Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪಾಕ್ ಸಿಖ್ ರಾಜಕಾರಣಿಯ ಕೊಲೆ : ಹಿಂದೂ...

ಪಾಕ್ ಸಿಖ್ ರಾಜಕಾರಣಿಯ ಕೊಲೆ : ಹಿಂದೂ ರಾಜಕಾರಣಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ25 April 2016 8:42 AM IST
share
ಪಾಕ್ ಸಿಖ್ ರಾಜಕಾರಣಿಯ ಕೊಲೆ : ಹಿಂದೂ ರಾಜಕಾರಣಿಯ ಬಂಧನ

ಪೇಶಾವರ, ಎ. 25: ವಾಯವ್ಯ ಪಾಕಿಸ್ತಾನದಲ್ಲಿ ಪ್ರಮುಖ ಸಿಕ್ಖ್ ರಾಜಕಾರಣಿಯೊಬ್ಬರ ಹತ್ಯೆಗೆ ಸಂಬಂಧಿಸಿದಂತೆ ಇಮ್ರಾನ್‌ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಮುಖಂಡ ಹಾಗೂ ಜಿಲ್ಲಾಮಟ್ಟದ ಹಿಂದೂ ಧುರೀಣರೊಬ್ಬರನ್ನು ಬಂಧಿಸಲಾಗಿದೆ. ತಾನೇ ಈ ಹತ್ಯೆ ಮಾಡಿರುವುದಾಗಿ ಪಾಕಿಸ್ತಾನಿ ತಾಲಿಬಾನ್ ಹೇಳಿಕೊಂಡ ಮರುದಿನವೇ ಪ್ರಕರಣ ಮತ್ತೊಂದು ಮಹತ್ವದ ತಿರುವು ಪಡೆದಿದೆ.

ಸ್ವಾತ್ ಜಿಲ್ಲೆಯ ಪಾಲಿಕೆ ಸದಸ್ಯ ಹಾಗೂ ತೆಹ್ರೀಕ್-ಇ-ಇನ್ಸಾಫ್ ಪಕ್ಷದ ಅಲ್ಪಸಂಖ್ಯಾತ ಮುಖಂಡ ಬಲದೇವ್ ಕುಮಾರ್ ಅವರು ಡಾಕ್ಟರ್ ಸರ್ದಾರ್ ಸೂರನ್ ಸಿಂಗ್ ಹತ್ಯೆಯಲ್ಲಿ ಷಾಮೀಲಾಗಿದ್ದಾರೆ ಎಂಬ ಆರೋಪದಲ್ಲಿ ಅವರನ್ನು ಬಂಧಿಸಲಾಗಿದೆ.

52 ವರ್ಷ ವಯಸ್ಸಿನ ಸಿಂಗ್ ಖೈಬರ್ ಅವರು ಅಲ್ಪಸಂಖ್ಯಾತ ವ್ಯವಹಾರಗಳಿಗೆ ಸಂಬಂಧಿಸಿದಂತೆ ಪತುಂಕ್ವಾ ಮುಖ್ಯಮಂತ್ರಿಗಳ ವಿಶೇಷ ಸಹಾಯಕರಾಗಿ ಸೇವೆ ಸಲ್ಲಿಸುತ್ತಿದ್ದರು. ಶುಕ್ರವಾರ ಈ ಹತ್ಯೆ ನಡೆದಿದ್ದು, ಪಾಕಿಸ್ತಾನಿ ತಾಲಿಬಾನ್ ಶನಿವಾರ ಈ ಹತ್ಯೆಯನ್ನು ತಾನೇ ಮಾಡಿದ್ದಾಗಿ ಹೇಳಿಕೊಂಡಿತ್ತು. ಆದರೆ ತೆಹ್ರೀಕ್-ಇ-ಇನ್ಸಾಫ್ ಪಕ್ಷ ಈ ಸಂಬಂಧ ಹೇಳಿಕೆ ನೀಡಿ ವಿಶೇಷ ಕಾರ್ಯಾಚರಣೆ ಪಡೆಯ ಶಾರ್ಪ್‌ ಶೂಟರ್‌ಗಳು ಯಶಸ್ವಿಯಾಗಿ ಸರ್ದಾರ್ ಸರೂನ್ ಸಿಂಗ್ ಅವರನ್ನು ತವರು ಜಿಲ್ಲೆ ಬುನೇರ್‌ನಲ್ಲಿ ಹತ್ಯೆ ಮಾಡಿದ್ದಾಗಿ ಸ್ಪಷ್ಟಪಡಿಸಿದೆ.

ಮಲಖಂಡ್ ವಿಭಾಗದ ಉಪ ಐಜಿ ಅಝಾದ್ ಖಾನ್ ಅವರು ಕುಮಾರ್ ಬಂಧನವನ್ನು ಖಚಿತಪಡಿಸಿದ್ದಾರೆ. ಬಂಧನದ ಬಳಿಕ ಕುಮಾರ್‌ನನ್ನು ಅಜ್ಞಾತ ಸ್ಥಳಕ್ಕೆ ವಿಚಾರಣೆಗೆ ಕರೆದೊಯ್ಯಲಾಗಿದೆ.

ಸಿಂಗ್ ಹತ್ಯೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಘಟನೆ ಬಗ್ಗೆ ವಿಚಾರಣೆಗೆ ತನಿಖಾ ಆಯೋಗ ನೇಮಕ ಮಾಡಲಾಗಿದೆ. ಸಿಂಗ್ ಅವರು ಮೂಲತಃ ವೈದ್ಯರಾಗಿದ್ದು, ಟಿವಿ ನಿರೂಪಕರಾಗಿ, ರಾಜಕಾರಣಿಯಾಗಿ ಜನಪ್ರಿಯರಾಗಿದ್ದರು. ಪಾಕಿಸ್ತಾನಿ ಜಮಾತ್ ಇ ಇಸ್ಲಾಮಿ ಸದಸ್ಯರಾಗಿಯೂ ಒಂಬತ್ತು ವರ್ಷದಿಂದ ಕಾರ್ಯ ನಿರ್ವಹಿಸುತ್ತಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X