Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಂತ ಜೋಸೆಫರ ಶಾಲೆಗೆ ಶತಮಾನೋತ್ಸವದ...

ಸಂತ ಜೋಸೆಫರ ಶಾಲೆಗೆ ಶತಮಾನೋತ್ಸವದ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ28 April 2016 6:58 PM IST
share
ಸಂತ ಜೋಸೆಫರ ಶಾಲೆಗೆ ಶತಮಾನೋತ್ಸವದ ಸಂಭ್ರಮ

ಮಂಗಳೂರು, ಎ.28: ಬಜಾಲ್‌ನ ಸಂತ ಜೋಸೆಫರ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಂಭ್ರಮದಲ್ಲಿದ್ದು, ಉದ್ಘಾಟನಾ ಸಮಾರಂಭವು ಎಪ್ರಿಲ್ 30ರಂದು ಸಂಜೆ 6 ಗಂಟೆಗೆ ಶಾಲಾ ವಠಾರದಲ್ಲಿ ನಡೆಯಲಿದೆ ಎಂದು ಸ್ವಾಗತ ಸಮಿತಿಯ ಸಂಚಾಲಕ ಹಾಗೂ ಮಾಜಿ ಕಾರ್ಪೊರೇಟರ್ ನಾಗೇಂದ್ರ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.

ಮಂಗಳೂರು ಕೆಥೊಲಿಕ್ ಧರ್ಮಪ್ರಾಂತ್ಯದ ಪ್ರಧಾನ ಗುರು ಅ.ವಂ.ಮೊನ್ಸಿಞೊ ಡೆನಿಸ್ ಮೊರಾಸ್ ಪ್ರಭು ಸಭ್ಧಾಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದು, ಮುಖ್ಯ ಅತಿಥಿಗಳಾಗಿ ಎಂಎಲ್‌ಸಿ ಐವನ್ ಡಿಸೋಜಾ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ, ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ.ಜ್ಞಾನೇಶ್, ಕೆಥೊಲಿಕ್ ವಿದ್ಯಾ ಸಂಸ್ಥೆಯ ವಂ.ಫಾ.ಜೆರಾಲ್ಡ್ ಡಿಸೋಜಾ, ಮಂಗಳಾದೇವಿ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಜಿತಕಾಮಾನಂದ, ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಸಯೀದ್ ಇಸ್ಮಾಯೀಲ್, ಉದ್ಯಮಿ ಆರ್.ಶ್ರೀಕರ ಪ್ರಭು, ಕಾರ್ಪೊರೇಟರ್‌ಗಳಾದ ವಿನಯಕುಮಾರ್ ಶೆಟ್ಟಿ, ಪ್ರವೀಣ್‌ಚಂದ್ರ ಆಳ್ವ, ಸುರೇಂದ್ರ ಜೆ. ಸುಮಯ್ಯಿ ಅಶ್ರಫ್ ಭಾಗವಹಿಸಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಶಾಲೆಯಲ್ಲಿ 37 ವರ್ಷಗಳ ಕಾಲ ಸೇವೆ ಸಲ್ಲಿಸಿದ ಮುಖ್ಯೋಪಾಧ್ಯಾಯಿನಿ ಸೇವೆ ಸಲ್ಲಿಸಿ ನಿವೃತ್ತಿಗೊಂಡಿರುವ ಮೇರಿ ವಾಸ್ ಅವರನ್ನು ಸನ್ಮಾನಿಸಲಾಗುವುದು. ಸಂಜೆ 6 ಗಂಟೆಯಿಂದ ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ, ಆಹ್ವಾನಿತ ತಂಡಗಳಿಂದ ಡ್ಯಾನ್ಸ್ ಸ್ಪರ್ಧೆ ಹಾಗೂ ದೇವದಾಸ್ ಕಾಪಿಕಾಡ್ ಅವರ ‘ಬಂಗಾರ್’ ಹಾಸ್ಯಮಯ ತುಳು ನಾಟಕವನ್ನು ಪ್ರದರ್ಶಿಸಲಾಗುವುದು ಎಂದು ನಾಗೇಂದ್ರ ಕುಮಾರ್ ತಿಳಿಸಿದರು.

ಶತಮಾನೋತ್ಸವ ಅಂಗವಾಗಿ ಮೇ ತಿಂಗಳಿನಲ್ಲಿ ವಾಲಿಬಾಲ್ ಪಂದ್ಯಾಟ, ಜೂನ್‌ನಲ್ಲಿ ಆರೋಗ್ಯ ತಪಾಸಣಾ ಶಿಬಿರ, ಜುಲೈಯಲ್ಲಿ ಡ್ಯಾನ್ಸ್ ಸ್ಪರ್ಧೆ, ಆಗಸ್ಟ್‌ನಲ್ಲಿ ರಕ್ತದಾನ ಶಿಬಿರ, ಅಕ್ಟೋಬರ್‌ನಲ್ಲಿ ತ್ರೋಬಾಲ್ ಪಂದ್ಯಾಟ, ನವೆಂಬರ್‌ನಲ್ಲಿ ಶಾಲೆಡೊಂಜಿ ಗೌಜಿ ಕಾರ್ಯಕ್ರಮ ಹಾಗೂ 2017ರ ಜನವರಿ ತಿಂಗಳಿನಲ್ಲಿ ಶತಮಾನೋತ್ಸವ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಲಿದೆ ಎಂದು ಅವರು ತಿಳಿಸಿಗದರು.

ಸುದ್ದಿಗೋಷ್ಠಿಯಲ್ಲಿ ಶತಮಾನೋತ್ಸ ಸಮಿತಿಯ ಅಧ್ಯಕ್ಷ ಆಲ್ವಿನ್ ಡಿಸೋಜ, ಕಾರ್ಯದರ್ಶಿ ವೌರಿಸ್ ಡಿಸೋಜ, ಹಣಕಾಸು ಸಮಿತಿಯ ಸಂಚಾಲಕ ಕಿರಣ್ ರೈ ಬಜಾಲ್, ವ್ಯವಸ್ಥಾಪನಾ ಸಮಿತಿಯ ಶಶಿಕಾಂತ್ ಶೆಟ್ಟಿ, ಆಡಳಿತ ಮಂಡಳಿಯ ಉಪಾಧ್ಯಕ್ಷ ಹೆನ್ರಿ ಡಿಸೋಜ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X