Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಳ್ಳಾಲ ಕೊಲೆಯತ್ನ ಪ್ರಕರಣ: ಓರ್ವನ ಸೆರೆ:...

ಉಳ್ಳಾಲ ಕೊಲೆಯತ್ನ ಪ್ರಕರಣ: ಓರ್ವನ ಸೆರೆ: ಕಮಿಷನರ್

ವಾರ್ತಾಭಾರತಿವಾರ್ತಾಭಾರತಿ27 April 2016 11:50 PM IST
share

ಮಂಗಳೂರು, ಎ.27: ಉಳ್ಳಾಲ ಪೇಟೆಯಲ್ಲಿ ಸೋಮವಾರ ಬೆಳಗ್ಗೆ ಮೀನಿನ ವ್ಯಾಪಾರಕ್ಕೆ ತೆರಳುತ್ತಿದ್ದ ಇಬ್ರಾಹೀಂ ನಶ್ಮಾನ್ ಎಂಬವರ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ಕುಂಪಲ ನಿವಾಸಿ ಶಿವರಾಜ್ ಯಾನೆ ಶಿವ(18) ಎಂಬಾತನನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ತಿಳಿಸಿ ದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾ ಡಿದ ಅವರು, ಆರೋಪಿ ಶಿವರಾಜ್ ವೃತ್ತಿಯಲ್ಲಿ ಇಲೆಕ್ಟ್ರಿಶಿಯನ್. ಈತನನ್ನು ಸಿಸಿಬಿ ಪೊಲೀಸರು ತಲಪಾಡಿ ಬಳಿ ಇಂದು ಮುಂಜಾನೆ ಬಂಧಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ನಾಲ್ಕೈದು ಮಂದಿಭಾಗಿಯಾಗಿದ್ದಾರೆ ಎಂದರು.
ಎ.26ರಂದು ಬೆಳಗ್ಗೆ ತೊಕ್ಕೊಟ್ಟು ಒಳಪೇಟೆ ಬಳಿ ಸಫ್ವಾನ್, ನಿಝಾಮ್ ಹಾಗೂ ಸಲೀಂ ಎಂಬವರ ಮೇಲೆ ನಡೆದ ಹಲ್ಲೆ ಪ್ರಕರಣ ಸೇರಿ ಎರಡೂ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ. ಎಸಿಪಿ ಕಲ್ಯಾಣ್ ಶೆಟ್ಟಿ, ಕೊಣಾಜೆ ಮತ್ತು ಪಣಂಬೂರು ಠಾಣೆ ಹಾಗೂ ಸಿಸಿಬಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಆರೋಪಿಗಳ ಬಗ್ಗೆ ಮಾಹಿತಿ ಲಭಿಸಿದ್ದು, ಅವರನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗಿದೆ. ಈ ನಡುವೆ 10 ಮಂದಿ ಸಂಶಯಾಸ್ಪದರ ವಿಚಾರಣೆಯೂ ನಡೆಯುತ್ತಿದೆ. ಎ.26ರಂದು ಸಂಜೆ ಕಲ್ಲಾಪುವಿನಲ್ಲಿ ನಡೆದ ಹಲ್ಲೆ ಪ್ರಕರಣದ ಬಗ್ಗೆಯೂ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದರು. 
ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ 7 ದಿನಗಳವರೆಗೆ ನಿಷೇಧಾಜ್ಞೆ
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎ.26ರ ಸಂಜೆ 6ರಿಂದ 144 ಸೆಕ್ಷನ್ (ನಿಷೇಧಾಜ್ಞೆ) ಜಾರಿಗೊಳಿಸಲಾಗಿದ್ದು, ಐದಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ- ಸಭೆ ನಡೆಸುವುದು, ಶಸ್ತ್ರಾಸ್ತ್ರಗಳನ್ನು ಒಯ್ಯುವುದು, ಸ್ಫೋಟಕಗಳನ್ನು ಸಿಡಿಸುವುದು, ಪ್ರತಿಕೃತಿಗಳ ಪ್ರದರ್ಶನ, ಬಹಿರಂಗ ಘೋಷಣೆ, ಸಂಜ್ಞೆ ಮಾಡುವುದು, ಸಂಗೀತ ನುಡಿಸುವುದು, ಸಂಕೇತಗಳ ಭಿತ್ತಿ ಪತ್ರ ಅಥವಾ ಇತರ ಯಾವುದೇ ವಸ್ತುಗಳ ಪ್ರದರ್ಶನ ಹಾಗೂ ಸಾಮಾಜಿಕ ಭದ್ರತೆಗೆ ಬಾಧಕವಾಗುವ ಯಾವುದೇ ರೀತಿಯ ಕೃತ್ಯಗಳನ್ನು ನಿಷೇಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ್ ತಿಳಿಸಿದರು. ಬಿಗಿ ಬಂದೋಬಸ್ತ್: ಉಳ್ಳಾಲ ವ್ಯಾಪ್ತಿಯಲ್ಲಿ ಬಿಗಿ ಬಂದೋಬಸ್ತ್ ಕರ್ತವ್ಯಕ್ಕೆ 10 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜಿಸಲಾಗಿದೆ. ಹೆಚ್ಚುವರಿಯಾಗಿ 5 ಪೊಲೀಸ್ ಉಪಾಧೀಕ್ಷಕರು, 8 ಪೊಲೀಸ್ ನಿರೀಕ್ಷಕರು, 6 ಪೊಲೀಸ್ ಉಪ ನಿರೀಕ್ಷಕರು, 10 ಸಹಾಯಕ ಪೊಲೀಸ್ ಉಪ ನಿರೀಕ್ಷಕರು ಹಾಗೂ 260 ಪೊಲೀಸ್ ಸಿಬ್ಬಂದಿ ಸೇರಿದಂತೆ ಒಟ್ಟು 600 ಮಂದಿಯನ್ನು ನಿಯೋಜಿಸಲಾಗಿದೆ ಎಂದು ಪೊಲೀಸ್ ಆಯುಕ್ತ ಚಂದ್ರಶೇಖರ್ ಹೇಳಿದರು. 
ಉಳ್ಳಾಲದ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ ಅಳವಡಿಸಲು ರೇಂಜ್ ಲೆವೆಲ್‌ನಲ್ಲಿ ಯೋಜನೆ ಸಿದ್ಧಪಡಿಸಿ ಟೆಂಡರ್ ಕೂಡಾ ಕರೆಯಲಾಗಿದೆ ಎಂದು ಹೇಳಿದ ಅವರು, ಉಳ್ಳಾಲ ಸ್ಟೇಷನ್‌ನಲ್ಲಿ ಇನ್‌ಸ್ಪೆಕ್ಟರ್ ಮಾತ್ರವಲ್ಲದೆ ನಗರದ ವಿವಿಧ ಕಡೆಗಳಲ್ಲಿ ಇರುವ ಸಿಬ್ಬಂದಿಯ ಕೊರತೆಯನ್ನು ನೀಗಿಸಲು ಗೃಹ ಇಲಾಖೆಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಸ್ತುತ ಉಳ್ಳಾಲ ಠಾಣೆಯಲ್ಲಿ ಪಣಂಬೂರು ಇನ್ಸ್‌ಪೆಕ್ಟರ್‌ರನ್ನು ಇನ್‌ಚಾರ್ಜ್ ಆಗಿ ನೇಮಕ ಮಾಡಲಾಗಿದೆ ಎಂದವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಡಿಸಿಪಿಗಳಾದ ಡಾ.ಸಂಜೀವ ಎಂ.ಪಾಟೀಲ ಹಾಗೂ ಶಾಂತರಾಜು ಉಪಸ್ಥಿತರಿದ್ದರು.
ಅಮಾಯಕರ ಮೇಲೆ ಹಲ್ಲೆ ಮಾಡುವವರಿಗೆ ಬಿಸಿ ಮುಟ್ಟಿಸಬೇಕಿದೆ!
ಎ.12ರದು ಉಳ್ಳಾಲದ ಮೊಗವೀರಪಟ್ಣ ದಲ್ಲಿ ಕೊಲೆಯಾದ ರಾಜು ಕೋಟ್ಯಾನ್ ಸೇರಿದಂತೆ, ಎ.25 ಮತ್ತು 26ರಂದು ಹಲ್ಲೆಗೊಳಗಾಗಿರುವ ಇಬ್ರಾಹೀಂ ನಶ್ವಾನ್, ಸಫ್ವಾನ್, ಸಲೀಂ ಹಾಗೂ ನಿಝಾಮ್ ಅಮಾಯಕರಾಗಿದ್ದಾರೆ. ತಮ್ಮ ಪಾಡಿಗೆ ಕರ್ತವ್ಯಕ್ಕೆ ತೆರಳುತ್ತಿದ್ದವರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಹಲ್ಲೆ ನಡೆಸಿರುವ ಆರೋಪಿಗಳು ಹಾಗೂ ಅವರ ಹಿಂದೆ ಇರುವವರಿಗೂ ಬಿಸಿ ಮುಟ್ಟಿಸಲೇಬೇಕಾಗಿದೆ. ಇಲ್ಲವಾದಲ್ಲಿ ಮುಂದೆ ಈ ದುಷ್ಕರ್ಮಿಗಳ ಗುರಿ ನಾನು ಅಥವಾ ನೀವೂ ಆಗಿರಬಹುದು ಎಂದು ಪೊಲೀಸ್ ಆಯುಕ್ತ ಚಂದ್ರಶೇಖರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು. ಮತೀಯವಾದ ಒಂದು ಸಮಸ್ಯೆಯಾಗಿ ಪರಿಣಮಿಸಿದ್ದು, ಹಲ್ಲೆ ಪ್ರಕರಣಗಳಲ್ಲಿ ಮಾದಕ ದ್ರವ್ಯ ಜಾಲದ ಕೈವಾಡದ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X