Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣ:...

ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣ: ‘ನಮೋ ಬ್ರಿಗೇಡ್’ ಸಂಸ್ಥಾಪಕ ನರೇಶ್ ಶೆಣೈಗೆ ಜಾಮೀನು ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ29 April 2016 11:47 PM IST
share
ಆರ್‌ಟಿಐ ಕಾರ್ಯಕರ್ತನ ಹತ್ಯೆ ಪ್ರಕರಣ: ‘ನಮೋ ಬ್ರಿಗೇಡ್’ ಸಂಸ್ಥಾಪಕ ನರೇಶ್ ಶೆಣೈಗೆ ಜಾಮೀನು ನಿರಾಕರಣೆ

ಮಂಗಳೂರು, ಎ. 29: ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗಾ ಹತ್ಯೆಯ ಪ್ರಧಾನ ಆರೋಪಿ ಎನ್ನಲಾದ ‘ನಮೋ ಬ್ರಿಗೇಡ್’ನ ಸಂಸ್ಥಾಪಕ ನರೇಶ್ ಶೆಣೈಗೆ ಇಲ್ಲಿನ ಎರಡನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ನಿರಾಕರಿಸಿ ಆದೇಶ ನೀಡಿದೆ.

ಮಾ.21ರಂದು ನಡೆದ ಬಾಳಿಗಾ ಹತ್ಯೆ ಘಟನೆಗೆ ಸಂಬಂಧಿಸಿ ನರೇಶ್ ಶೆಣೈ ವಿರುದ್ಧ ಸರಕಾರಿ ವಕೀಲರು ಪೂರಕ ಸಾಕ್ಷ ನೀಡಿದ್ದು, ಯಾವುದೇ ಕಾರಣಕ್ಕೂ ನಿರೀಕ್ಷಣಾ ಜಾಮೀನು ನೀಡಬಾರದು ಎಂದು ಎಪ್ರಿಲ್ 26ರಂದು ವಾದ ಮಂಡಿಸಿದ್ದರು. ಬಾಳಿಗಾ ಕುಟುಂಬಸ್ಥರ ಪರವಾಗಿ ವಕೀಲ ಸಚಿನ್ ದೇವೇಂದ್ರ ಎಂಬವರು ನ್ಯಾಯಾಲಯಕ್ಕೆ ಪ್ರತ್ಯೇಕ ಅಫಿದಾವಿತ್ ಸಲ್ಲಿಸಿದ್ದು, ನರೇಶ್ ಶೆಣೈಗೆ ನಿರೀಕ್ಷಣಾ ಜಾಮೀನು ನೀಡದಂತೆ ಕೋರಿದ್ದರು.

ಬಳಿಕ ನ್ಯಾಯಾಲಯವು ತೀರ್ಪನ್ನು ಶುಕ್ರವಾರಕ್ಕೆ ಮುಂದೂಡಿತ್ತು. ಇಂದು ವಾದ-ಪ್ರತಿವಾದವನ್ನು ಆಲಿ ಸಿದ ನ್ಯಾಯಾಧೀಶರು ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ. ವಿನಾಯಕ ಬಾಳಿಗಾರನ್ನು ಅವರ ಮನೆಯ ಸಮೀಪವೇ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಕೊಲೆ ಯಲ್ಲಿ ನರೇಶ್ ಶೆಣೈ ಕೈವಾಡದ ಹಿನ್ನೆಲೆಯಲ್ಲಿ ಪೊಲೀಸರು ಆತನಿಗಾಗಿ ಶೋಧಕಾರ್ಯ ಮುಂದುವರಿಸಿದ್ದರು. ಇದೇ ಸಂದರ್ಭದಲ್ಲೇ ಆತ ತಲೆಮರೆಸಿ ಕೊಂಡಿದ್ದು, ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದ.

ಬಾಳಿಗಾರ ಹತ್ಯೆಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮಾ.27ರಂದು ವಿನೀತ್ ಪೂಜಾರಿ ಮತ್ತು ವಿಶಿತ್ ದೇವಾಡಿಗ ಎಂಬಿಬ್ಬರನ್ನು ಬಂಧಿಸಿದ್ದರು. ಈ ಬಂಧಿತ ಆರೋಪಿಗಳು ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯ ಶಿವ (21) ಎಂಬಾತ ಬಾಳಿಗಾ ಹತ್ಯೆಗಾಗಿ ತಮಗೆ ಸುಪಾರಿ ನೀಡಿರುವುದಾಗಿ ವಿಚಾರಣೆ ವೇಳೆ ತಿಳಿಸಿದ್ದಾರೆಂದು ಹೇಳಲಾಗಿತ್ತು. ಕಾವೂರು ಶಾಂತಿನಗರ ಮೈದಾನದ ಬಳಿಯ ಶ್ರೀಕಾಂತ್ (40) ಎಂಬಾತ ಶಿವ ಎಂಬಾತನ ಮೂಲಕ ಕೊಲೆಗೆ ಗುತ್ತಿಗೆ ನೀಡಿದ್ದಾನೆ ಎಂದು ಪೊಲೀಸರು ಅಂದು ಶಂಕೆ ವ್ಯಕ್ತಪಡಿಸಿದ್ದರು.

ಯುವ ಬ್ರಿಗೇಡ್‌ನ ಸಂಸ್ಥಾಪಕ ನರೇಶ್ ಶೆಣೈ ನಡೆಸುತ್ತಿದ್ದ ಹಾಸ್ಟೆಲ್‌ಗಳ ನಿರ್ವಹಣೆ ಕೆಲಸವನ್ನು ಶ್ರೀ ಕಾಂತ್ ಮಾಡುತ್ತಿದ್ದ. ಬಾಳಿಗಾರನ್ನು ಹತ್ಯೆ ಮಾಡಿದ ಆರೋಪಿಗಳು ನರೇಶ್ ಶೆಣೈ ಆಪ್ತರಿಗೆ ಸೇರಿದ ಕ್ವಾಲಿಸ್ ವಾಹನವೊಂದರಲ್ಲಿ ಪರಾರಿಯಾಗಿದ್ದರು. ಬಂಧಿತರು ನೀಡಿದ್ದ ಮಾಹಿತಿಯಂತೆ ಹತ್ಯೆಯಲ್ಲಿ ನರೇಶ್ ಶೆಣೈ ಕೈವಾಡ ಇರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿದ್ದವು. ಅದರಂತೆ ಪೊಲೀಸರು ನರೇಶ್ ಶೆಣೈಗೆ ನೋಟಿಸ್ ನೀಡಿ ವಿಚಾರಣೆ ಹಾಜರಾಗುವಂತೆ ಸೂಚಿಸಿದ್ದರು.

ಆದರೆ ನರೇಶ್ ಶೆಣೈ ತನಿಖಾ ತಂಡದ ಎದುರು ಹಾಜರಾಗಲಿಲ್ಲ. ಪೊಲೀಸರು ಮಾ.31ರಂದು ನಗರದ ವಿ.ಟಿ. ರಸ್ತೆಯಲ್ಲಿರುವ ಶೆಣೈ ಮನೆಗೆ ದಾಳಿ ಮಾಡಿ ಶೋಧ ನಡೆಸಿದ್ದರು. ಆದರೆ ಆತ ಪತ್ತೆಯಾಗಿರಲಿಲ್ಲ. ಪೊಲೀಸರು ಪತ್ತೆಗಾಗಿ ಹುಡುಕಾಟ ಆರಂಭಿಸಿದ್ದರಿಂದ ನರೇಶ್ ಶೆಣೈ, ನಿರೀಕ್ಷಣಾ ಜಾಮೀನು ಕೋರಿ ನಗರದ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಈಗ ಅವರಿಗೆ ಜಾಮೀನು ನೀಡಲು ನ್ಯಾಯಾಲಯ ನಿರಾಕರಿಸಿದೆ. ಇದರಿಂದ ನರೇಶ್ ಬಂಧನಕ್ಕೆ ಪೊಲೀಸರ ಮೇಲೆ ಒತ್ತಡ ಹೆಚ್ಚಾದಂತಾಗಿದೆ.

ಬಾಳಿಗಾ ಅವರು ಮಾಹಿತಿ ಹಕ್ಕು ಅಡಿಯಲ್ಲಿ ನಗರದ ಬಿಲ್ಡರ್ಸ್‌ಗಳ, ಅಕ್ರಮ ಕಟ್ಟಡಗಳ, ಕೆಲವು ವ್ಯಕ್ತಿ, ದೇವಸ್ಥಾನದ ಅಕ್ರಮಗಳನ್ನು ಬಯಲಿಗೆಳೆದಿದ್ದರು. ಕಾರ್‌ಸ್ಟ್ರೀಟ್‌ನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸುಮಾರು 7ರಿಂದ 8 ಕೋಟಿ ರೂ.ಗಳಷ್ಟು ಅವ್ಯವಹಾರ ನಡೆದಿದೆ ಎಂದು ಬಾಳಿಗಾ ಆರೋಪಿಸಿದ್ದರೆಂದು ಅವರ ಸ್ನೇಹಿತ ಹಾಗೂ ಪ್ರಕರಣಕ್ಕೆ ಸಂಬಂಧಿಸಿ ಅವರಿಗೆ ಸಹಕರಿಸುತ್ತಿದ್ದ ಗಣೇಶ್ ಬಾಳಿಗಾ ಎಂಬವರು ಇತ್ತೀಚೆಗೆ ಆರೋಪಿಸಿದ್ದರು.

‘‘ದೇವಸ್ಥಾನದಲ್ಲಿರುವ ಚಿನ್ನ, ಬೆಳ್ಳಿಗೆ ಸಂಬಂಧಿಸಿ ದಾಖಲೆಗಳಿಲ್ಲ. ಆಡಳಿತದಲ್ಲಿ ಲೋಪ ಎಸಗಿರುವುದು ನಿಜ. ಆದ್ದರಿಂದ ದೇವಸ್ಥಾನ ಉತ್ತಮ ರೀತಿಯಲ್ಲಿ ಮುನ್ನಡೆಯಬೇಕು. ದೇವರ ಹಣ ಪೋಲಾಗಬಾರದು ಹಾಗೂ ಅವ್ಯವಹಾರ ನಡೆಸಿದವರನ್ನು ತನಿಖೆಗೊಳಪಡಿಸಬೇಕೆಂದು ಗಣೇಶ್ ಬಾಳಿಗಾ ಒತ್ತಾಯಿಸಿದ್ದರು.

ಹೈಕೋರ್ಟ್‌ಗೆ ಅರ್ಜಿ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಹಿನ್ನೆಲೆಯಲ್ಲಿ ಹೈಕೋರ್ಟ್‌ಗೆ ಮನವಿ ಸಲ್ಲಿಸುವುದಾಗಿ ನರೇಶ್ ಶೆಣೈ ಪರ ವಕೀಲ ಶಂಭು ಶರ್ಮ ತಿಳಿಸಿದ್ದಾರೆ.


ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಮೇ 2ರಂದು ಧರಣಿ: ನಾಯಕ್

ಬಾಳಿಗಾ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ನರೇಶ್ ಶೆಣೈ ಹಾಗೂ ಸಹವರ್ತಿ ಶ್ರೀಕಾಂತ್ ಮತ್ತು ವ್ನಿೇಶ್ ಎಂಬವರನ್ನು ಬಂಧಿಸುವಲ್ಲಿ ಪೊಲೀಸರು ವಿಳಂಬ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿರುವ ರಾಷ್ಟ್ರೀಯ ವಿಚಾರವಾದಿ ವೇದಿಕೆಯ ಮುಖಂಡ ಪ್ರೊ.ನರೇಂದ್ರ ನಾಯಕ್, ಇದರ ವಿರುದ್ಧ ಮೇ 2ರಂದು ಮಧ್ಯಾಹ್ನ 3:30ಕ್ಕೆ ಬಾಳಿಗಾ ಮನೆಯಿಂದ ನಗರ ಪೊಲೀಸ್ ಆಯುಕ್ತರ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಹೇಳಿದ್ದಾರೆ.

ಬಾಳಿಗಾ ಹತ್ಯೆಯ ಬಳಿಕ ತಲೆಮರೆಸಿಕೊಂಡಿರುವ ನರೇಶ್ ಶೆಣೈ ಅಮಾಯಕ ಎಂದು ಬಿಂಬಿಸಲು ಕೆಲವರು ಪ್ರಯತ್ನಿಸಿದ್ದರು. ಆತ ಅಮಾಯಕನಾಗಿದ್ದರೆ ಹತ್ಯೆ ಬಳಿಕ ತಲೆಮರೆಸಿಕೊಳ್ಳುವ ಅಗತ್ಯ ಏನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X