Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿಯಲ್ಲಿ ಅಂಬೇಡ್ಕರ್‌ರವರ...

ಮಂಗಳೂರು ವಿವಿಯಲ್ಲಿ ಅಂಬೇಡ್ಕರ್‌ರವರ 125ನೇ ಜನ್ಮದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ25 April 2016 6:34 PM IST
share
ಮಂಗಳೂರು ವಿವಿಯಲ್ಲಿ ಅಂಬೇಡ್ಕರ್‌ರವರ 125ನೇ ಜನ್ಮದಿನಾಚರಣೆ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಪರಿಶಿಷ್ಟ ಜಾತಿ ಮತ್ತು ಪಂಗಡ ಘಟಕದ ಆಶ್ರಯದಲ್ಲಿ ಸೋಮವಾರ ಮಂಗಳೂರು ವಿವಿಯ ಮಂಗಳಾ ಸಭಾಂಗಣದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆಯ ಕಾರ್ಯಕ್ರಮವು ನಡೆಯಿತು.

  ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯಸಭಾ ಸದಸ್ಯ ಹಾಗೂ ಭಾರತ ಸರಕಾರದ ಯೋಜನಾ ಆಯೋಗದ ಮಾಜಿ ಸದಸ್ಯ ಪ್ರೊ.ಬಿ.ಎಲ್.ಮುಂಗೇಕರ್ ಅವರು ನೆರವೇರಿಸಿದರು.

ಬಳಿಕ ಅವರು ‘ಆಧುನಿಕ ಭಾರತದ ನಿರ್ಮಾಣದಲ್ಲಿ ಅಂಬೇಡ್ಕರ್ ಅವರ ಪಾತ್ರ’ ಎಂಬ ವಿಷಯದಲ್ಲಿ ಮಾತನಾಡುತ್ತಾ, ಅಸ್ಪ್ರಶ್ಯತೆಯ ನಿವಾರಣೆಗಾಗಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಲವಾರು ರೀತಿಯಲ್ಲಿ ಹೋರಾಟ ನಡೆಸಿ ಸಮಾನತೆ ಮತ್ತು ಅಭಿವೃದ್ದಿಗಾಗಿ ಪಣತೊಟ್ಟಿದ್ದರು. ಆದರೂ ದೆಹಲಿ, ಮುಂಬಾಯಿ, ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ಇಂತಹ ಅಸ್ಪ್ರಶ್ಯತೆಯ ಸಮಸ್ಯೆ ಕಡಿಮೆ ಇದ್ದರೂ ಕೆಲವು ಗ್ರಾಮೀಣ ಭಾಗಗಳಲ್ಲಿ ಇನ್ನೂ ಜೀವಂತವಾಗಿರುವುದು ದುರಂತ ಎಂದು ಅಭಿಪ್ರಾಯ ಪಟ್ಟರು.

ಭಾರತವು ಪ್ರಜಾಪ್ರಭುತ್ವ, ಸಮಾನತೆ, ಜಾತ್ಯಾತೀತ ನೆಲೆಯಲ್ಲಿ ಇಡೀ ಜಗತ್ತಿಗೆ ಮಾದರಿಯಾಗಿದೆ. ಆಧುನಿಕ ಭಾರತದ ನಿರ್ಮಾಣದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಕೊಡುಗೆ ಅಪಾರವಾದುದು. ಅವರು ಕೇವಲ ದಲಿತ ಸಮುದಾಯದ ನಾಯಕರು ಮಾತ್ರ ಅಲ್ಲ ಅವರು ಇಡೀ ಭಾರತದ ಜನರ ನಾಯಕರಾಗಿದ್ದಾರೆ ಎಂದು ಹೇಳಿದರು.

ಅಂಬೇಡ್ಕರ್ ಅವರು ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಿದ್ದರು. ಶಿಕ್ಷಣವು ಗುಣಮಟ್ಟ ಇಂದು ಕಡಿಮೆಯಾಗುತ್ತಿದೆ. ವಿಶ್ವವಿದ್ಯಾನಿಲಯಗಳು ಗುಣಮಟ್ಟದ ಶಿಕ್ಷಣದ ಜೊತೆಗೆ ಸಾಮಾಜಿಕ ಬದಲಾವಣೆ, ಸಮಾಜದ ಅಭಿವದ್ದಿಗೆ ಸಹಕಾರಿಯಾಗುವಂತಿರಬೇಕು. ಅಲ್ಲದೆ ವಿವಿಗಳು ಜ್ಞಾನ ತುಂಬುವ ಕೇಂದ್ರವಾಗಬೇಕು ಎಂದು ಹೇಳಿದರು. ಮಂಗಳೂರು ವಿವಿಯು 34ರ ಹರೆಯದ ವಿವಿಯದರೂ ಉತ್ತಮ ಸಾಧನೆಯೊಂದಿಗೆ ಗುರುತಿಸಿಕೊಂಡಿರುವುರು ಶ್ಲಾಘನೀಯವಾಗಿದೆ ಎಂದರು.

    ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಮಂಗಳೂರು ವಿವಿ ಕುಲಪತಿ ಪ್ರೊ.ಕೆ.ಭೈರಪ್ಪ ಅವರು ಮಂಗಳೂರು ವಿಶ್ವವಿದ್ಯಾನಿಲಯವು ಅಂಬೇಡ್ಕರ್ ಅವರ 125ನೇ ಜನ್ಮ ದಿನಾಚರಣೆಯನ್ನು ವರ್ಷವಿಡೀ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ವಿಶಿಷ್ಟವಾಗಿ ಆಚರಿಸಿ ಅಂಬೇಡ್ಕರ್ ಅವರ ಚಿಂತನೆಗಳನ್ನು ವಿದ್ಯಾರ್ಥಿಗಳಲ್ಲಿ ಮೈಗೂಡಿಸಿಕೊಳ್ಳುವ ಕೆಲಸವನ್ನು ಮಾಡುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಪ್ರೊ.ಬಿ.ಎಲ್.ಮುಂಗೇಕರ್ ಅವರನ್ನು ಸನ್ಮಾನಿಸಲಾಯಿತು. ಅಲ್ಲದೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಮಂಗಳೂರು ವಿವಿ ಕುಲಸಚಿವ ಪ್ರೊ.ಟಿ.ಡಿ.ಕೆಂಪರಾಜು, ಅಂಬೇಡ್ಕರ್ ಅಧ್ಯಯನ ಕೇಂದ್ರದ ಪ್ರೊ.ವಿಶ್ವನಾಥ್, ಮಂಗಳೂರು ವಿವಿ ಎಸ್‌ಸಿ, ಎಸ್‌ಟಿ ಸೆಲ್‌ನ ಸಬಿತಾ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X