಸಾವಿರ ಟ್ರಿಪ್‌ಗಳನ್ನು ತಪಾಸಣೆ ಮಾಡಿ ಒಟ್ಟು 10,93,670ರೂ.ದಂಡ ವಸೂಲಿ ಮಾಡಿದೆ. ಅಲ್ಲದೆ, ಸಂಸ್ಥೆಯ ನಿರ್ವಾಹಕರುಗಳ ಮೇಲೆ 2,975 ಪ್ರಕರಣಗಳನ್ನು ದಾಖಲಿಸಲಾಗಿದೆ.
87 ಸಾವಿರ ರೂ.ದಂಡ: ಮಹಿಳಾ ಪ್ರಯಾಣಿಕರಿಗೆ ಮೀಸಲಿಟ್ಟ ಆಸನಗಳಲ್ಲಿ ಕುಳಿತು ಪ್ರಯಾಣಿಸುತ್ತಿದ್ದ 875 ಪುರುಷ ಪ್ರಯಾಣಿಕರಿಂದ ಒಟ್ಟು 87,500ರೂ. ದಂಡ ವಸೂಲಿ ಮಾಡಲಾಗಿದೆ. ಪ್ರಯಾಣಿಕರು ಟಿಕೆಟ್ ರಹಿತ ಪ್ರಯಾಣಿಸದೆ ಅಧಿಕೃತ ಟಿಕೆಟ್ ಪಡೆದು ಪ್ರಯಾಣಿಸಬೇಕೆಂದು ಕೋರಲಾಗಿದೆ.
Next Story





