Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಮೂಹಿಕ ಮತ್ತು ಅಂತರ್ಜಾತಿ ವಿವಾಹಗಳಿಂದ...

ಸಾಮೂಹಿಕ ಮತ್ತು ಅಂತರ್ಜಾತಿ ವಿವಾಹಗಳಿಂದ ಜಾತೀಯತೆ ಅಳಿಸಲು ಸಾಧ್ಯ: ಸಚಿವ ಮನೋಹರ ತಹಸೀಲ್ದಾರ್

ವಾರ್ತಾಭಾರತಿವಾರ್ತಾಭಾರತಿ29 April 2016 9:01 PM IST
share
ಸಾಮೂಹಿಕ ಮತ್ತು ಅಂತರ್ಜಾತಿ ವಿವಾಹಗಳಿಂದ ಜಾತೀಯತೆ ಅಳಿಸಲು ಸಾಧ್ಯ: ಸಚಿವ ಮನೋಹರ ತಹಸೀಲ್ದಾರ್

ಬೆಳ್ತಂಗಡಿ, ಎ.29: ಸಾಮೂಹಿಕ ವಿವಾಹ ಮತ್ತು ಅಂತರ್ಜಾತಿ ವಿವಾಹಗಳಿಂದ ಸಮಾಜದಲ್ಲಿರುವ ಜಾತೀಯತೆಯನ್ನು ಅಳಿಸಲು ಸಾಧ್ಯ. ಕ್ಷೇತ್ರದಲ್ಲಿ 45 ವರ್ಷಗಳಿಂದ ನಡೆದುಕೊಂಡು ಬರುತ್ತಿರುವ ಸಾಮೂಹಿಕ ವಿವಾಹ ಇಂತಹ ಸಮಸ್ಯೆಗಳ ನಿವಾರಣೆಗೆ ನೆರವಾಗಿದೆ ಎಂದು ರಾಜ್ಯ ಮುಜರಾಯಿ ಸಚಿವ ಮನೋಹರ ತಹಸೀಲ್ದಾರ್ ಹೇಳಿದರು.

ಶುಕ್ರವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆದ 45ನೆ ವರ್ಷದ ಸಾಮೂಹಿಕ ಉಚಿತ ವಿವಾಹ ಸಮಾರಂಭದಲ್ಲಿ ಹಸೆಮಣೆಗೇರಿದ 127 ಜೋಡಿ ವಧೂವರರಿಗೆ ಆಶೀರ್ವದಿಸಿ ಮಾತನಾಡಿದರು.

   ಸಾಮೂಹಿಕ ವಿವಾಹದ ಮೂಲಕ ದುಂದುವೆಚ್ಚಗಳನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರಕಾರವು ಸಾಮೂಹಿಕ ವಿವಾಹದಲ್ಲಿ ಮದುವೆಯಾಗುವ ಪರಿಶಿಷ್ಟ ಜಾತಿ, ಪಂಗಡದ ದಂಪತಿಗೆ ತಲಾ 50,000 ರೂ. ಪ್ರೋತ್ಸಾಹಧನ ನೀಡುತ್ತಿದೆ. ಇಲ್ಲಿ ಮದುವೆಯಾದವರೂ ಈ ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳಬಹುದು. ಜಾತಿಯತೆಯನ್ನು ಹೋಗಲಾಡಿಸುವ ಉದ್ದೇಶದಿಂದ ಪರಿಶಿಷ್ಟ ಜಾತಿಯ ಮಹಿಳೆ ಅಂತರ್ಜಾತಿಯ ವಿವಾಹ ಮಾಡಿಕೊಂಡರೆ ಆ ದಂಪತಿಗೆ 3 ಲಕ್ಷ ರೂ. ಹಾಗೂ ಪರಿಶಿಷ್ಟ ಜಾತಿಯ ಪುರುಷ ಅಂತರ್ಜಾತಿಯ ವಿವಾಹ ಮಾಡಿಕೊಂಡರೆ ಆ ದಂಪತಿಗೆ 2 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು. ಇದು ಈ ವರ್ಷದಿಂದಲೇ ಜಾರಿಯಾಗಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮಾತನಾಡಿ, ಸಾಮೂಹಿಕ ವಿವಾಹವನ್ನು ಬಡವರ ವಿವಾಹ ಎಂಬಂತೆ ನೋಡಲಾಗುತ್ತಿದೆ. ಆದರೆ ಅದು ಸರಳ ವಿವಾಹ ಎಂಬಂತೆ ನೋಡುವ ಪ್ರವೃತ್ತಿ ಬೆಳೆಯಬೇಕು. ಇದೀಗ ಕೇವಲ ಬಡತನದ ಕಾರಣದಿಂದ ಸಾಮೂಹಿಕ ವಿವಾಹಗಳಲ್ಲಿ ಜೋಡಿಗಳು ವಿವಾಹವಾಗುತ್ತಿಲ್ಲ. ಆರ್ಥಿಕವಾಗಿ ಸಬಲಾಗಿರುವವರು ಸರಳವಾಗಿ ಮದುವೆಯಾಗ ಬಯಸುವವರೂ ಇಲ್ಲಿ ವಿವಾಹವಾಗುತ್ತಿದ್ದಾರೆ. ಇಂದು ಇಲ್ಲಿ ಇಬ್ಬರು ಪಿಎಚ್‌ಡಿ ಪದವೀಧರರು ಮದುವೆಯಾಗುತ್ತಿರುವುದು ವಿಶೇಷ. ಆಯಾ ಜಾತಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡದೆ ಎಲ್ಲರಿಗೂ ಒಂದೇ ವೇದಿಕೆಯಲ್ಲಿ ವಿವಾಹಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಲ್ಲಿ ಜಾತಿಯ ಯಾವುದೇ ತಾರತಮ್ಯಗಳಿಲ್ಲ. ಈ ಬಾರಿ 19 ಜೋಡಿ ಅಂತರ್ಜಾತಿ ವಿವಾಹವಾಗಿದ್ದಾರೆ. ಮನೆಯವರು ಒಪ್ಪಿಯೇ ಈ ಮದುವೆಗಳು ನಡೆಯುತ್ತಿದೆ. ಇದು ಸಮಾಜದಲ್ಲಿ ಆಗುತ್ತಿರುವ ಬದಲಾವಣೆಯ ದ್ಯೋತಕವಾಗಿದೆ. ಅಂತರ್ಜಾತಿಯ ವಿವಾಹಗಳಿಗೆ, ಅಂತರ್ಧರ್ಮೀಯ ವಿವಾಹಗಳಿಗೆ ಮುಂದಾಗುವವರ ಮರ್ಯಾದಾ ಹತ್ಯೆಗಳು ನಡೆಯುತ್ತಿರುವ ಇಂದಿನ ದಿನಗಳಲ್ಲಿ ಈ ಪರಿವರ್ತನೆ ಆಶಾದಾಯಕವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಶಾಸಕ ಕೆ.ವಸಂತ ಬಂಗೇರ, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಕಾರ್ಯದರ್ಶಿ ಬ್ರಿಜೇಶ್ ಪಟೇಲ್, ಸಹ ಕಾರ್ಯದರ್ಶಿ ಸಂತೋಷ್ ಮೆನನ್, ಬಿರ್ಲಾ ಕಾರ್ಪೊರೇಶನ್‌ನ ಪ್ರಧಾನ ಆರ್ಥಿಕ ಅಧಿಕಾರಿ ಆದಿತ್ಯ ಸರೋಗಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಹೇಮಾವತಿ ವಿ.ಹೆಗ್ಗಡೆ, ಹಷೇಂದ್ರಕುಮಾರ್, ಬೆಳ್ತಂಗಡಿ ತಹಶೀಲ್ದಾರ್ ಪ್ರಸನ್ನ ಮೂರ್ತಿ, ಮಹಿಳಾ ಮತ್ತು ಶಿಶು ಕಲ್ಯಾಣ ಅಭಿವೃದ್ಧಿ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

ಡಿ.ಧರ್ಣಪ್ಪಸ್ವಾಗತಿಸಿದರು. ಅಲಂಕಾರ ಸಮಿತಿಯ ಸಂಚಾಲಕ ಬಾಲಕೃಷ್ಣ ಪೂಜಾರಿ ವಂದಿಸಿದರು. ಉಜಿರೆ ಎಸ್‌ಡಿಎಂ ಸನಿವಾಸ ಕಾಲೇಜಿನ ಉಪನ್ಯಾಸಕ ಸುನಿಲ್ ಪಂಡಿತ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X