ಉಳ್ಳಾಲ: ಅಂಬೇಡ್ಕರ್ ಜನ್ಮದಿನಾಚರಣೆ

ಉಳ್ಳಾಲ, ಎ.21: ಭಾರತ ಜಾತ್ಯತೀತ ರಾಷ್ಟ್ರವಾಗಿ ವಿವಿಧತೆಯಲ್ಲಿ ಏಕತೆಯನ್ನು ಕಂಡುಕೊಳ್ಳುವಲ್ಲಿ ಸಂವಿಧಾನ ಮಹತ್ತರ ಪಾತ್ರವಹಿಸುತ್ತದೆ ಎಂದು ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್‌ನ ಆಡಳಿತಾಧಿಕಾರಿ ಅಬ್ದುಲ್ ಲತೀಫ್ ಸಾಹೇಬ್ ಹೇಳಿದರು.
ಡಾ.ಬಿ.ಆರ್. ಅಂಬೇಡ್ಕರ್‌ರ 125ನೆ ಜನ್ಮ ದಿನಾಚರಣೆಯ ಅಂಗವಾಗಿ ಟಿಪ್ಪುಸುಲ್ತಾನ್ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಜಂಟಿ ಶಿಕ್ಷಣ ಸಂಸ್ಥೆಯ ಮುಖ್ಯಶಿಕ್ಷಕ ಎಂ.ಎಚ್.ಮಲಾರ್, ಶಾಲಾಭಿವೃದ್ಧಿ ಸಮಿತಿ ಸದಸ್ಯ ರಾದ ಅಹ್ಮದ್ ಅಬ್ಬಾಸ್, ಪ್ರೌಢ ಹಾಗೂ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕಿ ಯರಾದ ಗೀತಾ ಡಿ., ಎಲ್.ಸಿ.ಡಿಸೋಜ ಉಪ ಸ್ಥಿತರಿದ್ದರು.
ಪ್ರೌಢ ಶಾಲಾ ಸಹ ಶಿಕ್ಷಕ ಅಖಿಲ್ ಸ್ವಾಗ ತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಅಲ್ಲಾಭಕ್ಷ್ ಅಲಗೂರು ವಂದಿಸಿದರು. ಕಲಾ ಶಿಕ್ಷಕ ಬಿ.ಎಂ. ರಫೀಕ್ ತುಂಬೆ ಕಾರ್ಯಕ್ರಮ ನಿರೂಪಿಸಿದರು.
Next Story





