Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದ.ಕ. ಜಿಲ್ಲಾ ಪಂಚಾಯತ್‌ನಲ್ಲಿನ್ನು ಮಹಿಳಾ...

ದ.ಕ. ಜಿಲ್ಲಾ ಪಂಚಾಯತ್‌ನಲ್ಲಿನ್ನು ಮಹಿಳಾ ದರ್ಬಾರು!

ಅಧ್ಯಕ್ಷರಾಗಿ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷರಾಗಿ ಕಸ್ತೂರಿ ಪಂಜ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ28 April 2016 3:29 PM IST
share
ದ.ಕ. ಜಿಲ್ಲಾ ಪಂಚಾಯತ್‌ನಲ್ಲಿನ್ನು ಮಹಿಳಾ ದರ್ಬಾರು!

5 ವರ್ಷಗಳ ಅವಧಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ

ಮಂಗಳೂರು, ಎ. 28: ಮೀಸಲಾತಿಯ ಹಿನ್ನೆಲೆಯಲ್ಲಿ ದಕ ಜಿಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳೆರಡು ಮಹಿಳೆಯರಿಗೆ ದಕ್ಕಿದ್ದು, ಅದರಂತೆ ಬಿಜೆಪಿಯ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷರಾಗಿ ಹಾಗೂ ಉಪಾಧ್ಯಕ್ಷರಾಗಿ ಕಸ್ತೂರಿ ಪಂಜ ಆಯ್ಕೆಯಾಗಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಪ್ರಾದೇಶಿಕ ಆಯುಕ್ತ ಎ.ಎಂ. ಕುಂಜಪ್ಪ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಪುತ್ತೂರು ತಾಲೂಕಿನ ಪಾಣಾಜೆ ಕ್ಷೇತ್ರದ ಮೀನಾಕ್ಷಿ ಶಾಂತಿಗೋಡು ಅಧ್ಯಕ್ಷರಾಗಿ ಹಾಗೂ ಮಂಗಳೂರು ತಾಲೂಕು ಕಟೀಲು ಕ್ಷತ್ರೇದ ಕಸ್ತೂರಿ ಪಂಜ ಉಪಾಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಐದು ವರ್ಷಗಳ ಅವಧಿಗೆ ಸಚಿವ ಸಂಪುಟ ದರ್ಜೆಯ ಸ್ಥಾನವಾನವನ್ನು ತಮ್ಮದಾಗಿಸಿಕೊಂಡಿದ್ದಾರೆ.

ಇಂದಿನಿಂದ 2021ರ ಎಪ್ರಿಲ್ 27ರವರೆಗೆ ಅಧಿಕಾರದಲ್ಲಿರುತ್ತಾರೆ ಎಂದು ಚುನಾವಣಾ ಪ್ರಕ್ರಿಯೆ ಬಳಿಕ ಆಯು್ತ ಎ.ಎಂ. ಕುಂಜಪ್ಪ ಪ್ರಕಟಿಸಿದರು.

ಚುನಾವಣೆಯ ವೇಳೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಮೀನಾಕ್ಷಿ ಶಾಂತಿಗೋಡು ಮತ್ತು ಕಾಂಗ್ರೆಸ್‌ನಿಂದ ಶೇಖರ ಕುಕ್ಕೇಡಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿಯಿಂದ ಕಸ್ತೂರಿ ಪಂಜ ಮತ್ತು ಕಾಂಗ್ರೆಸ್‌ನಿಂದ ಅನಿತಾ ಹೇಮನಾಥ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು. ನಾಲ್ಕೂ ನಾಮಪತ್ರ ಅಂಗೀಕಾರಗೊಂಡ ಬಳಿಕ ಪರಸ್ಪರ ಪರ- ವಿರೋಧವಾಗಿ ಕೈ ಎತ್ತುವ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಿತು.

ಆಡಳಿತಾರೂಢ ಬಿಜೆಪಿಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಮೀನಾಕ್ಷಿ ಶಾಂತಿಗೋಡು ಮತ್ತು ಉಪಾಧ್ಯಕ್ಷೆ ಅಭ್ಯರ್ಥಿ ಕಸ್ತೂರಿ ಪಂಜ ತಲಾ 21 ಮತಗಳನ್ನು ವಿಜಯಯಾದರೆ, ಪ್ರತಿಪಕ್ಷ ಕಾಂಗ್ರೆಸ್‌ನ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶೇಖರ ಕುಕ್ಕೇಡಿ ಮತ್ತು ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಅನಿತಾ ಹೇಮನಾಥ ಶೆಟ್ಟಿ ಲಾ 15 ಮತಗಳನ್ನು ಪಡೆದರು.

ಕೃಷಿಕ ಬಾಬು ಎ. ಅವರ ಪತ್ನಿಯಾಗಿರುವ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಅವರು ಎಸ್‌ಎಸ್‌ಎಲ್‌ಸಿ ವಿದ್ಯಾಭ್ಯಾಸ ಹಾಗೂ ಐದು ವರ್ಷದಿಂದ ಆಶಾ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸೀ ಶಕ್ತಿ ಸ್ವಸಹಾಯ ಸಂಘದಲ್ಲಿದ್ದಾರೆ.

ಉಪಾಧ್ಯಕ್ಷೆ ಕಸ್ತೂರಿ ಪಂಜ ಅವರು ನಿವೃತ್ತ ಬ್ಯಾಂಕ್ ಮ್ಯಾನೇಜರ್ ಹೇಮಚಂದ್ರ ಅವರ ಪತ್ನಿಯಾಗಿದ್ದು, ಎಸ್‌ಎಸ್‌ಎಲ್ ವಿದ್ಯಾಭ್ಯಾಸ ಹೊಂದಿದ್ದಾರೆ. ಜಿಲ್ಲಾ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾಗಿದ್ದು, ಹಿಂದೆ ಕೆಮ್ರಾಲ್ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದರು. ಬಿಜೆಪಿಯಲ್ಲಿ ಮೂಡುಬಿದಿರೆ ಮಂಡಲ ಅಧ್ಯಕ್ಷೆ ಸಹಿತ ವಿವಿಧ ಜವಾಬ್ದಾರಿ ನಿಭಾಯಿಸಿದ್ದಾರೆ.

ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ ಕೆ.ಎಂ.ಗಾಯತ್ರಿ ಮತ್ತು ಜಿಲ್ಲಾ ಪಂಚಾಯಿತಿ ಸಿಇಒ ಪಿ.ಐ.ಶ್ರೀವಿದ್ಯಾ ಉಪಸ್ಥಿತರಿದ್ದರು.

ಚುನಾವಣೆಯ ಬಳಿಕ ನಡೆದ ಅಭಿನಂದನಾ ಸಮಾರಂಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆ.ಪಿ.ಸುಚರಿತ ಶೆಟ್ಟಿ, ಎಂ.ಎಸ್.ಮುಹಮ್ಮದ್, ಶಾಹುಲ್ ಹಮೀದ್, ಚಂದ್ರಪ್ರಕಾಶ್, ಕೊರಗಪ್ಪ ನಾಯ್ಕಿ, ಅನಿತಾ ಹೇಮನಾಥ ಶೆಟ್ಟಿ, ಮಮತಾ ಡಿ.ಎಸ್.ಗಟ್ಟಿ ಮೊದಲಾದವರು ನೂತನ ಅಧ್ಯಕ್ಷರನ್ನು ಅಭಿನಂದಿಸಿ ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಪ್ರತಾಪ್‌ಸಿಂಹ ನಾಯಕ್, ಮಾಜಿ ಸಚಿವ ಜೆ.ಕೃಷ್ಣ ಪಾಲೆಮಾರ್, ಮುಖಂಡರಾದ ಸಂಜೀವ ಮಠಂದೂರು, ಸತೀಶ್ ಕುಂಪಲ, ಸಂತೋಷ್ ಕುಮಾರ್ ರೈ ಬೋಳಿಯಾರ್, ಈಶ್ವರ ಕಟೀಲ್, ಸತೀಶ್ ಕುಂಪಲ ಮೊದಲಾದವರು ನೂತನ ಅಧ್ಯಕ್ಷ- ಉಪಾಧ್ಯಕ್ಷರನ್ನು ಅಭಿನಂದಿಸಿದರು.

ಕುಡಿಯುವ ನೀರಿಗೆ ಆದ್ಯತೆ: ಮೀನಾಕ್ಷಿ

ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಲ್ಬಣಿಸಿ ಬರದ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನರಿಗೆ ಕುಡಿಯುವ ನೀರು ಒದಗಿಸಲು ಪ್ರಥಮ ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಮೀನಾಕ್ಷಿ ಶಾಂತಿಗೋಡು ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಜಿಲ್ಲೆಯ ಗ್ರಾಮೀಣ ಪ್ರದೇಶಕ್ಕೆ ಮೂಲಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಪ್ರಾಮುಖ್ಯತೆ ಕೊಡುತ್ತೇನೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದ ಹಿರಿಯ ತೀರ್ಮಾನದಂತೆ ಮುನ್ನಡೆಯುತ್ತೇನೆ ಎಂದರು.

ಉಪಾಧ್ಯಕ್ಷೆ ಕಸ್ತೂರಿ ಪಂಜ ಮಾತನಾಡಿ, ಪಕ್ಷದ ಮುಖಂಡರು ಈ ಅವಕಾಶ ಕಲ್ಪಿಸಿದ್ದು, ಅವರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಕಾರ್ಯನಿರ್ವಹಿಸುವುದಾಗಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X