ನಿಧಾನಗತಿಯ ಬೌಲಿಂಗ್: ವಿರಾಟ್ ಕೊಹ್ಲಿಗೆ ದಂಡ
ಪುಣೆ, ಎ.23: ರೈಸಿಂಗ್ ಪುಣೆ ಸೂಪರ್‌ಜೈಂಟ್ಸ್ ವಿರುದ್ಧದ ಐಪಿಎಲ್ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್ ಕಾಯ್ದುಕೊಂಡಿದ್ದಕ್ಕೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ.
ಶುಕ್ರವಾರ ರಾತ್ರಿ ಇಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ ಹಾಗೂ ಎಬಿಡಿ ವಿಲಿಯರ್ಸ್ ಮಿಂಚಿನ ಅರ್ಧಶತಕವನ್ನು ಸಿಡಿಸುವುದರೊಂದಿಗೆ ಆರ್‌ಸಿಬಿಗೆ 13 ರನ್ ಅಂತರದ ಗೆಲುವು ತಂದುಕೊಟ್ಟಿದ್ದರು.
‘‘ಪುಣೆಯಲ್ಲಿ ನಡೆದ ಪುಣೆ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಆರ್‌ಸಿಬಿ ತಂಡ ನಿಧಾನಗತಿಯ ಬೌಲಿಂಗ್ ನಡೆಸಿತ್ತು. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿಗೆ ದಂಡ ವಿಧಿಸಲಾಗಿದೆ. ನಿಧಾನಗತಿಯ ಓವರ್‌ರೇಟ್‌ಗೆ ಸಂಬಂಧಿಸಿ ಈ ವರ್ಷದ ಐಪಿಎಲ್‌ನಲ್ಲಿ ಮೊದಲ ಬಾರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ. ಕೊಹ್ಲಿಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ’’ ಎಂದು ಐಪಿಎಲ್ ಹೇಳಿಕೆಯೊಂದರಲ್ಲಿ ತಿಳಿಸಿದೆ.
Next Story





