Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನೀರಿನ ದಂಡನಾ ಶುಲ್ಕ ಮನ್ನಾಕ್ಕೆ ನಿರ್ಣಯ

ನೀರಿನ ದಂಡನಾ ಶುಲ್ಕ ಮನ್ನಾಕ್ಕೆ ನಿರ್ಣಯ

ವಾರ್ತಾಭಾರತಿವಾರ್ತಾಭಾರತಿ29 April 2016 9:49 PM IST
share
ನೀರಿನ ದಂಡನಾ ಶುಲ್ಕ ಮನ್ನಾಕ್ಕೆ ನಿರ್ಣಯ

ಮಂಗಳೂರು, ಎ. 29: ನಗರದ 65 ಮಂದಿ ಬಳಕೆದಾರರಿಗೆ ನೀರಿನ ಬಿಲ್‌ನ ದಂಡನಾ ಶುಲ್ಕವನ್ನು ಶೇ.100 ಮನ್ನಾ ಮಾಡಲು ಮಂಗಳೂರು ಮಹಾನಗರ ಪಾಲಿಕೆ ನಿರ್ಣಯಿಸಿದೆ. ನೀರಿನ ಅದಾಲತ್‌ನಲ್ಲಿ ಕೈಗೊಂಡಿರುವ ಈ ನಿರ್ಣಯಕ್ಕೆ ಮೇಯರ್ ಎಂ.ಹರಿನಾಥ್ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಮಂಗಳೂರು ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಅನುಮೋದನೆ ದೊರಕಿದೆ.

ಮನಪಾ ಮುಖ್ಯಸಚೇತಕ ಶಶಿಧರ ಹೆಗ್ಡೆ ಅವರು ಈ ವಿಷಯ ಸಭೆಯಲ್ಲಿ ಪ್ರಸ್ತಾವಿಸಿದರು. ದಂಡನಾ ಶುಲ್ಕದಲ್ಲಿ ವಿನಾಯಿತಿ ನೀಡುವ ಬಗ್ಗೆ ಮನಪಾ ನೀರಿನ ಅದಾಲತ್ ಸಮಿತಿ ರಚಿಸಿ ಅದಾಲತ್ ನಡೆಸಿತ್ತು. ಬಳಕೆದಾರರಿಗೆ ದಂಡ ವಿಧಿಸುವ ಬಗ್ಗೆ ಸರಿಯಾಗಿ ಮಾಹಿತಿ ಇಲ್ಲದೆ ನೀರಿನ ಬಿಲ್ ಹೆಚ್ಚು ಬಂದಿರುವುದರಿಂದ ಅವರ ತೊಂದರೆ ತಪ್ಪಿಸಲು ಆಕ್ಷೇಪಣಾ ಅರ್ಜಿ ಸ್ವೀಕರಿಸಲಾಗಿದೆ. ದಂಡನಾ ಶುಲ್ಕವನ್ನು ಪರಿಷ್ಕರಣೆ ಮಾಡುವಂತೆ ಬಳಕೆದಾರರಿಂದ 78 ಅರ್ಜಿಗಳನ್ನು ಅದಾಲತ್ ಸ್ವೀಕರಿಸಿದೆ. ಈ ಪೈಕಿ 7 ಅರ್ಜಿಗಳಿಗೆ ಶೇ.50 ದಂಡನಾ ಶುಲ್ಕ ಮನ್ನಾ ಮಾಡಿದ್ದರೆ, 65 ಅರ್ಜಿಯ ಶೇ.100 ದಂಡನಾ ಶುಲ್ಕ ಮನ್ನಾ ಮಾಡಲಾಗಿದೆ. 3 ಅರ್ಜಿಗಳಿಗೆ ದಂಡ ವಿಧಿಸಿಲ್ಲ, 2 ಅರ್ಜಿಗಳ ಸ್ಥಳ ತನಿಖೆಗೆ ಸೂಚಿಸಲಾಗಿದೆ ಎಂದರು.
ಕುಡ್ಸೆಂಪ್ ಎರಡನೆ ಹಂತದ ಯೋಜನೆಯ ಕುರಿತು ಅಧಿಕಾರಿಗಳು ಸಭೆಯಲ್ಲಿ ವಿವರ ನೀಡುತ್ತಿದ್ದಾಗ, ಸದಸ್ಯ ಮಹಾಬಲ ಮಾರ್ಲ ಸೇರಿದಂತೆ ಇತರರು ಮಾತನಾಡಿ, ಯಾರ ಗಮನಕ್ಕೆ ತಂದು ಸರ್ವೇ ನಡೆಸಲಾಗಿದೆ? ಎಲ್ಲಿ ಅಗತ್ಯ ಇದೆಯೋ ಅಲ್ಲಿ 2ನೆ ಹಂತದ ಕಾಮಗಾರಿ ಕೈಗೊಳ್ಳಲಾಗಿದೆಯೇ? ಎಂದು ಪ್ರಶ್ನಿಸಿದರು. ಕಾರ್ಪೊರೇಟರ್‌ಗಳನ್ನು ನಿರ್ಲಕ್ಷಿಸಿ ಕೇವಲ ಅಧಿಕಾರಿಗಳೇ ಕುಳಿತುಕೊಂಡು ಯೋಜನೆ ರೂಪಿಸಬೇಡಿ ಎಂದು ಅವರು ಒತ್ತಾಯಿಸಿದರು.
ಪಚ್ಚನಾಡಿಯ ತ್ಯಾಜ್ಯ ಸಂಸ್ಕರಣಾ ಘಟಕದ ಬಳಿಯಿರುವ ಖಾಸಗಿ ಮಾಲೀಕತ್ವದ 10 ಎಕ್ರೆ ಜಮೀನನ್ನು ಸ್ವಾಧೀನಪಡಿಸಿ, ಘನತ್ಯಾಜ್ಯ ವಿಲೇವಾರಿ ವ್ಯವಸ್ಥೆಗೆ ಸರಿಪಡಿಸುವಂತೆ ಗೊತ್ತುವಳಿ ನಿರ್ಣಯಿಸಲಾಯಿತು.
ಉಪಮೇಯರ್ ಸುಮಿತ್ರಾ ಕರಿಯ, ಆಯುಕ್ತ ಡಾ.ಎಚ್.ಎನ್.ಗೋಪಾಲಕೃಷ್ಣ ಹಾಗೂ ಸ್ಥಾಯಿ ಸಮಿತಿ ಅಧ್ಯಕ್ಷರು ಉಪಸ್ಥಿತರಿದ್ದರು.
ತುಂಬೆ ಹೊಸ ಡ್ಯಾಂ ಮೇ ತಿಂಗಳಾಂತ್ಯಕ್ಕೆ ಪೂರ್ಣ
ತುಂಬೆ ಹೊಸ ಡ್ಯಾಂ ಯಾವಾಗ ಪೂರ್ಣಗೊಳ್ಳಲಿದೆ ಎಂದು ಬಿಜೆಪಿಯ ಸುಧೀರ್ ಶೆಟ್ಟಿ ಕಣ್ಣೂರು ಅವರ ಪ್ರಶ್ನೆಗೆ ಉತ್ತರಿಸಿದ ಮೇಯರ್, ಈಗಾಗಲೇ ಹೊಸ ಡ್ಯಾಂಗೆ 8 ಗೇಟು ಅಳವಡಿಕೆ ಮಾಡಲಾಗಿದೆ. ಮೇ ಅಂತ್ಯದೊಳಗೆ ಎಲ್ಲಾ ಗೇಟುಗಳನ್ನು ಅಳವಡಿಸಲಾಗುತ್ತದೆ ಎಂದರು. ಬಿಜೆಪಿಯ ತಿಲಕ್‌ರಾಜ್ ಮಾತನಾಡಿ, ಹಳೆಯ ಡ್ಯಾಂನಷ್ಟೇ ಎತ್ತರಕ್ಕೆ ನೀರನ್ನು ಹೊಸ ಡ್ಯಾಂನಲ್ಲಿ ಸಂಗ್ರಹಿಸುವುದಾ? ಎಂಬ ಪ್ರಶ್ನೆಗೆ ಉತ್ತರಿಸಿ ಅಧಿಕಾರಿಗಳು, ಹೊಸ ಡ್ಯಾಂ 7 ಮೀ. ಎತ್ತರವಿದ್ದರೂ, ಭೂಸ್ವಾಧೀನ ಪೂರ್ಣಗೊಳ್ಳದೆ ಅಷ್ಟು ಪ್ರಮಾಣದಲ್ಲಿ ನೀರು ನಿಲ್ಲಿಸಲು ಆಗುವುದಿಲ್ಲ. ಎಂದಿನಂತೆ 4 ಮೀ. ಮಾತ್ರ ಸದ್ಯಕ್ಕೆ ಸಂಗ್ರಹ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X