Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಹಿಳೆ, ಮಕ್ಕಳ ಕಲ್ಯಾಣ ಯೋಜನೆ ಸಮರ್ಪಕ...

ಮಹಿಳೆ, ಮಕ್ಕಳ ಕಲ್ಯಾಣ ಯೋಜನೆ ಸಮರ್ಪಕ ಅನುಷ್ಠಾನವಾಗಲಿ: ಸಚಿವೆ ಉಮಾಶ್ರೀ

ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ24 April 2016 9:25 PM IST
share
ಮಹಿಳೆ, ಮಕ್ಕಳ ಕಲ್ಯಾಣ ಯೋಜನೆ ಸಮರ್ಪಕ ಅನುಷ್ಠಾನವಾಗಲಿ: ಸಚಿವೆ ಉಮಾಶ್ರೀ

 ಚಿಕ್ಕಮಗಳೂರು, ಎ.24: ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ಯೋಜನೆ ಮತ್ತು ಕಾರ್ಯಕ್ರಮಗಳನ್ನು ಅಧಿಕಾರಿಗಳು ಹಾಗೂ ಸಿಬ್ಬಂದಿ ಸಮನ್ವಯದೊಂದಿಗೆ ಪ್ರತಿಶತ ಶೇ.100ರಷ್ಟು ಕಾರ್ಯರೂಪಕ್ಕೆ ತರಬೇಕೆಂದು ಕನ್ನಡ ಮತ್ತು ಸಂಸ್ಕೃತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಉಮಾಶ್ರೀ ಸೂಚಿಸಿದರು.

ಅವರು ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾ ಡಿದರು.

ಸರಕಾರ ವಿಶೇಷವಾಗಿ ಮಹಿಳೆಯರು ಸೇರಿದಂತೆ ಮಕ್ಕಳ ಕಲ್ಯಾಣ ಅಭಿವೃದ್ಧಿಗೆ ಅನೇಕ ಯೋಜನೆ ಹಾಗೂ ಕಾರ್ಯ ಕ್ರಮಗಳನ್ನು ಹಮ್ಮಿಕೊಂಡಿದೆ. ಇವುಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೇರಿದಂತೆ ಇತರ ಇಲಾಖೆಗಳ ಸಮನ್ವಯದೊಂದಿಗೆ ಜಾರಿಮಾಡಬೇಕು ಎಂದು ತಿಳಿಸಿದರು.

ಮಕ್ಕಳ ಪೌಷ್ಟಿಕತೆ ನೀಗಿಸಲು ನೀಡುತ್ತಿರುವ ಆಹಾರ ಪದಾರ್ಥವನ್ನು ಪರೀಕ್ಷಿಸಿ ನಂತರದಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ನಂತರ ಅಂಗನವಾಡಿಗಳಲ್ಲಿ ಅದರ ಗುಣಮಟ್ಟ ಪರಿಶೀಲಿಸಿ ಮಕ್ಕಳಿಗೆ ವಿತರಿಸಬೇಕು. ಆದರೆ ಜಿಲ್ಲೆಯಲ್ಲಿ ಸರಿಯಾಗಿ ಎರಡು ಬಾರಿ ಪರಿಶೀಲಿಸದೆ ಇರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ತಪ್ಪಿದ್ದಲ್ಲಿ ಕಾರಣ ಕೇಳಿ ನೋಟಿಸ್ ಜಾರಿಮಾಡಬೇಕು ಎಂದು ಇಲಾಖೆ ಜಂಟಿ ನಿರ್ದೇಶಕಿಗೆ ಎಂದು ಸೂಚಿಸಿದರು.

ಅಂಗನವಾಡಿಗಳಿಗೆ ಆಹಾರ ಪದಾರ್ಥ ಗಳನ್ನು ಸರಬರಾಜು ಮಾಡುವ ವಾಹನಗಳಿಗೆ ಜಿಪಿಆರ್‌ಎಸ್‌ಗಳನ್ನು ಅಳವಡಿಸುವುದು ಸೂಕ್ತ ಎಂದು ಸಲಹೆ ನೀಡಿದ ಅವರು, ಮಕ್ಕಳಿಗೆ ಆಹಾರ ಪದಾರ್ಥಗಳು ಸರಿಯಾಗಿ ಸರಬರಾಜು ಮಾಡಲಾಗುತ್ತಿದೆಯೇ ಎಂದು ಆಗಿಂದಾಗ್ಗೆ ಪರಿಶೀಲಿಸುತ್ತಿರಬೇಕು. ಸರಕಾರ ಪ್ರಸ್ತುತ ಸಾಲಿನಿಂದ ಕೆನೆ ಸಹಿತ ಹಾಲು ವಿತರಣೆ ಮಾಡಲು ಮುಂದಾಗಲಿದೆ. ಮುಂದಿನ ದಿನಗಳಲ್ಲಿ ತಮ್ಮಲ್ಲಿರುವ ಹಳೆ ದಾಸ್ತಾನು ಪೂರ್ಣ ಪ್ರಮಾಣದಲ್ಲಿ ಖಾಲಿ ಮಾಡಿದ ನಂತರ ಹೊಸ ಕೆನೆ ಸಹಿತ ಹಾಲು ವಿತರಿಸಬೇಕು ಸೂಚಿಸಿದರು.

ಜಿಲ್ಲೆಯ ಪ್ರತಿಯೊಂದು ಅಂಗನವಾಡಿ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಉಂಟಾಗದಂತೆ ಎಚ್ಚರವಹಿಸಬೇಕು. ಅದರಲ್ಲಿಯೂ ವಿಶೇಷವಾಗಿ ನೀರಿನ ಸಂಪರ್ಕ ಹಾಗೂ ಶೌಚಾಲಯ ಇರಬೇಕು. ಮಹಿಳಾ ಮತ್ತು ಮಕ್ಕಳ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಇಲಾಖೆಯಿಂದ ಸರಕಾರದ ಯೋಜನೆಗಳ ಜಾರಿಯಲ್ಲಿ ತೃಪ್ತಿ ಕಂಡುಬಂದಿಲ್ಲ. ಜಿಲ್ಲಾಧಿಕಾರಿ ಹಾಗೂ ಜಿಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು.

 ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಪಿ.ಷಡಕ್ಷರಿಸ್ವಾಮಿ, ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ಡಾ.ಆರ್. ರಾಗಪ್ರಿಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಸವರಾಜಪ್ಪ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X