Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎ.29ರಂದು ಜಿಲ್ಲೆಗೆ ಸಚಿವ ಸಂಪುಟದ ಉಪ...

ಎ.29ರಂದು ಜಿಲ್ಲೆಗೆ ಸಚಿವ ಸಂಪುಟದ ಉಪ ಸಮಿತಿ ಭೇಟಿ: ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್

ಬರಪೀಡಿತ ಪ್ರದೇಶಗಳ ಅಧ್ಯಯನ

ವಾರ್ತಾಭಾರತಿವಾರ್ತಾಭಾರತಿ26 April 2016 10:14 PM IST
share
ಎ.29ರಂದು ಜಿಲ್ಲೆಗೆ  ಸಚಿವ ಸಂಪುಟದ ಉಪ ಸಮಿತಿ ಭೇಟಿ: ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್

 ಮಡಿಕೇರಿ, ಎ.26: ಬರಪೀಡಿತ ಪ್ರದೇಶಗಳ ಅಧ್ಯಯನ ಮತ್ತು ಬರ ನಿರ್ವಹಣೆಯ ಹಿನ್ನೆಲೆಯಲ್ಲಿ ಸಚಿವ ಸಂಪುಟದ ಉಪ ಸಮಿತಿಯು ಎ.29ರಂದು ಕೊಡಗು ಜಿಲ್ಲೆಗೆ ಆಗಮಿಸಿ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮೀರ್ ಅನೀಸ್ ಅಹ್ಮದ್ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಸಚಿವ ಸಂಪುಟಗಳ ಉಪ ಸಮಿತಿಯ ಸದಸ್ಯ ಕಾನೂನು ಹಾಗೂ ಉನ್ನತ ಶಿಕ್ಷಣ ಸಚಿವ ಟಿ.ಬಿ.ಜಯಚಂದ್ರ, ಲೋಕೋಪಯೋಗಿ ಸಚಿವ ಡಾ. ಎಚ್.ಸಿ.ಮಹದೇವಪ್ಪ, ಸಹಕಾರ ಸಚಿವ ಎಚ್.ಎಸ್.ಮಹದೇವ ಪ್ರಸಾದ್ ಹಾಗೂ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು. ಕುಡಿಯುವ ನೀರು ಸಂಬಂಧ ಜಿಲ್ಲೆಯಲ್ಲಿ ಇದುವರೆಗೆ ಕೈಗೊಳ್ಳಲಾಗಿರುವ ಕಾಮಗಾರಿಗಳು, ಜಾನುವಾರುಗಳಿಗೆ ಮೇವು ದಾಸ್ತಾನು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಾರ್ಮಿಕರಿಗೆ ಕೂಲಿ ಕೆಲಸ ನೀಡುವುದು ಸೇರಿದಂತೆ ಹಲವು ಮಾಹಿತಿಯನ್ನು ನೀಡುವಂತೆ ತಿಳಿಸಿದರು. ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಾರುಲತಾ ಸೋಮಲ್ ಮಾತನಾಡಿ, ಈಗಾಗಲೇ ಜಿಲ್ಲೆಯಲ್ಲಿ ವಿವಿಧ ಗ್ರಾಪಂಗಳು ಹಾಗೂ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಬೆಳಕು ಚೆಲ್ಲಬೇಕಿದೆ. ಈ ಸಂಬಂಧ ಸಚಿವರುಗಳ ಗಮನಕ್ಕೆ ತರುವಂತಾಗಬೇಕು, ಹಾಗೆಯೇ ಸ್ಥಳೀಯ ಜನರ ಬೇಡಿಕೆ ಮತ್ತು ಗ್ರಾಮಗಳಲ್ಲಿ ಕುಡಿಯುವ ನೀರು ಸಮಸ್ಯೆಗಳ ಬಗ್ಗೆ ಪಟ್ಟಿ ಮಾಡುವಂತೆ ಆಗಬೇಕೆಂದು ಅವರು ಸೂಚನೆ ನೀಡಿದರು. ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಒಳಚರಂಡಿ ಯೋಜನೆ, ನೀರಿನ ಟ್ಯಾಂಕ್, ತೆರೆದ ಬಾವಿ ಹಾಗೂ ಬೋರ್‌ವೆಲ್‌ಗಳು ಮತ್ತಿತರ ಮಾಹಿತಿಗಳನ್ನು ಒದಗಿಸುವುದು ಮತ್ತು ಈವರೆಗಿನ ಅನುದಾನದ ಬಳಕೆಯ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಸಚಿವ ಸಂಪುಟ ಉಪ ಸಮಿತಿಗೆ ಒದಗಿಸುವಂತೆ ಅವರು ಹೇಳಿದರು. ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ್ ಮಾತನಾಡಿ, ಸಚಿವ ಸಂಪುಟದ ಉಪ ಸಮಿತಿ ಭೇಟಿ ಸಂದರ್ಭದಲ್ಲಿ ಜಿಲ್ಲೆಯಲ್ಲಿರುವ ವಿವಿಧ ಕಾಮಗಾರಿಗಳ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ. ಆಯಾಯ ತಾಲೂಕಿನ ತಹಶೀಲ್ದಾರ್ ಮತ್ತು ತಾಪಂ ಇಒ ಗಳು ಉಪ ವಿಭಾಗಾಧಿಕಾರಿ ಅವರೊಂದಿಗೆ ಸಮಾಲೋಚಿಸಿ ಈ ಬಗ್ಗೆ ಕ್ರಮಕೈಗೊಳ್ಳುವಂತೆ ತಿಳಿಸಿದರು.

   

 ಸಚಿವ ಸಂಪುಟಗಳ ಉಪ ಸಮಿತಿ ಸದಸ್ಯರ ತಂಡವು ಜಿಲ್ಲೆಯ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಲಿದ್ದಾರೆ. ವಿವಿಧ ಸ್ಥಳಗಳನ್ನು ವೀಕ್ಷಿಸುವ ಸಂದರ್ಭದಲ್ಲಿ ಅಧಿಕಾರಿ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು ಮತ್ತು ಸ್ಥಳಿಯ ಜನರ ಅಹವಾಲು ಸ್ವೀಕರಿಸಲು ಅಗತ್ಯ ನೆರವು ಮಾಡಿಕೊಳ್ಳುವಂತೆ ಅವರು ತಿಳಿಸಿದರು. ಉಪ ವಿಭಾಗಾಧಿಕಾರಿ ಡಾ. ನಂಜುಂಡೇಗೌಡ, ಇಂಜಿನಿಯರ್ ಶಶಿಧರ, ಪೌರಾಯುಕ್ತೆ ಬಿ.ಬಿ.ಪುಷ್ಪಾವತಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜು, ತೊ. ಇಲಾಖೆಯ ಉಪ ನಿರ್ದೇಶಕ ಗಿರೀಶ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಡಾ.ಸಿ.ನಾಗರಾಜು, ತಹಶೀಲ್ದಾರ್ ಕುಂಞಮ್ಮ, ಶಿವಪ್ಪ, ಮಹದೇವ ಸ್ವಾಮಿ, ತಾಪಂ ಸಿಇಒ ಸೋಮಶೇಖರ್, ಚಂದ್ರಶೇಖರ್, ಕೆ.ಆರ್, ಪಡ್ನೇಕರ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X