Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಎ.28ರಿಂದ 30ರವರೆಗೆ ಕಾಪುವಿನಲ್ಲಿ 39ನೆ...

ಎ.28ರಿಂದ 30ರವರೆಗೆ ಕಾಪುವಿನಲ್ಲಿ 39ನೆ ರಾ. ಸೀನಿಯರ್ ಥ್ರೋಬಾಲ್ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ26 April 2016 7:09 PM IST
share
ಎ.28ರಿಂದ 30ರವರೆಗೆ ಕಾಪುವಿನಲ್ಲಿ 39ನೆ ರಾ. ಸೀನಿಯರ್ ಥ್ರೋಬಾಲ್ ಚಾಂಪಿಯನ್‌ಶಿಪ್

ಕಾಪು, ಎ.26: ಪುರುಷರ ಮತ್ತು ಮಹಿಳೆಯರ 39ನೆ ರಾಷ್ಟ್ರೀಯ ಸೀನಿಯರ್ ಥ್ರೋಬಾಲ್ ಚಾಂಪಿಯನ್‌ಶಿಪ್ ಎ.28ರಿಂದ 30ರವರೆಗೆ ಮೂರು ದಿನಗಳ ಕಾಲ ಕಾಪು ವಿದ್ಯಾನಿಕೇತನ ಸಮೂಹ ಸಂಸ್ಥೆಗಳ ಆವರಣದಲ್ಲಿ ನಡೆಯಲಿದೆ.

ಕಾಪುವಿನಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಟೂರ್ನಿಯ ಸಂಘಟಕರಲ್ಲಿ ಒಬ್ಬರಾದ ಕಾಪು ವಿದ್ಯಾನಿಕೇತನ ಸಮೂಹ ಸಂಸ್ಥೆಯ ಅಧ್ಯಕ್ಷ ಕೆ.ಪಿ.ಆಚಾರ್ಯ ತಿಳಿಸಿದರು. ಜಿಲ್ಲೆಯಲ್ಲಿ ಅದರಲ್ಲೂ ಮುಖ್ಯವಾಗಿ ಕಾಪುವಿನಂಥ ಗ್ರಾಮೀಣ ಪ್ರದೇಶದಲ್ಲಿ ರಾಷ್ಟ್ರೀಯ ತ್ರೋಬಾಲ್ ಸ್ಪರ್ಧೆ ನಡೆಯುತ್ತಿರುವುದು ಇದೇ ಮೊದಲ ಸಲವಾಗಿದೆ ಎಂದವರು ಹೇಳಿದರು.

ಕರ್ನಾಟಕ ಅಮೆಚೂರು ತ್ರೋಬಾಲ್ ಸಂಸ್ಥೆ, ಉಡುಪಿ ಜಿಲ್ಲಾ ಥ್ರೋಬಾಲ್ ಸಂಸ್ಥೆ ಹಾಗೂ ವಿದ್ಯಾನಿಕೇತನ ಸಮೂಹ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಮೂರು ದಿನಗಳ ಕಾಲ ಈ ಟೂರ್ನಿ ನಡೆಯಲಿದೆ. ಇದರಲ್ಲಿ ದೇಶದ 27 ರಾಜ್ಯಗಳ ಪುರುಷ ಮತ್ತು ಮಹಿಳಾ ತಂಡಗಳು ಪಾಲ್ಗೊಳ್ಳಲಿವೆ. 750 ಆಟಗಾರರು ಹಾಗೂ ಅಧಿಕಾರಿಗಳು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.

ಎ.28ರಂದು ಬೆಳಗ್ಗೆ 9ಕ್ಕೆ ಕಾಪು ಪಟ್ಟಣದಿಂದ ತಂಡಗಳ ಆಟಗಾರರು ಪಥಸಂಚಲನ ಹಾಗೂ ಮೆರವಣಿಗೆ ಮೂಲಕ ವಿದ್ಯಾನಿಕೇತನ ಕ್ರೀಡಾಂಗಣಕ್ಕೆ ಆಗಮಿಸಲಿದ್ದಾರೆ. 9:30ಕ್ಕೆ ಆರಂಭಗೊಳ್ಳುವ ಉದ್ಘಾಟನಾ ಸಮಾರಂಭದಲ್ಲಿ ರಾಜ್ಯ ಕ್ರೀಡಾಸಚಿವ ಅಭಯಚಂದ್ರ ಜೈನ್ ಸ್ಪರ್ಧೆಯನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ಅಧ್ಯಕ್ಷತೆ ವಹಿಸಲಿದ್ದಾರೆ.

ಬೆಂಗಳೂರಿನ ಉದ್ಯಮಿ ಹಾಗೂ ವಿದ್ಯಾನಿಕೇತನ ಸಮೂಹ ಸಂಸ್ಥೆಯ ಗೌರವಾಧ್ಯಕ್ಷ ಪಿ.ರಾಮದಾಸ್ ಮಡ್ಮಣ್ಣಾಯ ಪುತ್ತಿಗೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಭಾರತ ತ್ರೋಬಾಲ್ ಫೆಡರೇಶನ್‌ನ ಮುಖ್ಯ ಕಾರ್ಯದರ್ಶಿ ಟಿ.ರಾಮಣ್ಣ, ರಾಜ್ಯ ಸಂಸ್ಥೆಯ ಅಧ್ಯಕ್ಷ ಗುರುರಾಜ್, ಗೌರವ ಕಾರ್ಯದರ್ಶಿ ಕೆ.ಎನ್.ಗೋವಿಂದರಾಜ್ ಹಾಗೂ ಕಾಪು ಉದ್ಯಮಿ ಹರಿಜೀವನ್ ಶೆಟ್ಟಿ ಉಪಸ್ಥಿತರಿರುವರು.

ಪಂದ್ಯಗಳು ಲೀಗ್ ಕಮ್ ಸೂಪರ್ ಲೀಗ್ ಆಧಾರದಲ್ಲಿ ನಡೆಯಲಿವೆ. ಕೆಲವು ಪಂದ್ಯಗಳು ಹೊನಲು ಬೆಳಕಿನಲ್ಲೂ ನಡೆಯಲಿವೆ. ಟೂರ್ನಿಯ ಎರಡೂ ವಿಭಾಗಗಳಲ್ಲಿ ಮೊದಲ ಮೂರು ಸ್ಥಾನ ಪಡೆಯುವ ತಂಡಗಳಿಗೆ ಟ್ರೋಫಿಗಳನ್ನು ನೀಡಲಾಗುವುದು.

ಟೂರ್ನಿಯ ಸಮಾರೋಪ ಸಮಾರಂಭ ಎ.30ರಂದು ಸಂಜೆ 4ಕ್ಕೆ ನಡೆಯಲಿದೆ. ಉಡುಪಿ ಜಿಪಂ ಸಿಇಒ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ಉದ್ಯಮಿ ಸುರೇಶ್ ಶೆಟ್ಟಿ ಗುರ್ಮೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದವರು ತಿಳಿಸಿದರು.

ಕಳೆದ ಬಾರಿ ಹರ್ಯಾಣಕ್ಕೆ ಸಮಗ್ರ ಪ್ರಶಸ್ತಿ

ಕಳೆದ ವರ್ಷ ಮಹಾರಾಷಟ್ಟೆದ ನಾಗಪುರದಲ್ಲಿ ನಡೆದ ರಾಷ್ಟ್ರೀಯ ಥ್ರೋಬಾಲ್ ಚಾಂಪಿಯನ್‌ಶಿಪ್‌ನಲ್ಲಿ ಹರ್ಯಾಣ ತಂಡಗಳು ಪುರುಷ ಮತ್ತು ಮಹಿಳಾ ವಿಭಾಗಗಳೆರಡರಲ್ಲೂ ಪ್ರಶಸ್ತಿ ಜಯಿಸಿದ್ದವು.

ಪುರುಷರ ವಿಭಾಗದಲ್ಲಿ ಕರ್ನಾಟಕ, ಛತ್ತೀಸ್‌ಗಢ, ಮಹಾರಾಷ್ಟ್ರ, ಮಧ್ಯಪ್ರದೇಶ ತಂಡಗಳು ಹಾಗೂ ಮಹಿಳೆಯರ ವಿಭಾಗದಲ್ಲಿ ಕರ್ನಾಟಕ, ತಮಿಳುನಾಡು, ಛತ್ತೀಸ್‌ಗಢ, ದಿಲ್ಲಿ ತಂಡಗಳು ಬಲಿಷ್ಠವಾಗಿದ್ದು ಇಲ್ಲಿ ಪ್ರಶಸ್ತಿ ಜಯಿಸುವ ಫೆವರೀಟ್‌ಗಳಾಗಿವೆ.

ಪತ್ರಿಕಾಗೋಷ್ಠಿಯಲ್ಲಿ ಪ್ರಾಯೋಜಕ ಹರಿಜೀವನ್ ಶೆಟ್ಟಿ, ಗೋವಿಂದರಾಜು ಕೆ.ಎನ್., ವಿದ್ಯಾನಿಕೇತನ ಸಮೂಹ ಸಂಸ್ಥೆಗಳ ಪ್ರೊ.ಪಿ.ಕೃಷ್ಣ ರಾವ್, ವಿದ್ಯಾಧರ್ ಪುರಾಣಿಕ್, ಸ್ಮಿತಾ ಮೋರ್, ವಿ.ಕೆ.ಉದ್ಯಾವರ ಹಾಗೂ ಸಂತೋಷ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X