Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಚುಟುಕು ಸುದ್ದಿಗಳು

ಚುಟುಕು ಸುದ್ದಿಗಳು

ವಾರ್ತಾಭಾರತಿವಾರ್ತಾಭಾರತಿ27 April 2016 11:43 PM IST
share

ಇಂದಿನ ಕಾರ್ಯಕ್ರಮ
ಉಚಿತ ಸಾಮೂಹಿಕ ವಿವಾಹ: ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಅಂಬಲ ಪಾಡಿ ಹಾಗೂ ಮೊಗವೀರ ಯುವ ಸಂಘಟನೆಯ ಜಂಟಿ ಆಶ್ರಯದಲ್ಲಿ ಸತತ 8ನೆ ಬಾರಿಗೆ ಮೊಗವೀರ ಸಮಾಜದ 21 ಜೋಡಿಗಳ ಉಚಿತ ಸಾಮೂಹಿಕ ವಿವಾಹ ಸಮಾರಂಭ. ಸಮಯ: ಬೆಳಗ್ಗೆ 10:45ಕ್ಕೆ. ಸ್ಥಳ: ಶ್ಯಾಮಿಲಿ ಸಭಾಂಗಣ, ಅಂಬಲಪಾಡಿ ಉಡುಪಿ.
ರಜತ ಮಹೋತ್ಸವ: ಪೇಜಾವರ ಮಠದ ಆಶ್ರಯದಲ್ಲಿ ನೃತ್ಯನಿಕೇತನ ಕೊಡವೂರು ಇದರ ರಜತ ಮಹೋತ್ಸವದ ಸರಣಿ ಕಾರ್ಯಕ್ರಮದಲ್ಲಿ ನೃತ್ಯನಿಕೇತನದ ವಿದ್ಯಾರ್ಥಿಗಳಿಂದ ನೃತ್ಯ ನಮನ. ಸಮಯ: ಸಂಜೆ 7ಕ್ಕೆ. ಸ್ಥಳ: ಶ್ರೀಕೃಷ್ಣ ಮಠದ ರಾಜಾಂಗಣ, ಉಡುಪಿ.
 ಪೇಜಾವರ ಶ್ರೀ ಪಂಚಮ ಪರ್ಯಾಯ: ಉಡುಪಿ ಶ್ರೀಕೃಷ್ಣ ಮಠದಲ್ಲಿ ಬೆಳಗ್ಗೆ 9:30ಕ್ಕೆ ಅಖಂಡ ಸಪ್ತೋತ್ಸವ, ಮಹಾಪೂಜಾ ರಥೋತ್ಸವ. ಸಂಜೆ 5ಕ್ಕೆ ಚಂದ್ರಶಾಲೆಯಲ್ಲಿ ಪುರಾಣ ವಿದ್ವಾನ್ ಬಹ್ಮಣ್ಯಾಚಾರ್‌ರಿಂದ ಪ್ರವಚನ, 5:45ಕ್ಕೆ ಧಾರ್ಮಿಕ ಉಪನ್ಯಾಸ ವಿದ್ವಾನ್ ಸತ್ಯನಾರಾಯಣ ಆಚಾರ್ಯ ಬೆಂಗಳೂರು ಇವರಿಂದ. ಬಳಿಕ ಪೇಜಾವರ ಶ್ರೀಗಳಿಂದ ಅನುಗ್ರಹ ಸಂದೇಶ. 7ಕ್ಕೆ ರಾಜಾಂಗಣದಲ್ಲಿ ನೃತ್ಯನಿಕೇತನ ವಿದ್ಯಾರ್ಥಿಗಳಿಂದ ನೃತ್ಯ ನಮನ ಭರತನಾಟ್ಯ.

 ರಾ. ಥ್ರೋಬಾಲ್ ಟೂರ್ನಿ: ಕರ್ನಾಟಕ ಅಮೆಚೂರು ಥ್ರೋಬಾಲ್ ಸಂಸ್ಥೆ, ಉಡುಪಿ ಜಿಲ್ಲಾ ಥ್ರೋಬಾಲ್ ಸಂಸ್ಥೆ ಹಾಗೂ ವಿದ್ಯಾನಿಕೇತನ ಸಮೂಹ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಪುರುಷರ ಮತ್ತು ಮಹಿಳೆಯರ ಮೂರು ದಿನಗಳ 39ನೆ ರಾಷ್ಟ್ರೀಯ ಸೀನಿಯರ್ ಥ್ರೋಬಾಲ್ ಚಾಂಪಿಯನ್‌ಶಿಪ್ ಉದ್ಘಾಟನೆ. ಸಮಯ: ಬೆಳಗ್ಗೆ 9:30ಕ್ಕೆ. ಸ್ಥಳ: ಕಾಪು ವಿದ್ಯಾನಿಕೇತನ ಸಮೂಹ ಸಂಸ್ಥೆಗಳ ಆವರಣ, ಕಾಪು. ನವೀಕೃತ ಚರ್ಚ್ ಉದ್ಘಾಟನೆ: ನವೀಕರಣಗೊಂಡ ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್‌ನ ಉದ್ಘಾಟನೆ ಬೆಳಗ್ಗೆ 9. ಸಭಾ ಕಾರ್ಯಕ್ರಮ 11:30. ಸಂಜೆ 6:30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ. ಸ್ಥಳ: ಸಂತ ಫ್ರಾನ್ಸಿಸ್ ಕ್ಸೇವಿಯರ್ ಚರ್ಚ್ ಆವರಣ, ಉದ್ಯಾವರ.ಉಚಿತ ಆರೋಗ್ಯ ತಪಾಸಣಾ ಶಿಬಿರ: ಕಾಂತಾವರ ಶ್ರೀಕಾಂತೇಶ್ವರ ಪ್ರೌಢ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ಸಂಜೆ ಹಳೆವಿದ್ಯಾರ್ಥಿಗಳ ಸಮಾವೇಶ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು. ಸಮಯ: ಬೆಳಗ್ಗೆ 9ರಿಂದ 2ರವರೆಗೆ. ಹಾಗೂ ಸಂಜೆ 6ರಿಂದ. ಸ್ಥಳ: ಶ್ರೀಕಾಂತೇಶ್ವರ ಪ್ರೌಢ ಶಾಲೆ ಆವರಣ, ಕಾಂತಾವರ.

ನಾಳೆಯಿಂದ ಹೆಜಮಾಡಿ ಕೋಡಿಯಲ್ಲಿ ಉರೂಸ್ ಕಾರ್ಯಕ್ರಮ
ಮಂ ಗಳೂರು, ಎ. 27: ಉಡುಪಿ ಹೆಜಮಾಡಿ ಕೋಡಿಯ ಬದ್ರಿಯಾ ಜುಮಾ ಮಸೀದಿ ಹಾಗೂ ಅರಬಿ ವಲಿಯುಲ್ಲಾಹಿ ದರ್ಗಾ ಶರೀಫ್ ಹೆಸರಿನಲ್ಲಿ ಎರಡು ವರ್ಷಕ್ಕೊಮ್ಮೆ ಆಚರಿಸಿಕೊಂಡು ಬರುತ್ತಿರುವ ಉರೂಸ್ ಕಾರ್ಯಕ್ರಮದ ಅಂಗವಾಗಿ ಎ.29ರಿಂದ ಮೇ 1ರವರೆಗೆ ಬದ್ರಿಯಾ ಜುಮಾ ಮಸೀದಿ ಬಳಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.ಎ. 29ರಂದು ರಾತ್ರಿ 8 ಗಂಟೆಗೆ ಸೈಯದ್ ಹಾರೂನ್ ತಂಙಳ್ ಭದ್ರಾವತಿ ದುಆ ನೆರವೇರಿಸಲಿದ್ದು, ಬೈತಾರ್ ಜುಮಾ ಮಸೀದಿಯ ಮುದರ್ರಿಸ್ ಸಿರಾಜುದ್ದೀನ್ ಸಖಾಫಿ ಕನ್ಯಾನ ಭಾಗವಹಿಸಲಿದ್ದಾರೆ. ಎ.30ರಂದು ಮಗ್ರಿಬ್ ನಮಾಝಿನ ಬಳಿಕ ಸ್ವಲಾತ್ ಮಜ್ಲಿಸ್ ನಡೆಯಲಿದೆ. ಸ್ವಲಾತ್‌ನ ನೇತೃತ್ವವನ್ನು ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಅಲ್‌ಹಾಜ್ ಪಿ.ಎಂ.ಇಬ್ರಾಹೀಂ ಮುಸ್ಲಿಯಾರ್ ವಹಿಸಲಿದ್ದಾರೆ. ಕೂಳೂರು ಜುಮಾ ಮಸೀದಿಯ ಮುದರ್ರಿಸ್ ಕೆ.ವಿ.ಮುಹಮ್ಮದ್ ಬಶೀರ್ ಮದನಿ ಕಾಮಿಲ್ ಕೂಳೂರು ಭಾಗವಹಿಸಲಿದ್ದಾರೆ. ಮೇ 1ರಂದು ನಡೆಯುವ ಸಮಾರೋಪದಲ್ಲಿ ಅಸರ್ ನಮಾಝಿನ ಬಳಿಕ ದರ್ಗಾಕ್ಕೆ ಸಂದಲ್ ಮೆರವಣಿಗೆ ನಡೆಯಲಿದೆ. ಸಂಜೆ 7 ಗಂಟೆಗೆ ಡಾ.ಹಝ್ರತ್ ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್‌ಕಟ್ಟೆ ಪ್ರವಚನ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು, ಬಳಿಕ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ದಫ್ ಸ್ಪರ್ಧೆ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

ಕಾಸರಗೋಡು: 5 ಕ್ಷೇತ್ರಗಳಲ್ಲಿ 21 ನಾಮಪತ್ರ ಸಲ್ಲಿಕೆ
ಕಾಸರಗೋಡು, ಎ.27: ಜಿಲ್ಲೆಯ ವಿಧಾನಸಭಾ ಚುನಾವಣೆಗೆ ಬುಧವಾರ ಎಂಟು ನಾಮಪತ್ರ ಸಲ್ಲಿಸಲ್ಪಟ್ಟಿವೆ. ಇದರಿಂದ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಸಿದವರ ಸಂಖ್ಯೆ 21ಕ್ಕೇರಿದೆ.
ಮಂಜೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕೆ. ಸುರೇಂದ್ರನ್ ಮತ್ತು ಡಮ್ಮಿ ಅಭ್ಯರ್ಥಿಯಾಗಿ ಸುರೇಶ್ ಕುಮಾರ್ ಶೆಟ್ಟಿ, ಕಾಸರಗೋಡು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕುಂಟಾರು ರವಿ ತಂತ್ರಿ ಮತ್ತು ಡಮ್ಮಿ ಅಭ್ಯರ್ಥಿಯಾಗಿ ಎ.ಸಿ. ಅಶೋಕ್‌ಕುಮಾರ್, ಕಾಸರಗೋಡು ಕ್ಷೇತ್ರದಿಂದ ಐಎನ್‌ಎಲ್ ಡಮ್ಮಿ ಅಭ್ಯರ್ಥಿಯಾಗಿ ಫಕ್ರುದ್ದೀನ್ ಕೆ.ಎಸ್., ಉದುಮ ಕ್ಷೇತ್ರದಿಂದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಮುಹಮ್ಮದ್ ಕುಂಞಿ, ಕಾಞಂಗಾಡ್‌ನಿಂದ ಪಿಡಿಪಿ ಅಭ್ಯರ್ಥಿಯಾಗಿ ಎಂ. ಹುಸೈನಾರ್, ತ್ರಿಕ್ಕರಿಪುರದಿಂದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಎಂ.ವಿ. ಶೌಕತಾಲಿ ನಾಮಪತ್ರ ಸಲ್ಲಿಸಿದರು.

ರಾಜ್ಯದಲ್ಲಿ 1 ಸಾವಿರ ಪರವಾನಿಗೆ ಭೂಮಾಪಕರ ನೇಮಕಕ್ಕೆ ಅಧಿಸೂಚನೆ
ಉಡುಪಿ, ಎ.27: ಕರ್ನಾಟಕ ರಾಜ್ಯದಲ್ಲಿ ಒಂದು ಸಾವಿರ ಪರವಾನಿಗೆ ಭೂಮಾಪಕರ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕಾತಿಗಾಗಿ ಆಯ್ಕೆ ಮಾಡಲು ಅಧಿಸೂಚನೆ ಹೊರಡಿಸಲಾಗಿದ್ದು, ಉಡುಪಿ ಜಿಲ್ಲೆಯಲ್ಲಿ 68 ಪರವಾನಿಗೆ ಭೂಮಾಪಕರ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಉಡುಪಿ ಶಾಸಕ ಹಾಗೂ ಕಂದಾಯ ಇಲಾಖೆಯ ಸಂಸದೀಯ ಕಾರ್ಯದರ್ಶಿ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ. ಆಯ್ಕೆಯಾದ ಅಭ್ಯರ್ಥಿಗಳನ್ನು ತರಬೇತಿ ಪಡೆದ ನಂತರ ಭೂಮಾಪಕರ ಹುದ್ದೆಗೆ ನಿಯೋಜನೆ ಮಾಡಲಾಗುವುದು. ಹುದ್ದೆಗೆ ಅರ್ಜಿ ಸಲ್ಲಿಸಲು ಮೇ 7 ಕೊನೆಯ ದಿನವಾಗಿದ್ದು, ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾಗುತ್ತದೆ. ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳುವಂತೆ ಶಾಸಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ವಿವರಗಳಿಗೆ ಈ ವೈಬ್‌ಸೈಟ್‌ನ್ನು ಠಿಠಿ://್ಝಚ್ಞಛ್ಟಛ್ಚಿಟ್ಟ.ಚ್ಟ್ಞಠಿ.ಜಟ.ಜ್ಞಿ/್ಝಠ್ಟಛ್ಚ್ಟ್ಠಿಜಿಠಿಞಛ್ಞಿಠಿ ಸಂಪರ್ಕಿಸುವಂತೆ ಸೂಚಿಸಲಾಗಿದೆ.

ಬೀಡಿ ಕಾರ್ಮಿಕರಿಗೆ ಪರ್ಯಾಯ ಉದ್ದಿಮೆ ಸ್ಥಾಪಿಸಲು ಆಗ್ರಹ
ಮಂಗಳೂರು, ಎ.27: ಬೀಡಿ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆಯಾಗಿ ಗಾರ್ಮೆಂಟ್ ಕಾರ್ಖಾನೆಗಳನ್ನು ದ.ಕ ಜಿಲ್ಲೆಯಲ್ಲಿ ಸ್ಥಾಪಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಆಗ್ರಹಿಸಿದರು. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರದ ಅಂಕಿ ಅಂಶಗಳ ಪ್ರಕಾರ ದ.ಕ. ಜಿಲ್ಲೆಯಲ್ಲಿ 4 ಲಕ್ಷ ಬೀಡಿ ಕಾರ್ಮಿಕರಿದ್ದು, ಬೀಡಿ ಉದ್ಯಮ ಬಂದ್ ಆದರೆ ಇವರಿಗೆ ದುಡಿಯಲು ಪರ್ಯಾಯ ವ್ಯವಸ್ಥೆ ಇಲ್ಲದಂತಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಗಾರ್ಮೆಂಟ್ ಕಾರ್ಖಾನೆಗಳನ್ನು ಪಿಪಿಪಿ ಆಧಾರದಲ್ಲಿ ಸ್ಥಾಪಿಸಬೇಕು. ಪ್ರತೀ ಕಾರ್ಖಾನೆಯಲ್ಲಿ 5 ಸಾವಿರ ಕಾರ್ಮಿಕರಂತೆ ಜಿಲ್ಲೆಯ ಎಲ್ಲ ತಾಲೂಕು ಕೇಂದ್ರಗಳಲ್ಲಿ ಕಾರ್ಖಾನೆಗಳನ್ನು ಆರಂಭಿಸುವ ಮೂಲಕ ಸುಮಾರು ನಲವತ್ತು ಸಾವಿರ ಕಾರ್ಮಿಕರಿಗೆ ಉದ್ಯೋಗ ನೀಡಬಹುದು ಎಂದರು. ದ.ಕ. ಜಿಲ್ಲಾ ಕಾರ್ಮಿಕ ವಿಭಾಗದಿಂದ ಕಾರ್ಮಿಕ ದಿನಾಚರಣೆ ಹಾಗೂ ವಿವಿಧ ವರ್ಗದ ಹಿರಿಯ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮವನ್ನು ಮೇ 1 ರಂದು ಬೆಳಗ್ಗೆ 10 ಗಂಟೆಗೆ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸುವರು. ಸಚಿವರಾದ ಯು.ಟಿ.ಖಾದರ್ ಮತ್ತು ಅಭಯಚಂದ್ರ ಜೈನ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಸಮಿತಿಯ ಹಂಗಾಮಿ ಜಿಲ್ಲಾಧ್ಯಕ್ಷ ಕೋಡಿಜಾಲ್ ಇಬ್ರಾಹೀಂ, ಲೋಕೇಶ್ ಹೆಗ್ಡೆ, ನಝೀರ್ ಬಜಾಲ್, ಶೇಖರ್ ದೇರಳಕಟ್ಟೆ, ಮುಹಮ್ಮದ್ ಹನೀಫ್, ಮುಹಮ್ಮದ್, ಮುಹಮ್ಮದ್ ರಫಿ ಮೊದಲಾದವರು ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಉಚಿತ ವೃತ್ತಿ ಮಾರ್ಗದರ್ಶನ
 ಮಂಗಳೂರು, ಎ.27: ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಹಾಗೂ ಮುಂದಿನ ಕಲಿಕೆಗೆ ಸಂಬಂಧಿಸಿದಂತೆ ಗೊಂದಲದಲ್ಲಿರುವ ವಿದ್ಯಾರ್ಥಿಗಳಿಗೆ ಸೂಕ್ತ ಮಾಹಿತಿ, ಮಾರ್ಗದರ್ಶನ ನೀಡಲು ನಗರದ ಕ್ಯಾರಿಯರ್ ಗೈಡೆನ್ಸ್ ಆ್ಯಂಡ್ ಇನ್ಫಾರ್ಮೇಶನ್ ಸೆಂಟರ್ ಮುಂದಾಗಿದೆ. ಆಪ್ತ ಸಮಾಲೋಚನೆ ಮತ್ತು ವ್ಯಕ್ತಿತ್ವ ಪರೀಕ್ಷೆಯ ಮೂಲಕ ಸಂಸ್ಥೆಯು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡುತ್ತಿದೆ. ಪ್ರವೇಶ ಉಚಿತವಾಗಿದ್ದು, ಆಸಕ್ತರು ದಿ ಕ್ಯಾಂಪಸ್ ಕೆರಿಯರ್ ಅಕಾಡಮಿ, 2ನೆ ಮಹಡಿ, ಅಲ್ ರಹಬಾ ಪ್ಲಾಝಾ, ನೆಲ್ಲಿಕಾಯಿ ರಸ್ತೆ, ಮಂಗಳೂರು -575001 ಮೊ.ಸಂ. 9845054191ನ್ನು ಸಂಪರ್ಕಿಸಬಹುದು ಎಂದು ಸೆಂಟರ್‌ನ ಅಧ್ಯಕ್ಷ ಉಮರ್ ಯು.ಎಚ್. ಪ್ರಕಟನೆಯಲ್ಲಿ ತಿಳಿಸಿದ್ದಾರೆ.


‘ಕಾಪು ಪುರಸಭೆ ಅಭಿವೃದ್ಧಿ ನಮ್ಮ ಗುರಿ’
ಉಡುಪಿ, ಎ.27: ಮತದಾರರು ಅಭಿವೃದ್ದಿಯ ಆಡಳಿತಕ್ಕಾಗಿ ಕಾಪು ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ನೀಡಿದ್ದಾರೆ. ಈ ಮೂಲಕ ಕಾಪುವಿನ ಅಭಿವೃದ್ಧಿ ಕಾರ್ಯ ಮುಂದುವರಿಯಲಿದೆ. ಕಾಪುವಿನ ಸರ್ವತೋಮುಖ ಅಭಿವೃದ್ಧಿಯೇ ನಮ್ಮ ಗುರಿ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿನಯಕುಮಾರ್ ಸೊರಕೆ ತಿಳಿಸಿದ್ದಾರೆ.
ಆಮಿಷವೊಡ್ಡಿ ಕಾಂಗ್ರೆಸ್ ಗೆಲುವು: ಕಾಪು ಪುರಸಭೆ ಚುನಾವಣೆಯಲ್ಲಿ ಕೇವಲ 1 ಸ್ಥಾನದ ಅಂತರದಿಂದ ಅಧಿಕಾರ ಕಳೆದುಕೊಂಡಿದ್ದೇವೆ. ಸಾಕಷ್ಟು ಪೈಪೋಟಿ ನೀಡಿದ್ದೇವೆ. ಇದಕ್ಕೆ ಕಾರ್ಯಕರ್ತರ ಶ್ರಮವೇ ಕಾರಣ. ಕಾಂಗ್ರೆಸ್‌ನವರು ಆಮಿಷಗಳನ್ನು ಒಡ್ಡಿ ಜಯಗಳಿಸಿದ್ದಾರೆ ಎಂದು ಮಾಜಿ ಶಾಸಕ ಲಾಲಾಜಿ ಆರ್.ಮೆಂಡನ್ ಆರೋಪಿಸಿದ್ದಾರೆ.
ಮತದಾರರ ತೀರ್ಪಿಗೆ ಪಕ್ಷ ಬದ್ಧ: ಕಾಪು ಪುರಸಭಾ ಚುನಾವಣೆಯಲ್ಲಿ ಮತದಾರರು ನೀಡಿದ ಆದೇಶವನ್ನು ಬಿಜೆಪಿ ವಿನಮ್ರವಾಗಿ ಸ್ವೀಕರಿಸಿದ್ದು, ಜಿದ್ದಾಜಿದ್ದಿನ ಹೋರಾಟ ನೀಡಿದ ಸಂತೃಪ್ತಿ ಪಕ್ಷಕ್ಕಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಜಿಪಂ ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಅಭಿನಂದನೆ
ಉಡುಪಿ, ಎ.27: ನೂತನವಾಗಿ ಆಯ್ಕೆಯಾದ ಉಡುಪಿ ಜಿಪಂ ಅಧ್ಯಕ್ಷ ದಿನಕರ್ ಹಾಗೂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿಯವರಿಗೆ ಅಭಿನಂದನಾ ಸಮಾರಂಭವನ್ನು ಉಡುಪಿ ಜಿಲ್ಲಾ ಬಿಜೆಪಿಯ ವತಿಯಿಂದ ಇಂದು ಆಯೋಜಿಸಲಾಗಿತ್ತು. ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅಭಿನಂದಿಸಿದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ನೂತನವಾಗಿ ಆಯ್ಕೆಯಾಗಿರುವವರು ಇನ್ನು ಮುಂದೆ ರಾಜಕಾರಣವನ್ನು ಬದಿಗಿಟ್ಟು ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡು ಉಡುಪಿ ಜಿಪಂನ್ನು ರಾಜ್ಯದಲ್ಲೇ ಮಾದರಿಯನ್ನಾಗಿ ಮಾಡುವ ಬಗ್ಗೆ ಯೋಜನೆ ಹಾಕಿಕೊಳ್ಳಬೇಕು ಎಂದರು. ವೇದಿಕೆಯಲ್ಲಿ ಉಡುಪಿ ಮಾಜಿ ಶಾಸಕ ಕೆ.ರಘುಪತಿ ಭಟ್, ವಿಧಾನ ಪರಿಷತ್ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಬಿಜೆಪಿ ಮುಖಂಡರಾದ ಉದಯ ಕುಮಾರ್ ಶೆಟ್ಟಿ, ಶ್ಯಾಮಲಾ ಕುಂದರ್ ಉಪಸ್ಥಿತರಿದ್ದರು. ಮಟ್ಟಾರು ರತ್ನಾಕರ್ ಹೆಗ್ಡೆ ಸ್ವಾಗತಿಸಿದರು. ಕುತ್ಯಾರ್ ನವೀನ್ ಶೆಟ್ಟಿ ವಂದಿಸಿದರು.

ನಾಳೆ ಮಿಲ್ಲತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೆಳ್ಳಿಹಬ್ಬ
ಮಂಗಳೂರು, ಎ.27: ನಗರದ ಮಿಲ್ಲತ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಬೆಳ್ಳಿಹಬ್ಬ ಸಂಭ್ರಮದಲ್ಲಿದ್ದು, ಎ.29ರಂದು ನಗರದ ಸಂತ ಅಲೋಶಿಯಸ್ ಕಾಲೇಜು ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸೊಸೈಟಿ ಅಧ್ಯಕ್ಷ ಬಿ. ಇಬ್ರಾಹೀಂ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದರು. ಅಂದು ಸಂಜೆ 4:15ಕ್ಕೆ ಸಹಕಾರಿ ಸಚಿವ ಎಚ್.ಎಸ್. ಮಹಾದೇವ್ ಪ್ರಸಾದ್ ಉದ್ಘಾಟಿಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಸ್ಮರಣ ಸಂಚಿಕೆ ಬಿಡುಗಡೆಗೊಳಿಸುವರು. ಮುಖ್ಯ ಅತಿಥಿಗಳಾಗಿ ಮೇಯರ್ ಹರಿನಾಥ್, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್, ಸಂಸದ ನಳಿನ್‌ಕುಮಾರ್ ಕಟೀಲ್, ಸಚಿವರಾದ ವಿನಯಕುಮಾರ್ ಸೊರಕೆ, ಯು.ಟಿ.ಖಾದರ್, ಅಭಯಚಂದ್ರ ಜೈನ್ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದು ಹೇಳಿದರು. 1991ರ ಮಾ.3ರಂದು ದಿ. ಹಂಝ ಬಾವ ಅಧ್ಯಕ್ಷತೆಯಲ್ಲಿ ಸ್ಥಾಪಿಸಲ್ಪಟ್ಟ ಸಂಘವು ಬಂದರಿನ ರಫೀಕ್ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಾಚರಿಸುತ್ತಿತ್ತು. ಆಡಳಿತದ ಸಲುವಾಗಿ ಹಾಗೂ ಗ್ರಾಹಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಆಧುನಿಕ ಸೇವಾ ಸೌಲಭ್ಯದ ಕಟ್ಟಡ ಸಫಾ ಪ್ಲಾಝಾಕ್ಕೆ 2016ರ ಜ.28ರಂದು ಸ್ಥಳಾಂತರಗೊಳಿಸಲಾಗಿದೆ. ಆರಂಭದಲ್ಲಿ 261 ಸದಸ್ಯರು, 2,33,800 ರೂ. ಬಂಡವಾಳದಿಂದ ಆರಂಭಗೊಂಡು ಇದೀಗ 6,600 ಸದಸ್ಯರು ಹಾಗೂ 4,17,94,413 ಬಂಡವಾಳವನ್ನು ಹೊಂದಿದೆ. ಕಾಟಿಪಳ್ಳದಲ್ಲಿ ಸೊಸೈಟಿ ಶಾಖೆಯನ್ನು ಹೊಂದಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಅಝೀಝ್ ಕುದ್ರೋಳಿ, ನಿರ್ದೇಶಕರಾದ ಮುನೀರ್ ಮುಕ್ಕಚ್ಚೇರಿ, ನಿಸಾರ್ ಅಹ್ಮದ್, ಕಾರ್ಯದರ್ಶಿ ಝರೀನಾ ಬಾನು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X