ಇಂದು ಪ್ರವೇಶ ಪರೀಕ್ಷೆ
ಸ್ನಾತಕೋತ್ತರ ದಂತ ವೈದ್ಯಕೀಯ
ಬೆಂಗಳೂರು, ಎ. 23: ದಂತವೈದ್ಯಕೀಯ ಸ್ನಾತಕೋತ್ತರ ಪದವಿ/ಡಿಪ್ಲೊಮಾ ಕೋರ್ಸುಗಳ ಪ್ರವೇಶ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎ.24ರಂದು ಬೆಳಗ್ಗೆ 10:30ರಿಂದ ಮಧ್ಯಾಹ್ನ 1:30ರ ವರೆಗೆ ಬೆಂಗಳೂರಿನಲ್ಲಿ ನಡೆಸುತ್ತಿದೆ. ಒಟ್ಟು 389 ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಎಐಪಿಜಿಡಿಇಇ ನಡೆಸಿದ ಅಖಿಲ ಭಾರತ ಪ್ರವೇಶ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಎರಡನೆ ಸುತ್ತಿನಲ್ಲಿ ಹಂಚಿಕೆ ಮಾಡಿದ ನಂತರ ಭರ್ತಿಯಾಗದೆ ಉಳಿಯುವ ಸ್ನಾತಕೋತ್ತರ ಸೀಟುಗಳನ್ನು ಈ ಅಭ್ಯರ್ಥಿಗಳಿಗೆ ಹಂಚಿಕೆ ಮಾಡಲಾಗುತ್ತದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟನೆಯಲ್ಲಿ ತಿಳಿಸಿದೆ.
Next Story





