Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾನೂನುಬಾಹಿರ ಮೀನುಗಾರಿಕೆ: ಒಕ್ಕೂಟದಿಂದ...

ಕಾನೂನುಬಾಹಿರ ಮೀನುಗಾರಿಕೆ: ಒಕ್ಕೂಟದಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ25 April 2016 10:07 PM IST
share
ಕಾನೂನುಬಾಹಿರ ಮೀನುಗಾರಿಕೆ: ಒಕ್ಕೂಟದಿಂದ ಧರಣಿ

ಕಾರವಾರ, ಎ.25: ಕ್ರಮಬದ್ಧವಲ್ಲದ ಮೀನುಗಾರಿಕೆಯನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ನಾಡದೋಣಿ ಮತ್ತು ಸಾಂಪ್ರದಾಯಿಕ ಮೀನುಗಾರರ ಒಕ್ಕೂಟ ಸೋಮವಾರ ಧರಣಿ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು.

ನಗರದ ಕಡಲ ತೀರದ ಮಕ್ಕಳ ಉದ್ಯಾನವನದಲ್ಲಿ ಸೇರಿದ ಜಿಲ್ಲೆಯ ವಿವಿಧ ಮೀನುಗಾರಿಕಾ ಸಂಘಟನೆಯ ಪದಾಧಿಕಾರಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದವು. ಬಳಿಕ ತಾವು ತಂದ ಮನವಿ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿ ಶೀಘ್ರವೇ ಕ್ರಮಕೈಗೊಳ್ಳುವಂತೆ ಆಗ್ರಹಿಸಿದರು.

ಜಿಲ್ಲೆಯಲ್ಲಿ ಅಕ್ರಮವಾಗಿ ಕಾನೂನು ಬಾಹಿರವಾಗಿ ಲೈಟ್ ಫಿಶಿಂಗ್ ನಡೆಯುತ್ತಿದ್ದು, ಮೀನುಗಾರರ ಬದುಕಿಗೆ ಕಂಟಕಪ್ರಾಯವಾಗಿರುವ ಈ ಅವೈಜ್ಞ್ಞಾನಿಕ ಮೀನುಗಾರಿಕೆ ಪದ್ಧತಿ ತಕ್ಷಣ ನಿಷೇಧಿಸದಿದ್ದರೆ, ಮುಂದಿನ ದಿನಗಳಲ್ಲಿ ಸರಕಾರ ಸಾಂಪ್ರದಾಯಿಕ ಮೀನುಗಾರರಿಂದ ಉಗ್ರವಾದ ಹೋರಾಟ ಎದುರಿಸ ಬೇಕಾಗುವುದು ಎಂದು ಸಾಂಪ್ರದಾಯಿಕ ಮೀನುಗಾರರ ಸಂಘಟನೆಯ ಮುಖಂಡ ಸದಾನಂದ ಹರಿಕಂತ್ರ ಎಚ್ಚರಿಕೆ ನೀಡಿದರು. ಜಿಲ್ಲೆಯ ಕರಾವಳಿಯುದ್ದಕ್ಕೂ ಲಕ್ಷಕ್ಕೂ ಹೆಚ್ಚಿನ ಮೀನುಗಾರರು ಮೀನುಗಾರಿಕೆಯನ್ನೇ ನಂಬಿ ಬದುಕುತ್ತಿದ್ದಾರೆ. ಮೀನುಗಾರಿಕೆ ಎಂಬುದು ವಿಶಿಷ್ಟ ಕಲೆ, ಮೀನಿನ ಸಂಪತ್ತು ದೇಶದ ಸಂಪತ್ತಾಗಿದೆ. ನೈಸರ್ಗಿಕ ನಿಯಮಾನುಸಾರ ಮೀನುಗಾರಿಕೆ ನಡೆಸಬೇಕು. ನಿಸರ್ಗದ ನಿಯಮಾನುಸಾರ ಅದನ್ನೇ ನಂಬಿ ಸಾಂಪ್ರದಾಯಿಕ ಮೀನುಗಾರರು ಜೀವನ ನಡೆಸುತ್ತಿದ್ದಾರೆ. ಪ್ರಕೃತಿ ನಿಯಮಾನುಸಾರ ಮೀನುಗಾರಿಕೆ ನಡೆಸಿದ್ದರಿಂದ ಇಲ್ಲಿಯವರೆಗೆ ಮೀನುಗಾರಿಕೆ ಉದ್ಯೋಗ ಉಳಿದುಕೊಂಡು ಬಂದಿದೆ. ಈ ಬಗ್ಗೆ ಮೀನುಗಾರರು ಎಂದು ಹೇಳಿಕೊಳ್ಳಲು ಹೆಮ್ಮೆ ಎನಿಸುತ್ತದೆ ಎಂದರು.

ಇತ್ತೀಚಿನ ದಿನಗಳಲ್ಲಿ ಮೀನುಗಾರಿಕೆ ಬಗ್ಗೆ ಅವಲೋಕಿಸಿದರೆ, ಮೀನುಗಾರಿಕೆ ಉದ್ಯೋಗದ ಮೇಲೆ ಕರಿ ಛಾಯೆ ಆವರಿಸಿದ್ದು, ಭಯ, ಭೀತಿಯ ವಾತಾವರಣ ಉಂಟಾಗಿದೆ. ಅವೈಜ್ಞ್ಞಾನಿಕ ರೀತಿಯ ಯಾಂತ್ರೀಕೃತ ಮೀನುಗಾರಿಕೆಯ ದುರ್ಬಳಕೆಯಿಂದ ಅದೆಷ್ಟೋ ಮೀನಿನ ಸಂತತಿ ನಾಶಗೊಂಡಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಆದ್ದರಿಂದ ರಾಜ್ಯ ಸರಕಾರ ಕೂಡಲೇ ಎಚ್ಚೆತ್ತುಕೊಂಡು ಈ ಅಕ್ರಮ, ಕಾನೂನು ಬಾಹಿರ ಪದ್ಧತಿಯನ್ನು ನಿಷೇಧಿಸಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಜಿಲ್ಲಾಧಿಕಾರಿಗಳ ಅನುಪಸ್ಥಿತಿಯಲ್ಲಿ ಸಹಾಯಕ ಆಯುಕ್ತ ಪ್ರಶಾಂತ್‌ಕುಮಾರ್ ಬಿ. ಎಸ್. ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿದರು. ನಂತರ ಮೀನುಗಾರರನ್ನುದ್ದೇಶಿಸಿ ಮಾತನಾಡಿದ ಅವರು, ಈ ಅವೈಜ್ಞಾನಿಕ ಪದ್ಧತಿಯನ್ನು ನಿಷೇಧಿಸುವುದರ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು. ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಕೂಡಲೇ ಸಾಂಪ್ರದಾಯಿಕ ಮೀನುಗಾರ ಮುಖಂಡರ ಸಭೆ ಕರೆದು, ಚರ್ಚಿಸಿ ಸರಕಾರಕ್ಕೆ ವರದಿ ಕಳಿಸಲಾಗುವುದು ಎಂದು ಭರವಸೆ ನೀಡಿದರು.

ಈ ಸಂ

ರ್ಭದಲ್ಲಿ ಜಿಲ್ಲೆಯ ವಿವಿಧ ತಾಲೂಕುಗಳ ಮೀನುಗಾರರ ಪ್ರಮುಖರಾದ ಮಹದೇವ್ ಕುಮಟೇಕರ, ದೇವರಾಯ್ ಸೈಲ್, ಸುರೇಶ್ ಹರಿಕಂತ್ರ, ನಾಗಪ್ಪ ಹರಿಕಂತ್ರ, ರಾಮಕೃಷ್ಣ ತಾಂಡೇಲ್, ಸುದೇಶ ಸಾರಂಗ್, ರಾಜೇಂದ್ರ ನಾವಗೇ, ಪ್ರಶಾಂತ ಮೆಹ್ತಾ, ಸಂತೋಷ್ ಹರಿಕಂತ್ರ, ವಿಠ್ಠಲ್ ಹರಿಕಂತ್ರ, ಕೃಷ್ಣ ಹರಿಕಂತ್ರ, ರೋಹಿದಾಸ ಬಾನಾವಳಿ, ವಿಷ್ಣು ಕೊಚ್ರೇಕರ, ಆನಂದು ಸೈಲ್, ಶ್ರೀಪಾದ್ ಖೊಬ್ರೇಕರ ಮುಂತಾದವರು ಸೇರಿದಂತೆ ಜಿಲ್ಲೆಯಾದ್ಯಂತ ಐದುನೂರಕ್ಕೂ ಹೆಚ್ಚು ಮೀನುಗಾರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X