Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತುಂಬೆಯಲ್ಲಿನ್ನು 1 ವಾರಕ್ಕಾಗುವಷ್ಟೇ...

ತುಂಬೆಯಲ್ಲಿನ್ನು 1 ವಾರಕ್ಕಾಗುವಷ್ಟೇ ನೀರು!

ಮನಪಾ ಅಧಿಕಾರಿಗಳ ನಿರ್ಲಕ್ಷದಿಂದ ಸಮಸ್ಯೆ: ಆರೋಪ

ವಾರ್ತಾಭಾರತಿವಾರ್ತಾಭಾರತಿ29 April 2016 8:07 PM IST
share
ತುಂಬೆಯಲ್ಲಿನ್ನು 1 ವಾರಕ್ಕಾಗುವಷ್ಟೇ ನೀರು!

 ಮಂಗಳೂರು,ಎ.29: ತುಂಬೆ ಅಣೆಕಟ್ಟಿನಿಂದ ಮಂಗಳೂರು ಮಹಾನಗರ ಪಾಲಿಕೆಗೆ ಪ್ರಸ್ತುತ ಎರಡು ದಿನಗಳಿಗೊಮ್ಮೆ ಪೂರೈಕೆ ಮಾಡಲಾಗುತ್ತಿದ್ದು, ಅಣೆಕಟ್ಟಿನಲ್ಲಿ ಮುಂದಿನ ಒಂದು ವಾರಕ್ಕೆ ಸಾಕಾಗುವಷ್ಟು ಮಾತ್ರವೇ ನೀರು ಲಭ್ಯ ಎಂದು ಮೇಯರ್ ಹರಿನಾಥ್ ತಿಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೀವನದಿ ನೇತ್ರಾವತಿಯಿಂದ ಮಂಗಳೂರಿಗೆ ಪೂರೈಕೆಯಾಗುವ ನೀರಿನ ಪ್ರಮಾಣದಲ್ಲಿ ಇಳಿಕೆ ಆಗಿರುವುದರಿಂದ ಜನರು ಕಷ್ಟ ಪಡುವಂತಾಗಿದೆ ಎಂದು ವಿಷಾದಿಸಿದರು.

 ಸಾರ್ವಜನಿಕರು ಮಂದಿರ, ಚರ್ಚ್, ಮಸೀದಿಗಳಲ್ಲಿ ಮಳೆಗಾಗಿ ಪ್ರಾರ್ಥನೆ ಮಾಡಬೇಕೆಂದು ಮನವಿ ಮಾಡಿದ ಅವರು, ಪಾಲಿಕೆಗೆ ಇದೊಂದು ಸವಾಲು ಆಗಿದ್ದು, ಸಮರ್ಥವಾಗಿ ನಿಭಾಯಿಸಲು ಶ್ರಮಿಸಲಾಗುವುದು ಎಂದರು.

 ಕಳೆದ ವರ್ಷ ಪ್ರಕೃತಿ ನಿಯಮದಲ್ಲಿ ಉಂಟಾದ ಏರುಪೇರಿನಿಂದಾಗಿ ರಾಜ್ಯದಲ್ಲೇ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಉಡುಪಿ, ಮಡಿಕೇರಿ ಹಾಗೂ ಮಂಗಳೂರಿನಲ್ಲೂ ನೀರಿನ ಕೊರತೆ ಎದುರಿಸುವಂತಾಗಿದೆ. ಪ್ರತಿ ವರ್ಷ ಎಪ್ರಿಲ್‌ನಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿತ್ತು. ಈ ಬಾರಿ ಅದೂ ಆಗಿಲ್ಲದ ಕಾರಣ ದೇವರಿಗೆ ಮೊರೆ ಹೋಗಬೇಕಾಗಿದೆ ಎಂದರು. ವಿಪಕ್ಷ ಸದಸ್ಯ ಪ್ರೇಮಾನಂದ ಶೆಟ್ಟಿ ಮಾತನಾಡಿ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಲು ನೀರು ನಿರ್ವಹಣೆಯಲ್ಲಿ ಅಧಿಕಾರಿಗಳು ತೋರಿದ ನಿರ್ಲಕ್ಷ್ಯ ಕಾರಣ ಎಂದರು ಆರೋಪಿಸಿದರು. ಎಎಂಆರ್ ಅಣೆಕಟ್ಟು ಹಾಗೂ ತುಂಬೆ ಅಣೆಕಟ್ಟಿನಲ್ಲಿರುವ ನೀರಿನ ಪ್ರಮಾಣದ ಬಗ್ಗೆ ಅಧಿಕಾರಿಗಳು, ಸಚಿವರು ಹಾಗೂ ಮನಪಾ ಆಡಳಿತದ ಹೇಳಿಕೆ ಸಾರ್ವಜನಿಕರಲ್ಲಿ ಸಾಕಷ್ಟು ಗೊಂದಲಕ್ಕೆ ಸೃಷ್ಟಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ ತುಂಬೆಯಲ್ಲಿ ನೀರಿನ ಪ್ರಮಾಣ 4 ಅಡಿ ಕುಸಿತ ಕಂಡರೆ, ಎಎಂಆರ್ ಅಣೆಕಟ್ಟೆಯಲ್ಲಿ 12 ಅಡಿ ಕುಸಿತವಾಗಿದೆ. ಈ ವ್ಯತ್ಯಾಸಕ್ಕೆ ಕಾರಣವೇನು ಅವರು ಪ್ರಶ್ನಿಸಿದರು. ಈ ಸಂದರ್ಭ ಅಧಿಕಾರಿಗಳನ್ನು ಸಮರ್ಥಿಸಿ ಮಾತನಾಡಿದ ಮೇಯರ್ ಹರಿನಾಥ್, ಕಷ್ಟಕರ ಪರಿಸ್ಥಿತಿಯಲ್ಲಿ ಅಧಿಕಾರಿಗಳಾದ ಲಿಂಗೇ ಗೌಡ ಹಾಗೂ ನರೇಶ್ ಶೆಣೈಯವರು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನದಿ ವ್ಯಾಪ್ತಿಯಲ್ಲಿ ಹಾಕಲಾಗಿರುವ ಬಂಡ್‌ಗಳನ್ನು ತೆರವುಗೊಳಿಸುವಲ್ಲಿ ಅಧಿಕಾರಿಗಳು ರಾತ್ರಿ ಹಗಲಿಡೀ ಶ್ರಮಿಸುತ್ತಿದ್ದಾರೆ ಎಂದರು. ವಿಪಕ್ಷ ನಾಯಕಿ ರೂಪಾ ಡಿ. ಬಂಗೇರ ಮಾತನಾಡಿ, ನೂತನ ವೆಂಟೆಡ್ ಡ್ಯಾಂ ನಿರ್ಮಾಣವಾಗಿದ್ದಲ್ಲಿ ಮೇ ತಿಂಗಳ ಅಂತ್ಯದವರೆಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿರಲಿಲ್ಲ ಎಂದು ಆಕ್ಷೇಪಿಸಿದರು.

 ಸಮಸ್ಯೆ ಅರಿವಿನ ಬಳಿಕವೂ ಎಸ್‌ಇಝೆಡ್, ಎಂಆರ್‌ಪಿಎಲ್‌ಗೆ ನೀರು!

ನಗರದಲ್ಲಿ ನೀರಿನ ಸಮಸ್ಯೆ ಏರ್ಪಟ್ಟ ಬಳಿಕವೂ ಎಸ್‌ಇಝೆಡ್, ಎಂಆರ್‌ಪಿಎಲ್‌ನವರು ದಿನದ 24 ಗಂಟೆಯೂ ನೀರು ಪೂರೈಕೆ ಮಾಡಿದ್ದರಿಂದಲೇ ಎಎಂಆರ್ ಡ್ಯಾಂ ಬರಿದಾಗಿದೆ. ಹೈಡ್ರೋ ಪ್ರಾಜೆಕ್ಟ್ ಡಿಸೆಂಬರ್‌ಗೆ ನಿಲ್ಲಿಸಬೇಕೆಂಬ ನಿಯಮವಿದೆ. ಹಾಗಿದ್ದರೂ ಫೆಬ್ರವರಿ ವರೆಗೂ ಎಎಂಆರ್‌ನವರು ವಿದ್ಯುತ್ ಉತ್ಪಾದನೆಗೆ ನೀರು ಬಳಕೆ ಮಾಡುತ್ತಿದ್ದರು ಎಂದು ಮಾಜಿ ಮೇಯರ್ ಮಹಾಬಲ ಮಾರ್ಲ ಆರೋಪಿಸಿದರು. ಸುರತ್ಕಲ್ ಪ್ರದೇಶದಲ್ಲಿರುವ 12 ಬಾವಿಗಳನ್ನು ದುರಸ್ತಿ ಮಾಡಲು ಒಂದು ತಿಂಗಳ ಹಿಂದೆ ಮನವಿ ಸಲ್ಲಿಸಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಲಭ್ಯವಿರುವ ಸ್ಥಳೀಯ ಮೂಲಕ್ಕೆ ಆದ್ಯತೆ ನೀಡದೆ ಪ್ರಾಕೃತಿಕ ತೊಂದರೆ ಬಗ್ಗೆ ಮಾತ್ರ ಮಾತನಾಡಿದರೆ ಸಾಲದು ಎಂದು ತಿಲಕ್ ರಾಜ್ ಟೀಕಿಸಿದರು. ಎರಡು ದಿನಗಳಿಗೊಮ್ಮೆ ಪೂರೈಕೆಯಾಗುವ ನೀರು ಕೆಲವು ವಾರ್ಡ್‌ಗಳ ಶೇ. 40ರಷ್ಟು ಭಾಗವನ್ನು ತಲುಪುತ್ತಿಲ್ಲ. ನೀರಿಗಾಗಿ ಕೈಗೊಂಡ ಪರ್ಯಾಯ ವ್ಯವಸ್ಥೆಗಳು ಅನುಷ್ಠಾನವಾಗಿಲ್ಲ. ಟ್ಯಾಂಕರ್ ನೀರು ಪೂರೈಕೆಯಾಗುತ್ತಿಲ್ಲ. ನಗರದಲ್ಲಿ ಟ್ಯಾಂಕರ್ ಮಾಫಿಯಾ ಕೂಡಾ ನಡೆಯುತ್ತಿದೆ ಎಂಬ ಆರೋಪಗಳು ಸದಸ್ಯರಿಂದ ವ್ಯಕ್ತವಾಯಿತು.

   ಆಯುಕ್ತರ ಹೇಳಿಕೆ- ಸ್ಥಾಯಿ ಸಮಿತಿ ಅಧ್ಯಕ್ಷರ ಹೇಳಿಕೆಯಲ್ಲಿ ಗೊಂದಲ!

ಆಯುಕ್ತ ಡಾ. ಎಚ್. ಎನ್. ಗೋಪಾಲ ಕೃಷ್ಣ ಮಾತನಾಡಿ, ನೀರಿನ ಸಮಸ್ಯೆಯ ಬಗ್ಗೆ ಏಪ್ರಿಲ್ 17ರಂದೇ ಜಿಲ್ಲಾಧಿಕಾರಿಯವರಿಗೆ ತಿಳಿಸಲಾಗಿತ್ತು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಭರತ್‌ಲಾಲ್ ಮೀನಾ ಅವರು ಅಂದು ಸಭೆ ನಡೆಸಿದ ವೇಳೆ ಪರಿಸ್ಥಿತಿ ಕೈಮೀರುವ ಬಗ್ಗೆ ತಿಳಿಸಲಾಗಿತ್ತು. ಎಪ್ರಿಲ್ 20ರಿಂದ ಎರಡು ದಿನಗಳಿಗೊಮ್ಮೆ ಕುಡಿಯುವ ನೀರು ಪೂರೈಕೆ ಮಾಡುವ ಬಗ್ಗೆ ಹಾಗೂಕೈಗಾರಿಕೆಗಳಿಗೆ ಸ್ಥಗಿತಗೊಳಿಸುವಂತೆ ಕೋರಿದಾಗ, ಆಗ ಶೇ. 50ರಷ್ಟು ಮಾತ್ರ ಕಡಿತಕ್ಕೆ ಆದೇಶಿಸಲಾಯಿತು. ಪ್ರಸ್ತುತ ತುಂಬೆ ಅಣೆಕಟ್ಟಿನಲ್ಲಿ 6 .6 ಅಡಿಗಳಷ್ಟು ನೀರಿದ್ದು, ನೀರು ಪೂರೈಕೆಯಾಗದ ಭಾಗಗಳಿಗೆ 18 ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆಯಾಗುತ್ತಿದೆ ಎಂದು ಹೇಳಿದರು.

 ಆಯುಕ್ತರ ಹೇಳಿಕೆಯಲ್ಲಿ ಗೊಂದಲವಿದೆ, ನಗರದಲ್ಲಿ 22 ಟ್ಯಾಂಕರ್‌ಗಳಿಂದ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಮಾಹಿತಿ ಇದೆ. ಆದರೆ ಆಯುಕ್ತರು 18 ಟ್ಯಾಂಕರ್‌ಗಳಲ್ಲಿ ಎಂದು ಹೇಳುತ್ತಿದ್ದಾರೆ ಎಂದು ವಿಪಕ್ಷ ನಾಯಕಿ ರೂಪಾ ಡಿ. ಬಂಗೇರ ಆಕ್ಷೇಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸ್ಥಾಯಿ ಸಮಿತಿ ಅಧ್ಯಕ್ಷ ಲ್ಯಾನ್ಸಿ ಲೋಟ್ ಪಿಂಟೋ, ಬೆಂದೂರ್‌ವೆಲ್‌ನ ನೀರು ಶುದ್ಧೀಕರಣ ಘಟಕದಿಂದ 13 ಟ್ಯಾಂಕರ್‌ಗಳು, ಕರಾವಳಿ ಪಂಪ್‌ಹೌಸ್‌ನಿಂದ 3 ಹಾಗೂ ಸುರತ್ಕಲ್‌ನಲ್ಲಿ 6 ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಗೊಂದಲಕ್ಕೆ ತೆರೆ ಎಳೆದರು.

ಸಭೆಯಲ್ಲಿ ಉಪ ಮೇಯರ್ ಸುಮಿತ್ರ ಕರಿಯ, ಸ್ಥಾಯಿ ಸಮಿತಿ ಬಶೀರ್ ಅಹಮ್ಮದ್, ಅಪ್ಪಿಲತಾ ಉಪಸ್ಥಿತರಿದ್ದರು. ಪರ್ಯಾಯ ಕ್ರಮಕ್ಕೆ ಸಿದ್ಧತೆ:

ಆಯುಕ್ತ ಡಾ.ಗೋಪಾಲಕೃಷ್ಣ ತುಂಬೆ ಅಣೆಕಟ್ಟಿನಲ್ಲಿ ನೀರು ಬರಿದಾದ ಸಂದರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ವಾರ್ಡ್‌ಗೆ ಒಂದರಂತೆ ಟ್ಯಾಂಕರ್‌ಗಳಲ್ಲಿ ನೀರು ಪೂರೈಸಲು ಸಿದ್ಧತೆ ನಡೆಸಲಾಗಿದೆ. ನೀರಿನ ಮೂಲಗಳನ್ನು ಪತ್ತೆ ಮಾಡಿ ನೀರಿನ ಪರಿಶುದ್ಧತೆಯ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಎಎಂಆರ್ ಅಣೆಕಟ್ಟಿನ 11 ಕಿ.ಮೀ. ವ್ಯಾಪ್ತಿಯಲ್ಲಿ ರೈತರು ಅನಧಿಕೃತವಾಗಿ ಪಂಪ್ ಹಾಕಿ ಬಳಸುತ್ತಿದ್ದುದನ್ನು ತೆರವುಗೊಳಿಸಲಾಗಿದೆ. ಗುಂಡ್ಯ, ಕೆಂಪು ಹೊಳೆಯಿಂದ ದಿಶಾ ಪವರ್ ಪ್ರಾಜೆಕ್ಟ್‌ನಲ್ಲಿ 2 ಎಂಸಿಎಂ ನೀರು ಲಭ್ಯವಿದ್ದು, ಪರಿಸ್ಥಿತಿ ಕೈಮೀರಿದಲ್ಲಿ ಆ ನೀರು ಬಿಡುಗಡೆ ಮಾಡುವಂತೆ ಜಿಲ್ಲಾಧಿಕಾರಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ತುಂಬೆ ಅಣೆಕಟ್ಟಿನಲ್ಲಿ ಗುರುವಾರ 6.8 ಅಡಿ ನೀರಿದ್ದರೆ, ಇಂದು 6.6 ಅಡಿ ನೀರು ಲಭ್ಯವಿದೆ ಇಂದು ಎಂದು ಆಯುಕ್ತ ಡಾ. ಎಚ್.ಎನ್. ಗೋಪಾಲಕೃಷ್ಣ ತಿಳಿಸಿದರು.

 ಬಂಡ್‌ಗಳ ತೆರವು: 5-6 ಇಂಚು ನೀರಿನ ಹರಿವು

ಎಎಂಆರ್ ಅಣೆಕಟ್ಟಿನ ಮೇಲೆ ಎಂಆರ್‌ಪಿಎಲ್‌ನವರ ಡ್ಯಾಂನಲ್ಲಿ 1 ಎಂಸಿಎಂ ನೀರು ಲಭ್ಯವಿದೆ. ಅದರಲ್ಲಿ 15 ಅಡಿಯಷ್ಟು ಮರಳು ತುಂಬಿದೆ. ಡ್ರೆಜ್ಜಿಂಗ್ ಮಾಡಿ ಅಲ್ಲಿಂದ ನೀರು ತರಿಸಲಾಗುವುದು. ನೇತ್ರಾವತಿ ನದಿಯ ಉದ್ದಕ್ಕೆ ಸುಮಾರು 70ರಿಂದ 72 ಕಡೆಗಳಲ್ಲಿ ಬಂಡ್‌ಗಳನ್ನು ಹಾಕಿದ್ದನ್ನು ತೆರವುಗೊಳಿಸಲಾಗಿದೆ. ಕಳೆದ ಮೂರು ದಿನದಿಂದ 5ರಿಂದ 6 ಇಂಚು ನೀರು ತುಂಬೆ ಅಣೆಕಟ್ಟಿಗೆ ಹರಿದು ಬಂದಿದೆ ಎಂದು ಹಿರಿಯ ಅಧಿಕಾರಿ ಲಿಂಗೇ ಗೌಡ ಸಭೆಯಲ್ಲಿ ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X