ರಾಜ್ಯದಲಿ್ಲ 140 ತಾಲೂಕುಗಳು ಬರಪೀಡಿತ: ಪರಮೇಶ್ವರ್

ತರೀಕೆರೆ, ಎ.26: ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಸುಳ್ಳು ಲೆಕ್ಕ ಬರೆದು ಹಣ ದುರುಪಯೋಗ ಮಾಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ಬೋರ್‌ವೆಲ್ ಕೊರೆಸುವುದು ಮುಖ್ಯವಲ್ಲ. ಅದಕ್ಕೆ ವಿದ್ಯುತ್ ಸಂಪರ್ಕ ನೀಡಿ ಜನರಿಗೆ ನೀರು ಕೊಡುವ ಕೆಲಸವಾಗಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಡಾ.ಜಿ. ಪಸಚಿವ ರಮೇಶ್ವರ್ ಹೇಳಿದ್ದಾರೆ.
ಮಂಗಳವಾರ ತಾಲೂಕಿನ ಕುಡ್ಲೂರು ಮತ್ತು ಬೆಟ್ಟದಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ತಾಪಂ ಸಭಾಂಗಣದಲ್ಲಿ ನಡೆದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.
ರಾಜ್ಯದಲ್ಲಿ 140 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ. ಭೀಕರ ಬರಗಾಲದಿಂದ ತತ್ತರಿಸಿರುವ ಜನರಿಗೆ ಕುಡಿಯಲು ನೀರು ಒದಗಿಸಬೇಕು. ಜನರು ಗುಳೇ ಹೋಗುವುದನ್ನು ತಪ್ಪಿಸಬೇಕು ಎನ್ನುವುದು ರಾಜ್ಯ ಸರಕಾರದ ಮುಖ್ಯ ಉದ್ದೇಶವಾಗಿದೆ. ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಸುಳ್ಳು ಲೆಕ್ಕ ಬರೆದು ಹಣ ದುರುಪಯೋಗ ಮಾಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ಬೋರ್‌ವೆಲ್ ಕೊರೆಸುವುದು ಮುಖ್ಯವಲ್ಲ. ಅದಕ್ಕೆ ವಿದ್ಯುತ್ ಸಂಪರ್ಕ ನೀಡಿ ಜನರಿಗೆ ನೀರು ಕೊಡುವ ಕೆಲಸವಾಗಬೇಕು ಎಂದರು. ತಾಲೂಕಿನಲ್ಲಿ ಕುಡಿಯುವ ನೀರಿನ ಕಾಮಗಾರಿ ಕೈಗೊಳ್ಳಲು 3 ಕೋಟಿ ರೂ. ಇದೆ. ನೀರಾವರಿ ಇಲಾಖೆಯ ಇಂಜಿನಿಯರ್‌ಗಳು, ಇಒ, ಪಿಡಿಒಗಳು ಸಮಯ ವ್ಯರ್ಥ ಮಾಡದೆ ತುರ್ತಾಗಿ ಯೋಜನೆಗಳಿಗೆ ಅನುಮೋದನೆ ನೀಡಬೇಕು ಎಂದು ಸೂಚಿಸಿದರು. ಬೀಲೇನಹಳ್ಳಿ, ಕರಕುಚ್ಚಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗಳು ಕುಂಟಿತವಾಗಿರುವ ಬಗ್ಗೆ ಸಂಪೂರ್ಣ ಮಾಹಿತಿ ನೀಡುವಂತೆ ಜಿಪಂ ಸಿಇಒ ರವರಿಗೆ ಸೂಚಿಸಿದರಲ್ಲದೆ ಈ ಬಗ್ಗೆ ನೀರಾವರಿ ಸಚಿವರೊಂದಿಗೆ ಚರ್ಚಿಸಿ ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿದರು.
ಶಾಸಕ ಜಿ.ಎಚ್.ಶ್ರೀನಿವಾಸ್ ಮಾತನಾಡಿ, ತಾಲೂಕಿನ ಅಜ್ಜಂಪುರ ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ಮಾಡುವ 3 ಬೋರ್‌ವೆಲ್‌ಗಳು ಒಂದು ವಾರದಲ್ಲಿ ಬತ್ತಿಹೋಗಿವೆ. ದಿನದಿನಕ್ಕೆ ಸಮಸ್ಯೆ ಹೆಚ್ಚಾಗುತ್ತಿದೆ. ಹೊಸದಾಗಿ ಬೋರ್‌ವೆಲ್ ಕೊರೆಸಲು ಹೆಚ್ಚುವರಿ ಹಣ ಬಿಡುಗಡೆ ಮಾಡಬೇಕು. ಮರಳಿನ ಸಮಸ್ಯೆಯಿಂದಾಗಿ ಆಶ್ರಯ ಮನೆಗಳು, ಶೌಚಾಲಯಗಳ ನಿರ್ಮಾಣ ಕುಂಟಿತವಾಗಿದೆ. ಶಿವಮೊಗ್ಗದಿಂದ ಮರಳು ಕೊಡಿಸಲು ಮುಂದಾಗಬೇಕು ಎಂದು ಮನವಿ ಮಾಡಿದರು.
ತಾಲೂಕಿನ 31 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗಿದ್ದು, 16 ಹಳ್ಳಿಗಳಿಗೆ ಇದುವರೆಗೆ 308 ಟ್ಯಾಂಕರ್ ನೀರು ಸರಬರಾಜು ಮಾಡಲಾಗಿದೆ ಎಂದು ತಹಶೀಲ್ದಾರ್ ಮಹೇಶ್ಚಂದ್ರ ಸಭೆಗೆ ಮಾಹಿತಿ ನೀಡಿದರು.
ಪುರಸಭೆ ಅಧ್ಯಕ್ಷ ಟಿ.ಎಸ್.ಧರ್ಮರಾಜ್ ಮಾತನಾಡಿ, ಪಟ್ಟಣದಲ್ಲಿ ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡಲು 2 ಓವರೆಡ್ ಟ್ಯಾಂಕ್‌ಗಳ ನಿರ್ಮಾಣ ಅಗತ್ಯವಿದೆ. ಹಳೆಯ ಪೈಪ್‌ಲೈನ್ ಬದಲಿಸುವ ಆವಶ್ಯಕತೆ ಇದ್ದು, ಅನುದಾನ ನೀಡಬೇಕು ಎಂದರು. ಸಭೆಯಲ್ಲಿ ಎಂ.ಎಲ್.ಸಿ.ಪ್ರಾಣೇಶ್, ಜಿಲ್ಲಾಧಿಕಾರಿ ಷಡಕ್ಷರಿಸ್ವಾಮಿ, ಜಿಪಂ ಸಿಇಒ ಡಾ.ರಾಗಪ್ರಿಯಾ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.







