Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಲಿತರು ರಾಜಕೀಯ ಅಧಿಕಾರ ಪಡೆದಾಗ ಮಾತ್ರ...

ದಲಿತರು ರಾಜಕೀಯ ಅಧಿಕಾರ ಪಡೆದಾಗ ಮಾತ್ರ ಅಭಿವೃದ್ಧಿ ಸಾಧ್ಯ

ವಾರ್ತಾಭಾರತಿವಾರ್ತಾಭಾರತಿ28 April 2016 9:55 PM IST
share

ಕಳಸ, ಎ.28: ಅಂಬೇಡ್ಕರ್ ತಮ್ಮ ಬದುಕನ್ನು ದಲಿತರ, ಶೋಷಿತರ ಮುಕ್ತಿಗಾಗಿ ಮತ್ತು ಸಂವಿಧಾನದ ಮೂಲಕ ದಲಿತರನ್ನು ಮುಖ್ಯವಾಹಿನಿಗೆ ತರಲು ಬದುಕನ್ನು ಮುಡಿಪಾಗಿಟ್ಟಿದ್ದಾರೆ. ಮೀಸಲಾತಿ ಸೌಲಭ್ಯದ ಮೂಲಕ ಶೋಷಿತರ, ಅಸ್ಪಶ್ಯರ ಏಳಿಗೆಗೆ ನೂರಾರು ಕಾನೂನುಗಳನ್ನು ರೂಪಿಸಿದ್ದಾರೆ. ಆದರೆ ಪ್ರಸ್ತುತ ವ್ಯವಸ್ಥೆಯಲ್ಲಿ ಅಂಬೇಡ್ಕರ್ ವಿಚಾರಗಳನ್ನು ಮೈಗೂಡಿಸಿಕೊಳ್ಳದ ಶೋಷಿತರು ಮಾನಸಿಕ ಗುಲಾಮಗಿರಿಯಲ್ಲಿ ಬದುಕುತ್ತಿದ್ದಾರೆ ಎಂದು ಕಳಸದ ಸರಕಾರಿ ಆಸ್ಪತ್ರೆಯ ದಂತ ವೈದ್ಯ ಪ್ರೇಮ್‌ಕುಮಾರ್ ಹೇಳಿದ್ದಾರೆ.

 ಅವರು ಗುರುವಾರ ಇಲ್ಲಿನ ದುರ್ಗಾ ಮಂಟಪದಲ್ಲಿ ಡಿಎಸ್‌ಎಸ್ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್‌ರವರ 125ನೆ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ದಲಿತರು ರಾಜಕೀಯ ಅಧಿಕಾರ ಪಡೆದಾಗ ಮಾತ್ರ ಅಭಿವೃದ್ಧಿ ಮತ್ತು ಏಳಿಗೆ ಸಾಧ್ಯ ಎಂದು ಅಂಬೇಡ್ಕರ್ ಹೇಳಿದ್ದರು. ಆದರೆ ಸದ್ಯದ ರಾಜಕೀಯ ವ್ಯವಸ್ಥೆಯಲ್ಲಿ ದಲಿತರು ತಮ್ಮ ಮತದಾನದ ಹಕ್ಕುಗಳನ್ನು ಹಣ, ಹೆಂಡ ಮೊದಲಾದ ಆಮಿಷಗಳಿಗೆ ಮಾರಿಕೊಳ್ಳುತ್ತಿದ್ದಾರೆ. ಇದರ ಫಲವಾಗಿ ದಲಿತರು ಇಂದಿಗೂ ಮಾನಸಿಕವಾಗಿ ಗುಲಾಮಗಿರಿಯಲ್ಲಿದ್ದಾರೆ. ಇದು ಅಂಬೇಡ್ಕರ್ ಆಶಯಕ್ಕೆ ವಿರುದ್ಧವಾದ ಬೆಳವಣಿಗೆಯಾಗಿದ್ದು, ಸಂಘಟನೆಗಳು, ಸುಶಿಕ್ಷಿತರು ಅಂಬೇಡ್ಕರ್ ವಿಚಾರಧಾರೆ, ಹೋರಾಟ, ಆಶಯ, ಕನಸುಗಳ ಬಗ್ಗೆ ದಲಿತರಲ್ಲಿ ಜನಜಾಗೃತಿ ಮೂಡಿಸುವ ಕೆಲಸ ಹೆಚ್ಚು ಹೆಚ್ಚಾಗಿ ನಡೆಸಬೇಕೆಂದರು.

ದಲಿತರನ್ನು ಗುಲಾಮಗಿರಿಯ ಸಂಕೋಲೆಯಿಂದ ಬಿಡಿಸಲು ಅಂಬೇಡ್ಕರ್ 10ಕ್ಕೂ ಹೆಚ್ಚು ವಿಷಯಗಳಲ್ಲಿ ಪಾಂಡಿತ್ಯ ಸಂಪಾದಿಸಿದರು. ದಲಿತರಿಗೆ ಹೋರಾಟದ ಹಾದಿ ತೋರಿಸಿ, ಕಾನೂನುಗಳನ್ನು ರೂಪಿಸಿ ಶೋಷಣೆಯಿಂದ ಮುಕ್ತಿ ದೊರಕಿಸಿಕೊಟ್ಟರು. ಆದರೆ ಶೋಷಿತ ವರ್ಗಕ್ಕೆ ಅಂಬೇಡ್ಕರ್ ವಿಚಾರಗಳ ಅರಿವಿದ್ದರೂ, ತಮ್ಮ ಹಕ್ಕುಗಳನ್ನು ಆಮಿಷಗಳಿಗೆ ಒತ್ತೆ ಇಡುತ್ತಿರುವುದರ ಪರಿಣಾಮ ದಲಿತರನ್ನು ಪ್ರಭಾವಿಗಳು, ಶ್ರೀಮಂತರು, ಮೇಲ್ವರ್ಗದವರೇ ಆಳುತ್ತಿದ್ದಾರೆ. ದಲಿತರ ಹಕ್ಕುಗಳು ಉಳ್ಳವರ ಪಾಲಾಗುತ್ತಿದ್ದು, ಈ ಬಗ್ಗೆ ಕೆಳ ವರ್ಗದವರು ಎಚ್ಚೆತ್ತುಕೊಳ್ಳಬೇಕು ಎಂದರು.

 ಡಿಎಸ್‌ಎಸ್ ರಾಜ್ಯ ಸಂಚಾಲಕ ತರೀಕೆರೆ ವೆಂಕಟೇಶ್ ಮಾತನಾಡಿ, ಜಾತಿ ವ್ಯವಸ್ಥೆ ಮೂಲಕ ಕೆಳವರ್ಗದವರ ಬದುಕನ್ನು ಕಾಲನಿಗಳೆಂಬ ನರಕಕ್ಕೆ ಮಾತ್ರ ಸೀಮಿತ ಮಾಡಿದ ಮನುವಾದಿಗಳು ಪ್ರಸ್ತುತ ಅಂಬೇಡ್ಕರ್ ವಿಚಾರಗಳನ್ನು ಸ್ವೀಕರಿಸುತ್ತಿರುವುದಾಗಿ ಹೇಳುತ್ತಿದ್ದಾರೆ. ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ ಮೊದಲಾದ ಬದಲಾವಣೆಯ ನಾಟಕವಾಡುತ್ತಿದ್ದಾರೆ. ಇದರ ಹಿಂದೆ ಮನುವಾದಿಗಳ ಹುನ್ನಾರ ಅಡಗಿದ್ದು ಓಟು ಹಾಗೂ ಹಿಂದೂ ಧರ್ಮದ ರಕ್ಷಣೆಗಾಗಿ ಮೇಲ್ವರ್ಗದ ಕೋಮುವಾದಿಗಳು ಈ ಹುನ್ನಾರ ನಡೆಸುತ್ತಿದ್ದಾರೆ. ಇದನ್ನು ದಲಿತರು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕಳಸ ಗ್ರಾಪಂ ಅಧ್ಯಕ್ಷೆ ರತಿ, ತಾಲೂಕು ಸಂಚಾಲಕ ಲೋಕವಳ್ಳಿ ಮಂಜುನಾಥ್, ಹೋಬಳಿ ಸಂಚಾಲಕ ಚಂದ್ರು, ಛಲವಾದಿ ಮಹಾಸಭಾದ ರಾಜ್ಯ ಸಂಚಾಲಕಿ ಶಶಿಕಲಾ ಮಾತನಾಡಿದರು. ಇದಕ್ಕೂ ಮೊದಲು ಅಂಬೇಡ್ಕರ್ ಭಾವಚಿತ್ರದೊಂದಿಗೆ ನೂರಾರು ಕಾರ್ಯಕರ್ತರು ಪಟ್ಟಣದ ಮುಖ್ಯ ಬೀದಿಗಳಲ್ಲಿ ಮೆರವಣಿಗೆ ನಡೆಸಿ ನಂತರ ದುರ್ಗಾ ಮಂಟಪದಲ್ಲಿ ಸಮಾವೇಶಗೊಂಡರು.

ಡಿಎಸ್‌ಎಸ್ ಸಂಚಾಲಕರಾದ ಹೂವಯ್ಯ, ಶಾರದಾ, ಮಾಗಲು ಕೃಷ್ಣ, ತಲಗೋಡು ಗಂಗಯ್ಯ, ಜನಾರ್ದನ್, ಗೋಪಾಲ್, ಅಣ್ಣಪ್ಪ, ಮರಿಯಯ್ಯ, ಕರವೇ ರಾಜು ವೇದಿಕೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X