ಸರಿಸಮಾನ ವೇತನ-ಭತ್ತೆಗೆ ಆಗ್ರಹಿಸಿ ಜೂ.2ಕ್ಕೆ ಸರಕಾರಿ ನೌಕರರ ಮುಷ್ಕರ
ಬೆಂಗಳೂರು, ಎ.20: ಕೇಂದ್ರ ಸರಕಾರಿ ನೌಕರರಿಗೆ ಸರಿಸಮಾನವಾದ ವೇತನ, ಭತ್ತೆಗಳನ್ನು ರಾಜ್ಯ ಸರಕಾರಿ ನೌಕರರಿಗೂ ನೀಡಬೇಕೆಂದು ಆಗ್ರಹಿಸಿ ರಾಜ್ಯ ಸರಕಾರಿ ನೌಕರರ ಸಂಘ ಜೂ. 2ರಂದು ‘ಒಂದು ದಿನದ ಸಾಂಕೇತಿಕ ಮುಷ್ಕರ’ ಹಮ್ಮಿಕೊಳ್ಳಲಿದೆ ಎಂದು ಘೋಷಿಸಿದೆ.
ಬುಧವಾರ ವಿಧಾನಸೌಧದಲ್ಲಿ ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಮಂಜೇಗೌಡ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು, ಮುಖ್ಯ ಕಾರ್ಯದರ್ಶಿ ಅರವಿಂದ್ ಜಾಧವ್ ಅವರಿಗೆ ಮನವಿ ಸಲ್ಲಿಸಿದರು. 2ವರ್ಷಗಳಿಂದ ಸರಿಸಮಾನ ವೇತನ ಭತ್ತೆಗೆ ಆಗ್ರಹಿಸುತ್ತಿದ್ದರೂ, ರಾಜ್ಯ ಸರಕಾರ ಈವರೆಗೂ ಕ್ರಮ ಕೈಗೊಂಡಿಲ್ಲ.
ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ನೌಕರರ ಹಿತದೃಷ್ಟಿ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೂಡಲೇ ಕೇಂದ್ರ ಸರಕಾರಿ ನೌಕರರ ಮಾದರಿಯಲ್ಲೆ ರಾಜ್ಯ ಸರಕಾರಿ ನೌಕರರಿಗೂ ವೇತನ-ಭತ್ತೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕೆಂದು ಅವರು ಇದೇ ವೇಳೆ ಮನವಿ ಮಾಡಿದರು.
Next Story





