ಕಾರು ಅಪಘಾತ; ಬಿಜೆಪಿ ಸಂಸದೆ ಹೇಮಮಾಲಿನಿ ಅಪಾಯದಿಂದ ಪಾರು

ಮಥುರಾ, ಎ.30: ಬಿಜೆಪಿ ಸಂಸದೆ ಹೇಮಮಾಲಿನಿ ಪ್ರಯಾಣಿಸುತ್ತಿದ್ದ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಹೇಮಮಾಲಿನಿ ಪವಾಡಸದೃಸವಾಗಿ ಅಪಾಯದಿಂದ ಪಾರಾದ ಘಟನೆ ಶನಿವಾರ ಆಗ್ರಾ-ದಿಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ನಡೆದಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಮಥುರಾದಿಂದ ಕಾರಿನಲ್ಲಿ ಹೊರಟಿದ್ದರು. ದಾರಿ ಮಧ್ಯೆ ಅವರ ಕಾರು ಇನ್ನೊಂದು ವಾಹನಕ್ಕೆ ಡಿಕ್ಕಿ ಹೊಡೆಯಿತೆನ್ನಲಾಗಿದೆ. ಅವರು ತೆರಳುತ್ತಿದ್ದ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಯಾರಿಗೂ ಗಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಎರಡನೆ ಬಾರಿ ಹೇಮಮಾಲಿನಿ ಪ್ರಯಾಣಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. 2015ರಲ್ಲಿ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ಮತ್ತು ಇನ್ನೊಂದು ಕಾರು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮವಾಗಿ ಮಗುವೊಂದು ಸಾವಿಗೀಡಾಗಿತ್ತು. ಹೇಮಮಾಲಿನಿ ಸೇರಿದಂತೆ ನಾಲ್ವರು ಗಾಯಗೊಂಡಿದ್ದರು.
Next Story





