Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್: 12 ಸೇನಾಧಿಕಾರಿಗಳ ವಜಾ

ಪಾಕ್: 12 ಸೇನಾಧಿಕಾರಿಗಳ ವಜಾ

ಭ್ರಷ್ಟಾಚಾರದ ವಿರುದ್ಧ ಸಮರ ಸಾರಿದ ಸೇನಾ ಮುಖ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ21 April 2016 11:58 PM IST
share

ಇಸ್ಲಾಮಾಬಾದ್, ಎ. 21: ಭ್ರಷ್ಟಾಚಾರದ ಆರೋಪದಲ್ಲಿ ಇಬ್ಬರು ಜನರಲ್‌ಗಳು ಸೇರಿದಂತೆ ಪಾಕಿಸ್ತಾನದ 12 ಸೇನಾಧಿಕಾರಿಗಳನ್ನು ಸೇನಾ ಮುಖ್ಯಸ್ಥ ಜನರಲ್ ರಹೀಲ್ ಶರೀಫ್ ಗುರುವಾರ ವಜಾಗೊಳಿಸಿದ್ದಾರೆ.

ದೇಶದಿಂದ ಭ್ರಷ್ಟಾಚಾರವನ್ನು ಮೂಲೋತ್ಪಾಟನೆ ಗೊಳಿಸುವುದಕ್ಕಾಗಿ ‘‘ಎಲ್ಲರೂ ಉತ್ತರದಾಯಿತ್ವ’’ ಹೊಂದಿರಬೇಕು ಎಂಬುದಾಗಿ ಶರೀಫ್ ಕರೆ ನೀಡಿದ ಎರಡು ದಿನಗಳ ಬಳಿಕ ಈ ಅಭೂತಪೂರ್ವ ದಂಡನಾ ಕ್ರಮ ವರದಿಯಾಗಿದೆ.

ವಜಾಗೊಂಡ ಸೇನಾಧಿ ಕಾರಿಗಳೆಂದರೆ ಲೆಫ್ಟಿನೆಂಟ್ ಜನರಲ್ ಉಬೈದುಲ್ಲಾ ಖಟ್ಟಕ್, ಓರ್ವ ಮೇಜರ್‌ಜನರಲ್, ಐವರು ಬ್ರಿಗೇಡಿಯರ್‌ಗಳು, ನಾಲ್ವರು ಕರ್ನಲ್‌ಗಳು ಮತ್ತು ಓರ್ವ ಮೇಜರ್ ಎಂದು ಟಿವಿ ಸುದ್ದಿ ಚಾನೆಲ್‌ಗಳು ವರದಿ ಮಾಡಿವೆ.

ಮಂಗಳವಾರ ಪನಾಮ ದಾಖಲೆಗಳ ಸೋರಿಕೆ ಬಗ್ಗೆ ಮಾತನಾಡಿದ್ದ ಶರೀಫ್, ದೇಶದಲ್ಲಿ ಸಮೃದ್ಧಿಯನ್ನು ತರುವುದಕ್ಕಾಗಿ ಭ್ರಷ್ಟಾಚಾರದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎಂದು ಹೇಳಿದ್ದರು.

ಈಶಾನ್ಯ ಪಾಕಿಸ್ತಾನದಲ್ಲಿ ಸೈನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಸೇನಾ ಮುಖ್ಯಸ್ಥರು, ‘‘ಪಾಕಿಸ್ತಾನದ ಏಕತೆ, ಸಮಗ್ರತೆ ಮತ್ತು ಸಮೃದ್ಧಿಗಾಗಿ ಸರ್ವರೂ ಉತ್ತರದಾಯಿತ್ವ ಹೊಂದುವುದು ಅಗತ್ಯವಾಗಿದೆ ಎಂದಿದ್ದರು.

‘‘ನಮ್ಮ ಮುಂದಿನ ತಲೆಮಾರುಗಳಿಗೆ ಉತ್ತಮ ಭವಿಷ್ಯವನ್ನು ಖಾತರಿಪಡಿಸುವ ದಿಕ್ಕಿನಲ್ಲಿ ಸಾಗುವ ಎಲ್ಲ ಅರ್ಥಪೂರ್ಣ ಪ್ರಯತ್ನಗಳನ್ನು ಪಾಕಿಸ್ತಾನದ ಸಶಸ್ತ್ರ ಪಡೆಗಳು ಬೆಂಬಲಿಸುವುದು’’ ಎಂದಿದ್ದರು.

 ತಮ್ಮ ದೇಶಗಳಲ್ಲಿ ತೆರಿಗೆ ವಂಚಿಸಿ ವಿದೇಶಗಳಲ್ಲಿ ಹಣ ಹೂಡಿರುವ ವ್ಯಕ್ತಿಗಳಿಗೆ ಸಂಬಂಧಿಸಿದ ಪನಾಮ ದಾಖಲೆಗಳು ಪ್ರಧಾನಿ ನವಾಝ್ ಶರೀಫ್‌ರ ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿಯ ಹೆಸರುಗಳನ್ನು ಬಹಿರಂಗಪಡಿಸಿದ ಬಳಿಕ, ನವಾಝ್ ಶರೀಫ್ ತನ್ನ ದೇಶದಲ್ಲಿ ಭಾರೀ ಟೀಕೆಗೊಳಗಾಗಿದ್ದಾರೆ.

ಪನಾಮದ ಕಾನೂನು ಕಂಪೆನಿ ಯೊಂದರಿಂದ ಸೋರಿಕೆಯಾಗಿರುವ ಬೃಹತ್ ಪ್ರಮಾಣದ ದಾಖಲೆಗಳಲ್ಲಿ ಸುಮಾರು 220 ಪಾಕಿಸ್ತಾನೀಯರ ಹೆಸರುಗಳಿವೆ.

ಭ್ರಷ್ಟಾಚಾರದ ಪಿಡುಗನ್ನು ತೊಡೆದುಹಾಕದೆ ಭಯೋತ್ಪಾದನೆಯ ವಿರುದ್ಧದ ಸಮರವನ್ನು ಜಯಿಸಲು ಸಾಧ್ಯವಿಲ್ಲ ಎಂದು ಸೇನಾ ಮುಖ್ಯಸ್ಥರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X