ಮೇ 12: ಪ್ರಧಾನಿ ನರೇಂದ್ರ ಮೋದಿ ಕಾಸರಗೋಡಿಗೆ
ಕಾಸರಗೋಡು, ಎ. 27: ಬಿಜೆಪಿ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮೇ 12 ರಂದು ಕಾಸರಗೋಡಿಗೆ ಆಗಮಿಸುವರು.
ಕಾಸರಗೋಡಿನಲ್ಲಿ ಚುನಾವಣಾ ಪ್ರಚಾರ ಸಮಾವೇಶವನ್ನುದ್ದೇಶಿಸಿ ಮಾತನಾಡುವರು. ಮೇ ಆರರಿಂದ 12 ರ ತನಕ ನರೇಂದ್ರ ಮೋದಿ ರಾಜ್ಯದ ಹಲವೆಡೆ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವರು.
ಕೇಂದ್ರ ಸಚಿವರಾದ ಸುಷ್ಮಾ ಸ್ವರಾಜ್ , ಡಿ. ವಿ ಸದಾನಂದ ಗೌಡ, ಮನೋಹರ್ ಪಾರಿಕ್ಕರ್, ಅರುಣ್ ಜೇಟ್ಲಿ ಸೇರಿದಂತೆ ಹಲವು ಪ್ರಮುಖರು ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಜಿಲ್ಲೆಗೆ ತಲುಪುವರು .
Next Story