Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ದಂಪತಿಯ ಹತ್ಯೆ ಪ್ರಕರಣ: 24 ಗಂಟೆಯೊಳಗೆ...

ದಂಪತಿಯ ಹತ್ಯೆ ಪ್ರಕರಣ: 24 ಗಂಟೆಯೊಳಗೆ ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ26 April 2016 6:15 PM IST
share
ದಂಪತಿಯ ಹತ್ಯೆ ಪ್ರಕರಣ:  24 ಗಂಟೆಯೊಳಗೆ ಆರೋಪಿಯ ಬಂಧನ

ಬೆಂಗಳೂರು, ಎ. 26: ಇತ್ತೀಚೆಗೆ ದಂಪತಿಯನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ 24 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಇಲ್ಲಿನ ಪುಲಕೇಶಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಕೆ.ಜಿ.ಹಳ್ಳಿಯ ನ್ಯೂಆನಂದ ಕಾಂಪ್ಲೆಕ್ಸ್ ನಿವಾಸಿ ಬಿ.ಪ್ರೇಮ್‌ಚಂದ್ ಜೈನ್ (35) ಎಂದು ಗುರುತಿಸಿದ್ದು, ಪ್ರಕರಣದ ಮತ್ತೊರ್ವ ಆರೋಪಿ ಚಂದ್ರಶೇಖರ್ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

ಎ.22ರಂದು ದುಷ್ಕರ್ಮಿಗಳು ಫ್ರೇಝರ್ ಟೌನ್‌ನ ಕೋಲ್ಸ್ ರಸ್ತೆಯ ಮೂರು ಅಂತಸ್ತಿನ ಕಟ್ಟಡದಲ್ಲಿ ವಾಸವಾಗಿದ್ದ ಪರ್ವತ್‌ರಾಜ್ (61) ಮತ್ತು ಚಂದ್ರಕಲಾ(55) ದಂಪತಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಮನೆಯ ಮುಂಬಾಗಿಲ ಬೀಗ ಹಾಕಿಕೊಂಡು ಪರಾರಿಯಾಗಿದ್ದರು.

ಮೂರು ದಿನಗಳನಂತರ ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಸಂಶಯಗೊಂಡು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದರು.

ಪ್ರಕರಣ ಸಂಬಂಧ ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಒಡೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ದಂಪತಿ ಶವ ಪತ್ತೆಯಾಗಿತ್ತು. ಇದು ಗಂಭೀರ ಪ್ರಕರಣ ಎಂದು ದೂರು ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ನಗರ ಪೊಲೀಸ್ ಆಯುಕ್ತ ಮೇಘರಿಕ್, ಪೂರ್ವ ವಿಭಾಗದ ಅಪರ ಪೊಲೀಸ್ ಆಯುಕ್ತ ಹರಿಶೇಖರನ್ ಅವರು ಆರು ತಂಡಗಳನ್ನು ಪೂರ್ವ ವಿಭಾಗದ ಡಿಸಿಪಿ ಸತೀಶ್‌ಕುಮಾರ್ ನೇತೃತ್ವದಲ್ಲಿ ರಚಿಸಿದ್ದರು.

ವಿಶೇಷ ತಂಡ ಮೃತರ ಸಂಬಂಧಿಕರು, ಆತ್ಮೀಯರು, ಹಿತೈಷಿಗಳು, ನೆರೆಹೊರೆಯವರನ್ನು ವಿಚಾರಿಸಿ ಮಾಹಿತಿ ಸಂಗ್ರಹಿಸಿದಾಗ ಈ ದಂಪತಿಯ ಆತ್ಮೀಯ ವಲಯದಲ್ಲಿಯೇ ಕೊಲೆ ನಡೆದಿರುವುದನ್ನು ಖಾತರಿಪಡಿಸಿಕೊಂಡಿದೆ. ಇವರ ಮನೆಗೆ ಆಗಿಂದಾಗ್ಗೆ ಬರುತ್ತಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ತಾಂತ್ರಿಕ ವಿಭಾಗದ ಸಹಾಯ ಪಡೆದು ಆರೋಪಿಗಳ ಚಲನ-ವಲನಗಳ ಬಗ್ಗೆ ತನಿಖೆ ನಡೆಸುವಾಗ ಪ್ರೇಮ್‌ಚಂದ್ ಜೈನ್ ಎಂಬಾತನ ಬಗ್ಗೆ ಅನುಮಾನ ವ್ಯಕ್ತಪಡಿಸಿ ಈತನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ತನ್ನ ಸಹಚರ ಚಂದ್ರಶೇಖರ್ ಎಂಬವನೊಂದಿಗೆ ಸೇರಿ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೇಮ್‌ಚಂದ್ ಜೈನ್ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದು, ಕಳೆದ 15 ವರ್ಷಗಳಿಂದ ಈ ದಂಪತಿ ಕುಟುಂಬಕ್ಕೆ ಆತ್ಮೀಯನಾಗಿದ್ದ, ಆಗಾಗ್ಗೆ ಇವರಿಂದ ಸಾಲ ಪಡೆಯುತ್ತಿದ್ದ. ಈ ದಂಪತಿ ಬಳಿ ಅಪಾರ ನಗ ನಗದು ಇರುವುದೆಂದು ಭಾವಿಸಿ ಸಹಚರ ಚಂದ್ರಶೇಖರ್‌ನೊಂದಿಗೆ ಸೇರಿ ಒಳಸಂಚು ನಡೆಸಿ ಇವರನ್ನು ಕೊಲೆ ಮಾಡಿ ಪರಾರಿಯಾಗಿದ್ದ. ಆರೋಪಿ ಪ್ರೇಮ್‌ಚಂದ್‌ನನ್ನು ತೀವ್ರ ವಿಚಾರಣೆಗೊಳಪಡಿಸಿದಾಗ, ಈತನಿಗೆ ಹಣದ ಅವಶ್ಯಕತೆಯಿದ್ದು, ಸ್ನೇಹಿತ ಚಂದ್ರಶೇಖರ್‌ನಿಗೂ ಹಣದ ಅವಶ್ಯಕತೆ ಇದ್ದುದರಿಂದ ಸಾಲದ ರೂಪದಲ್ಲಿ ಹಣ ಕೊಡಿಸುವಂತೆ ಕೇಳಿಕೊಂಡಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಎ.22ರಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಇವರಿಬ್ಬರೂ ಪರ್ವತ್‌ರಾಜ್ ಮತ್ತು ಚಂದ್ರಕಲಾ ಮನೆಗೆ ಬಂದು ಸಾಲವಾಗಿ ಹಣ ಕೇಳಿದ್ದಾರೆ. ಚಂದ್ರಕಲಾ ಅವರು ಚಿನ್ನ ಒತ್ತೆ ಇಟ್ಟರೆ ಸಾಲ ನೀಡುವುದಾಗಿ ತಿಳಿಸಿದ್ದರಿಂದ ಚಿನ್ನಾಭರಣ ತರುವುದಾಗಿ ಹೇಳಿ ಹೋಗಿದ್ದು, ಮತ್ತೆ ಸಂಜೆ 6 ಗಂಟೆಗೆ ಇವರಿಬ್ಬರೂ ದಂಪತಿ ಮನೆಗೆ ಬಂದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಆಭರಣ ತಂದಿರುವುದಾಗಿ ಹೇಳಿ ಹಣ ಕೊಡುವಂತೆ ಕೇಳಿದಾಗ ಚಂದ್ರಕಲಾ ಅವರು ಮೊದಲು ಆಭರಣ ಕೊಡಿ, ಅನಂತರ ನಾನು ಹಣ ನೀಡುತ್ತೇನೆ ಎಂದು ಹೇಳಿದ್ದಾರೆ. ಇದರಿಂದ ಕುಪಿತಗೊಂಡ ಇವರು ದಂಪತಿಗೆ ಚಾಕುವಿನಿಂದ ಮನಬಂದಂತೆ ಹಲವಾರು ಬಾರಿ ಇರಿದು ಕೊಲೆ ಮಾಡಿ ಅವರ ಮನೆಯಲ್ಲಿದ್ದ 50 ಸಾವಿರ ರೂ. ಹಣ, ಚಿನ್ನಾಭರಣ ದೋಚಿ ಯಾರಿಗೂ ಅನುಮಾನ ಬಾರದಂತೆ ಮನೆಗೆ ಬೀಗಗಳನ್ನು ಹಾಕಿ ತಲೆಮರೆಸಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿ ಚಂದ್ರಶೇಖರ್ ನಾಲ್ಕು ವರ್ಷಗಳಿಂದ ಪ್ರೇಮ್‌ಚಂದ್‌ಗೆ ಸ್ನೇಹಿತನಾಗಿದ್ದು, ಈತ ಲೈವ್‌ಬ್ಯಾಂಡ್ ಮತ್ತು ಜೂಜಾಟವಾಡುವ ಚಟ ಹೊಂದಿದ್ದಾನೆ. ಈತನ ಪತ್ತೆಗಾಗಿ ವಿಶೇಷ ತಂಡವನ್ನು ನೇಮಿಸಿ ಅಂತಾರಾಜ್ಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಹುಮಾನ ಘೋಷಣೆ: ಗಂಭೀರ ಸ್ವರೂಪದ ಈ ಪ್ರಕರಣವನ್ನು 24 ಗಂಟೆಯೊಳಗೆ ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಮಾಡಲು ಯಶಸ್ವಿಯಾದ ತಂಡಕ್ಕೆ ನಗರ ಪೊಲೀಸ್ ಆಯುಕ್ತರು ಬಹುಮಾನ ಘೋಷಿಸಿದ್ದಾರೆ.

 ಪುಲಕೇಶಿನಗರ ಉಪವಿಭಾಗದ ಎಸಿಪಿ ನೂರುಲ್ಲಾ ಶರೀಫ್, ಕೆಆರ್ ಪುರ ಉಪವಿಭಾಗದ ಎಸಿಪಿ ಬದ್ರಿನಾಥ್ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ರಮೇಶ್, ವೀರೇಂದ್ರ ಕುಮಾರ್, ಕುಲಕರ್ಣಿ, ನಾಗರಾಜ್ ಮತ್ತು ಪಿಎಸ್‌ಐಗಳಾದ ನಾರಾಯಣಸ್ವಾಮಿ, ಗೌರಿಶಂಕರ್, ಸುದರ್ಶನ ಶೆಟ್ಟಿ , ಮಿರ್ಜಾ ಇಸ್ಮಾಯಿಲ್ ಹಾಗೂ ಅಪರಾಧ ವಿಭಾಗದ ಸಿಬ್ಬಂದಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X