Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿ ಮೋದಿಯೆದುರು ಭಾವುಕರಾದ...

ಪ್ರಧಾನಿ ಮೋದಿಯೆದುರು ಭಾವುಕರಾದ ನ್ಯಾ.ಠಾಕೂರ : ಹೆಚ್ಚಿನ ನ್ಯಾಯಾಧೀಶರನ್ನು ನೀಡಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 April 2016 7:15 PM IST
share
ಪ್ರಧಾನಿ ಮೋದಿಯೆದುರು ಭಾವುಕರಾದ ನ್ಯಾ.ಠಾಕೂರ : ಹೆಚ್ಚಿನ ನ್ಯಾಯಾಧೀಶರನ್ನು ನೀಡಲು ಆಗ್ರಹ

ಹೊಸದಿಲ್ಲಿ,ಎ.24: ಮೊಕದ್ದಮೆಗಳ ಮಹಾಪೂರವನ್ನು ಎದುರಿಸಲು ನ್ಯಾಯಾಧೀಶರ ಸಂಖ್ಯೆಯನ್ನು ಈಗಿನ 21,000 ದಿಂದ 40,000ಕ್ಕೆ ಹೆಚ್ಚಿಸುವಂತೆ ರವಿವಾರ ಇಲ್ಲಿ ಸಭೆಯೊಂದರಲ್ಲಿ ಸರಕಾರಕ್ಕೆ ಮನವಿ ಮಾಡಿಕೊಂಡ ಶ್ರೇಷ್ಠ ನ್ಯಾಯಾಧೀಶ ಟಿ.ಎಸ್.ಠಾಕೂರ್ ಅವರು ಒಂದು ಹಂತದಲ್ಲಿ ತೀವ್ರ ಭಾವುಕರಾದರು. ಪ್ರಧಾನಿ ನರೇಂದ್ರ ಮೋದಿ ಈ ಸಭೆಯಲ್ಲಿ ಉಪಸ್ಥಿತರಿದ್ದರು.

 ತಾನು ಮಾತನಾಡುವ ಸರದಿ ಬಂದಿರದಿದ್ದರೂ ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ಮೋದಿ,ಸಮಸ್ಯೆಗಳನ್ನು ತನ್ನ ಸರಕಾರವು ಗಂಭೀರವಾಗಿ ಪರಿಗಣಿಸಿದೆ ಮತ್ತು ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಲು ಖಂಡಿತವಾಗಿಯೂ ಪ್ರಯತ್ನಿಸುತ್ತೇನೆ ಎಂದು ನ್ಯಾಯಾಂಗಕ್ಕೆ ಭರವಸೆ ನೀಡಿದರು.

ಮುಖ್ಯಮಂತ್ರಿಗಳು ಮತ್ತು ಉಚ್ಚ ನ್ಯಾಯಾಲಯಗಳ ಮುಖ್ಯ ನ್ಯಾಯಾಧೀಶರ ಸಭೆಯಲ್ಲಿ ಮಾತನಾಡುತ್ತಿದ್ದ ನ್ಯಾ.ಠಾಕೂರ್ ಅವರು,ದೇಶದ ಅಭಿವೃದ್ಧಿಗಾಗಿ ಸಮಯಕ್ಕೆ ಸರಿಯಾಗಿ ಕ್ರಮಗಳನ್ನು ಕೈಗೊಳ್ಳುವಂತೆ ನಾನು ನಿಮ್ಮನ್ನು ಕೇಳಿಕೊಳ್ಳುತ್ತಿದ್ದೇನೆ. ನೀವು ಸಂಪೂರ್ಣ ಹೊರೆಯನ್ನು ನ್ಯಾಯಾಂಗದ ಮೇಲೆಯೇ ಹೊರಿಸುವಂತಿಲ್ಲ. ನ್ಯಾಯಾಧೀಶರ ಸಾಮರ್ಥ್ಯಕ್ಕೂ ಒಂದು ಮಿತಿಯಿದೆ ಎಂದು ಹೇಳಿದರು.

ಭಾರತದಲ್ಲಿ ನ್ಯಾಯಾಂಗದ ಕಾರ್ಯ ನಿರ್ವಹಣೆಯ ಬಗ್ಗೆ ವಿದೇಶಗಳಲ್ಲಿಯ ನ್ಯಾಯಾಧೀಶರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ ಎಂದ ಅವರು,ಭಾರತದಲ್ಲಿ ಸರಾಸರಿ ಓರ್ವ ನ್ಯಾಯಾಧೀಶರು ವರ್ಷಕ್ಕೆ 2,600 ಪ್ರಕರಣಗಳನ್ನು ನಿರ್ವಹಿಸುತ್ತಿದ್ದಾರೆ. ಅದೇ ಅಮೆರಿಕದಲ್ಲಿ ಈ ಪ್ರಮಾಣ 81 ಪ್ರಕರಣಗಳು ಮಾತ್ರ. ಅಧೀನ ನ್ಯಾಯಾಲಯಗಳು ವರ್ಷಕ್ಕೆ ಎರಡು ಕೋಟಿ ಪ್ರಕರಣಗಳನ್ನು ನಿಭಾಯಿಸುತ್ತಿವೆ ಎಂದರು.

ನ್ಯಾಯಾಧೀಶರ ಸಂಖ್ಯೆಯನ್ನು ಪ್ರತಿ 10 ಲಕ್ಷ ಜನಕ್ಕೆ 10ರಿಂದ 50ಕ್ಕೆ ಹೆಚ್ಚಿಸುವಂತೆ ಕಾನೂನು ಆಯೋಗವು 1987ರಿಂದಲೂ ಶಿಫಾರಸು ಮಾಡುತ್ತಲೇ ಬಂದಿದೆ. ಆದರೆ ಯಾವುದೇ ಪ್ರಗತಿಯಾಗಿಲ್ಲ ಎಂದ ನ್ಯಾ.ಠಾಕೂರ್, ಭಾಷಣಗಳನ್ನು ಕೇಳುತ್ತಲೇ ಇದ್ದೇವೆ,ಆದರೆ ನಿಜಕ್ಕೂ ಏನೂ ಆಗುತ್ತಿಲ್ಲ. ಹೌದು,ಈ ಬಗ್ಗೆ ರಾಜ್ಯಗಳು ಉಪಕ್ರಮ ತೆಗೆದುಕೊಳ್ಳಬೇಕು ಎಂದು ಕೇಂದ್ರವು ಹೇಳುತ್ತಿದೆ ಮತ್ತು ರಾಜ್ಯಗಳು ಕೇಂದ್ರದತ್ತ ಬೆಟ್ಟು ಮಾಡುತ್ತಿವೆ. ಹಗ್ಗ ಜಗ್ಗಾಟ ಮುಂದುವರಿಯುತ್ತಲೇ ಇದೆ ಎಂದರು.

ಉನ್ನತ ಕಾರ್ಪೊರೇಟ್ ಕಕ್ಷಿದಾರರಿಗಾಗಿ ವಾಣಿಜ್ಯ ನ್ಯಾಯಾಲಯಗಳನ್ನು ಸ್ಥಾಪಿಸುವ ಪ್ರಧಾನಿ ಮೋದಿಯವರ ಯೋಜನೆಯನ್ನೂ ತರಾಟೆಗೆತ್ತಿಕೊಂಡ ಅವರು, ಹಾಲಿ ಇರುವ ನ್ಯಾಯಾಧೀಶರನ್ನೇ ಈ ಯೋಜನೆಗೆ ಬಳಸಿಕೊಳ್ಳಲು ಸರಕಾರವು ಯೋಜಿಸುತ್ತಿದ್ದರೆ ಈ ವ್ಯವಸ್ಥೆ ಫಲ ನೀಡುವುದಿಲ್ಲ. ಹಳೆಯ ಮದ್ಯವನ್ನೇ ಹೊಸ ಬಾಟ್ಲಿಯಲ್ಲಿ ತುಂಬಿದರೆ ಕೆಲಸವಾಗುವುದಿಲ್ಲ ಎಂದು ಕುಟುಕಿದರು.

ಪ್ರಧಾನಿಯವರ ಮಹತ್ವಾಕಾಂಕ್ಷೆಯ ಎಫ್‌ಡಿಐ,ಮೇಕ್ ಇನ್ ಇಂಡಿಯಾ ಇತ್ಯಾದಿಗಳು ಯಶಸ್ವಿಯಾಗಲು ಹೆಚ್ಚಿನ ನ್ಯಾಯಾಧೀಶರ ನೇಮಕ ಮತ್ತು ತ್ವರಿತ ನ್ಯಾಯದಾನ ವ್ಯವಸ್ಥೆ ಅಗತ್ಯವಾಗಿದೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X