ಕಾಸರಗೋಡು: ಜಿ.ಪಂ. ಸದಸ್ಯ , ಕಾಂಗ್ರೆಸ್ ಮುಖಂಡ ಪಾದೂರು ಕುಂಞಾಮು ಹಾಜಿ ನಿಧನ

ಕಾಸರಗೋಡು, ಎ. 23: ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡ ಪಾದೂರು ಕುಂಞಾಮು ಹಾಜಿ ಇಂದು ಬೆಳಿಗ್ಗೆ 7.30 ರ ಸುಮಾರಿಗೆ ಕಾಸರಗೋಡಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಚೆಮ್ನಾಡ್ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಹಲವು ವರ್ಷ ಸೇವೆ ಸಲ್ಲಿಸಿದ್ದ ಅವರು ಎರಡು ಬಾರಿ ಜಿಲ್ಲಾ ಪಂಚಾಯತ್ ಗೆ ಆಯ್ಕೆಯಾಗಿದ್ದರು.
2015 ರ ಜಿಲ್ಲಾಪಂಚಾಯತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು .ಕಾಂಗ್ರೆಸ್ ಪಕ್ಷದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
Next Story





