ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಬೆಳ್ತಂಗಡಿ, ಎ.27: ಕಾರು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಮೃತಪಟ್ಟ ಘಟನೆ ಮದ್ದಡ್ಕದ ಸುಲ್ತಾನ್ಗಿರಿ ಎಂಬಲ್ಲಿ ಸಂಭವಿಸಿದೆ. ಸ್ಥಳೀಯ ನಿವಾಸಿ ಅಬೂಬಕರ್(66) ಮೃತಪಟ್ಟ ವ್ಯಕ್ತಿ.
ಢಿಕ್ಕಿ ಹೊಡೆದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಉರುಳಿದ ಪರಿಣಾಮ ಕಾರಿನಲ್ಲಿದ್ದ ಲೀಲಾವತಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಂಗಳವಾರ ರಾತ್ರಿವೇಳೆ ಅಬೂಬಕರ್ ರಸ್ತೆಯಲ್ಲಿ ನಡೆದುಕೊಂಡು ಹೋಗು ತ್ತಿದ್ದಾಗ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ಪರಿಣಾಮ ಅಬೂಬಕರ್ರ ತಲೆ, ಮುಖ ಹಾಗೂ ಎರಡೂ ಕಾಲುಗಳಿಗೆ ಗಂಭೀರ ಗಾಯಗಳಾಗಿತ್ತು. ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ.
ಢಿಕ್ಕಿ ಹೊಡೆದ ಕಾರು ಚಾಲಕನ ಹತೋಟಿ ತಪ್ಪಿ ಹೊಂಡಕ್ಕೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡ ಲೀಲಾವತಿ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಪುತ್ರ ಸಾಹಿಲ್ ಮುಹಮ್ಮದ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
Next Story