ಅಬ್ಬಕ್ಕ ಸೌಹಾರ್ದದ ಪ್ರತೀಕ: ಸಚಿವ ಖಾದರ್

ಮಂಗಳೂರು, ಎ.27: ದಾಸ್ಯದ ವಿರುದ್ಧ ಹೋರಾಡಿದ ಅಬ್ಬಕ್ಕಳ ಸೌಹಾರ್ದ ನಮಗೆಲ್ಲರಿಗೂ ಸ್ಫೂರ್ತಿಯ ಸೆಲೆಯಾಗಬೇಕೆಂದು ಆರೋಗ್ಯ ಸಚಿವ ಯು.ಟಿ. ಖಾದರ್ ಹೇಳಿದರು.
ತೊಕ್ಕೊಟ್ಟಿನ ಯುನಿಟಿ ಸಭಾಂಗಣದಲ್ಲಿ ‘ವೀರರಾಣಿ ಅಬ್ಬಕ್ಕ ಉತ್ಸವ-2016’ರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು.
ಮಾಜಿ ಶಾಸಕ ಕೆ.ಜಯರಾಮ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ನೋಡೆಲ್ ಅಧಿಕಾರಿ ಚಂದ್ರಹಾಸ ರೈ ಬಿ., ಕೊಂಕಣಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ರಾಯ್ ಕ್ಯಾಸ್ತೆಲಿನೊ, ಉಳ್ಳಾಲ ನಗರಸಭಾ ಅಧ್ಯಕ್ಷ ಹುಸೈನ್ ಕುಂಞಿಮೋನು, ಕೆ.ಕೃಷ್ಣಪ್ಪ ಸಾಲ್ಯಾನ್, ಪೌರಾಯುಕ್ತೆ ರೂಪಾ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷ ಅಬ್ದುಲ್ ಪತಾಕ್, ವೈದ್ಯಾಧಿಕಾರಿ ಪುಷ್ಪಲತಾ, ನಗರಸಭೆಯ ಮಾಜಿ ಅಧ್ಯಕ್ಷೆ ಗಿರಿಜಾ ಬಾ, ಮಾಜಿ ಉಪಾಧ್ಯಕ್ಷೆ ರಝಿಯಾ ಇಬ್ರಾಹೀಂ, ಸದಸ್ಯರಾದ ಯು.ಎಚ್.ಫಾರೂಕ್, ಮುಹಮ್ಮದ್ ಮುಕ್ಕಚ್ಚೇರಿ, ಸುಂದರ ಉಳಿಯ, ಯು.ಎ.ಇಸ್ಮಾಯೀಲ್, ಜೇನ್ ಶಾಂತಿ ಡಿಸೋಜ, ಕೆ.ರಾಮಚಂದ್ರ ತೊಕ್ಕೊಟ್ಟು ಮೊದಲಾದವರು ಉಪಸ್ಥಿತರಿದ್ದರು.





