Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಂತರ್ಜಲ ಮಟ್ಟ ಕುಸಿಯದಂತೆ ಕಾರ್ಯಕ್ರಮ...

ಅಂತರ್ಜಲ ಮಟ್ಟ ಕುಸಿಯದಂತೆ ಕಾರ್ಯಕ್ರಮ ರೂಪಿಸಿ: ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್

ಕಂದಾಯಾಧಿಕಾರಿಗಳ ಸಭೆ

ವಾರ್ತಾಭಾರತಿವಾರ್ತಾಭಾರತಿ21 April 2016 10:08 PM IST
share
ಅಂತರ್ಜಲ ಮಟ್ಟ   ಕುಸಿಯದಂತೆ ಕಾರ್ಯಕ್ರಮ ರೂಪಿಸಿ: ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್

ಮಡಿಕೇರಿ, ಎ.21: ಜಿಲ್ಲೆಯಲ್ಲಿ ಭತ್ತ ಬೆಳೆಯುವ ಪ್ರದೇಶ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಶುಂಠಿ ಬೆಳೆ ಅಧಿಕವಾಗುತ್ತಿದೆ. ಇದರಿಂದ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿದ್ದು, ಭತ್ತದ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡುವಂತೆ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ಕೃಷಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕಂದಾಯಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಬರಪೀಡಿತ ಪ್ರದೇಶಗಳ ಅಧ್ಯಯನ ಮತ್ತು ಬರ ನಿರ್ವಹಣೆ ಸಂಬಂಧ ಪರಿಶೀಲಿಸಲು ಸದ್ಯದಲ್ಲಿ ಸಚಿವ ಸಂಪುಟದ ಉಪ ಸಮಿತಿ ತಂಡವು ಜಿಲ್ಲೆಗೆ ಆಗಮಿಸಲಿದ್ದು, ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಅವರು ಸಲಹೆ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಮಾತನಾಡಿ, ಮುಂದಿನ ಮೇ ಅಂತ್ಯ ಅಥವಾ ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆ ಜಿಲ್ಲೆಗೆ ಪ್ರವೇಶಿಸುವ ಸಾಧ್ಯತೆಯಿದ್ದು, ರೈತರಿಗೆ ಬೇಕಿರುವ ಅಗತ್ಯ ರಸಗೊಬ್ಬರ ಹಾಗೂ ಬಿತ್ತನೆ ಬೀಜ ದಾಸ್ತಾನು ಮಾಡಿಕೊಳ್ಳಬೇಕೆಂದರು. ಭತ್ತ ಬೆಳೆಯುವುದರಿಂದ ಹೆಚ್ಚಿನ ಲಾಭ ಸಿಗದಿರುವುದರಿಂದ ಭತ್ತ ಕೃಷಿಯತ್ತ ರೈತರು ವಿಮುಖರಾಗುತ್ತಿದ್ದಾರೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜು ಅಭಿಪ್ರಾಯಪಟ್ಟರು. ಜಿಲ್ಲೆಯಲ್ಲಿ ನಿವೇಶನ, ಸ್ಮಶಾನ ಹಾಗೂ ಕಸ ವಿಲೇವಾರಿಗೆ ಭೂಮಿ ನೀಡುವ ಸಂಬಂಧ ಕಂದಾಯ ನಿರೀಕ್ಷಕರು ಹೆಚ್ಚಿನ ಕಾಳಜಿ ವಹಿಸಬೇಕು. ಮೂಲ ನಿವಾಸಿ ಗಿರಿಜನರಿಗೆ ನಿವೇಶನ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ ನೀಡಿದರು. ನದಿ ದಡದಲ್ಲಿ ಸ್ಮಶಾನಕ್ಕೆ ಅಥವಾ ಕಸ ವಿಲೇವಾರಿಗೆ ಅವಕಾಶ ನೀಡಬಾರದು. ಒಂದು ಸಾವಿರ ಜನಸಂಖ್ಯೆಗೆ ಕನಿಷ್ಠ ಅರ್ಧ ಎಕರೆ ಜಾಗವನ್ನಾದರೂ ಸ್ಮಶಾನಕ್ಕೆ ನೀಡಬೇಕು. ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಸೂಚನೆ ನೀಡಿದರು.

ಕಂದಾಯ ಅದಾಲತ್, ಪಿಂಚಣಿ ಅದಾಲತ್, ಸಾಮಾಜಿಕ ಭದ್ರತಾ ಯೋಜನೆಗಳು, ಆರ್‌ಟಿಸಿ ತಿದ್ದುಪಡಿ ಪ್ರಕರಣಗಳ ವಿಲೇವಾರಿ, ಪಡಶಾಲೆ ಯೋಜನೆ, ಪೋಡಿ ಪ್ರಕರಣ ಪ್ರಗತಿ, ಆಧಾರ್ ನೋಂದಣಿ ಪ್ರಗತಿ, ಸಕಾಲ ಯೋಜನೆ ಪ್ರಗತಿ, 94ಸಿ ಪ್ರಗತಿ ಮತ್ತಿತರ ಸಂಬಂಧ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಮಾಹಿತಿ ಪಡೆದರು. ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜು, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಗಿರೀಶ್, ಜಿಪಂ ಸಹಾಯಕ ಕಾರ್ಯದರ್ಶಿ ಶ್ರೀಕಂಠಮೂರ್ತಿ, ತಹಶೀಲ್ದಾರ್‌ಗಳಾದ ಕುಂಞಮ್ಮ, ಶಿವಪ್ಪ, ಮಹದೇವ ಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X