ಪುತ್ತೂರು: ಅನುಮಾನಾಸ್ಪದ ವ್ಯಕ್ತಿಯ ಬಂಧನ
ಪುತ್ತೂರು: ಅನುಮಾನಾಸ್ಪದವಾಗಿ ರಾತ್ರಿ ವೇಳೆ ತಿರುಗಾಡುತ್ತಿದ್ದ ವ್ಯಕ್ತಿಯನ್ನು ಮಂಗಳವಾರ ರಾತ್ರಿ ಬಂಧಿಸಿದ ಪುತ್ತೂರು ನಗರ ಪೊಲೀಸರು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ತಾಲೂಕಿನ ಪುಣಚ ನಿವಾಸಿ ರಾಮಚಂದ್ರ ನಾಯಕ್ ಬಂಧಿತ ಆರೋಪಿ. ನಗರ ಠಾಣೆಯ ಎಎಸ್‌ಐ ವಿಶ್ವನಾಥ ಶೆಟ್ಟಿ ಮತ್ತು ಸಿಬ್ಬಂದಿಗಳು ರಾತ್ರಿ ಗಸ್ತು ತಿರುಗುತ್ತದ್ದ ವೇಳೆ ಪರ್ಲಡ್ಕದಲ್ಲಿ ಈತ ನಿಂತಿದ್ದು, ವಿಚಾರಿಸಿದಾಗ ಸರಿಯಾಗಿ ಉತ್ತರಿಸದ ಹಿನ್ನಲೆಯಲ್ಲಿ ಈತನನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದರು. ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.
Next Story





