ಮೂವರು ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ತಾಯಿ

ಬೀದರ್, ಎ. 22: ತಾಯಿಯೊಬ್ಬಳು ತನ್ನ ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ಶುಕ್ರವಾರ ನಡೆದಿದೆ.
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಚಿಕ್ಕನಾಗಾಂವ್ ಗ್ರಾಮದ ಮುಡಬಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಶೀಲಾ (32) ಎಂಬಾಕೆ ತನ್ನ ಮೂವರು ಮಕ್ಕಳನ್ನು ಕತ್ತು ಹಿಸುಕಿ ಕೊಂದಿದ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಶೀಲಾಬಾಯಿಯ ಪತಿ ಇತ್ತೀಚೆಗೆ ಮೃತಪಟ್ಟಿದ್ದು, ಇದರಿಂದ ಆಕೆ ತೀವ್ರ ನೊಂದಿದ್ದಳು. ಮಕ್ಕಳನ್ನು ಸಾಕಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಆಕೆ ತನ್ನ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
Next Story





