ಉಳ್ಳಾಲ :ಚೂರಿ ಇರಿತ, ಯುವಕನಿಗೆ ಗಾಯ
ಉಳ್ಳಾಲ, ಎ. 25: ಉಳ್ಳಾಲ ನಿವಾಸಿ ನಸ್ಫಾಲ್ (35) ಎಂಬವರು ಇಂದು ಮುಂಜಾನೆ 4 ಗಂಟೆಯ ಸುಮಾರಿಗೆ ಬೈಕ್ ನಲ್ಲಿ ದಕ್ಕೆಗೆ ಹೋಗುತ್ತಿದ್ದ ಸಂದರ್ಭ ಉಳ್ಳಾಲದಲ್ಲಿ ಚೂರಿ ಇರಿತಕ್ಕೊಳಗಾಗಿ ಗಾಯಗೊಂಡಿದ್ದಾರೆ.
ಚೂರಿ ಇರಿತದಿಂದ ನಸ್ಫಾಲ್ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚೂರಿ ಇರಿದವರ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲದಲ್ಲಿ ಯುವಕನ ಕೊಲೆಯತ್ನ ಘಟನೆಯ ಕುರಿತಂತೆ ಇಂದು ಗೃಹಸಚಿವರೊಂದಿಗೆ ಸಮಾಲೋಚನೆ ಮಾಡಿ ನೈಜ ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಒತ್ತಾಯಿಸಿದ್ದೇನೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದರು.
ಪತ್ರಿಕೆಯೊಂದಿಗೆ ಮಾತನಾಡಿದ ಅವರು ಘಟನೆಯ ಹಿನ್ನೆಲೆಯಲ್ಲಿ ಇಂದು ಗಾಯಾಳುವನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ್ದು ಆರೋಪಿಯನ್ನು ಶೀಘ್ರ ಪತ್ತೆ ಹಚ್ಚುವಂತೆ ಮಂಗಳೂರು ಪೊಲೀಸ್ ಕಮೀಷನರ್ ಅವರಿಗೆ ಸೂಚಿಸಿದ್ದೇನೆ.ಆರೋಪಿಗಳು ಯಾರೇ ಆಗಿರಲಿ ನೈಜವಾದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಬೇಕು ಮತ್ತು ಆರೋಪಿಗಳ ಪತ್ತೆಗೆ ಸ್ಥಳೀಯರು ಸಹಕರಿಸಬೇಕೆಂದು ಅವರು ಹೇಳಿದರು.







