ಧರ್ಮಸ್ಥಳದಲ್ಲಿ ಶೃಂಗೇರಿ ಜಗದ್ಗುರು

ಬೆಳ್ತಂಗಡಿ, ಎ.24: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದಕ್ಷಿಣಾಮ್ನಾಯ ಶೃಂಗೇರಿ ಶ್ರೀ ಶಾರದಾ ಪೀಠದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿ ಮತ್ತು ಅವರ ಶಿಷ್ಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿ ಶನಿವಾರ ಪುರಪ್ರವೇಶ ಮಾಡಿದ್ದಾರೆ.
ಇಬ್ಬರೂ ಸ್ವಾಮೀಜಿಗಳನ್ನು ಮುಖ್ಯ ಪ್ರವೇಶದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು. ರವಿವಾರ ಸ್ವಾಮೀಜಿದ್ವಯರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಮಾಡಿದರು. ಬಳಿಕ ಶ್ರೀ ಕ್ಷೇತ್ರದಲ್ಲಿರುವ ಕಾರ್ ಮ್ಯೂಸಿಯಂ, ಧರ್ಮಸ್ಥಳ ಶ್ರೀ ಮಂಜುನಾಥ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದಲ್ಲಿರುವ ಪುರಾತನ ತಾಳೆಗ್ರಂಥಗಳನ್ನು ವೀಕ್ಷಿಸಿದರು. ಈ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ, ಡಿ. ಸುರೇಂದ್ರ ಕುಮಾರ್, ಡಿ. ಹರ್ಷೇಂದ್ರ ಕುಮಾರ್ ಇದ್ದರು.
Next Story





