ಜನರ ಜೀವಜಲ ತುಂಗಭದ್ರಾ ಜಲಾಶಯಕ್ಕೆ ಕನ್ನ

ಕೊಪ್ಪಳ, ಎ. 26: ಜನರ ಜೀವ ಜಲ ತುಂಗಭದ್ರಾ ಜಲಾಶಯದಿಂದ ಕಾರ್ಖಾನೆಗಳು ಅಕ್ರಮವಾಗಿ ಪಂಪ್ ಬಳಸಿ ನೀರನ್ನು ಕಳವು ಮಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ.
ಕುಡಿಯಲು ನೀರಿಲ್ಲದೆ ರಾಯಚೂರು, ಬಳ್ಳಾರಿ, ಕೊಪ್ಪಳ ತತ್ತರಿಸುತ್ತಿರುವ ಮಧ್ಯೆ ಕಾರ್ಖಾನೆಗಳು ನದಿ ನೀರನ್ನು ಅಕ್ರಮವಾಗಿ ಬಳಸಿಕೊಳ್ಳುತ್ತಿವೆ ಎಂದು ರೈತರು ದೂರಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈ ಬಗ್ಗೆ ರೊಚ್ಚಿಗೆದ್ದ ಸ್ಥಳೀಯ ರೈತರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಭೋಜನಾಯಕ್ ಮಾತನಾಡಿ, ಕಾರ್ಖಾನೆಗಳು ಅಳವಡಿಸಿರುವ ಅಕ್ರಮ ಪಂಪ್‌ಸೆಟ್‌ಗಳನ್ನು ತೆರವುಗೊಳಿಸುವುದಾಗಿ ಭರವಸೆ ನೀಡಿದರು.
ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ನೀರನ್ನು ಕಳವು ಮಾಡಿರುವ ಬಗ್ಗೆ ಪರಿಶೀಲಿಸಿ ಆರೋಪಿಗಳ, ಅಧಿಕಾರಿಗಳ ವಿರುದ್ಧ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
Next Story





