Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಾಕಿ ಅರ್ಜಿಗಳನ್ನು ತಕ್ಷಣ ವಿಲೇವಾರಿ...

ಬಾಕಿ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡದಿದ್ದರೆ ಶಿಸ್ತುಕ್ರಮ: ಪ್ರಮೋದ್ ಮಧ್ವರಾಜ್

ವಾರ್ತಾಭಾರತಿವಾರ್ತಾಭಾರತಿ30 April 2016 9:57 PM IST
share
ಬಾಕಿ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡದಿದ್ದರೆ ಶಿಸ್ತುಕ್ರಮ: ಪ್ರಮೋದ್ ಮಧ್ವರಾಜ್

ಕಾರವಾರ, ಎ.30: ಕಂದಾಯ ಇಲಾಖೆಯಲ್ಲಿ ಹಲವು ವರ್ಷಗಳಿಂದ ವಿಲೇವಾರಿಯಾಗದೆ ಇರುವ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡದಿದ್ದರೆ ಶಿಸ್ತುಕ್ರಮ ಜರಗಿಸಲು ಶಿಫಾರಸು ಮಾಡಲಾಗುವುದು ಎಂದು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿ ಪ್ರಮೋದ್ ಮಧ್ವರಾಜ್ ತಿಳಿಸಿದರು.

ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪರಿಶೀಲನೆ ನಡೆಸಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಪಹಣಿ ತಿದ್ದುಪಡಿ, ಸರ್ವೇ, ಭೂದಾಖಲೆ ಸೇರಿದಂತೆ ಹಲವು ವಿಭಾಗಗಳಲ್ಲಿ ಕಡತಗಳು ವಿಲೇವಾರಿಗೆ ಬಾಕಿಯಿವೆ. ಎರಡು ವರ್ಷಗಳಿಗಿಂತ ಹಿಂದಿನ ಕಡತಗಳನ್ನು ನಿಗದಿತ ಅವಧಿಯ ಒಳಗಾಗಿ ವಿಲೇವಾರಿ ಮಾಡಲು ಸೂಚಿಸಿ ಸಮಯ ನಿಗದಿಪಡಿಸಲಾಗಿದೆ. ಭೂ ಸುಧಾರಣೆಗೆ ಸಂಬಂಧಿಸಿ 180 ಕಡತಗಳು, 11ಇ ಮತ್ತು ತತ್ಕಾಲ್‌ಗೆ ಸಂಬಂಧಿಸಿದ 271 ಕಡತಗಳು ವಿಲೇವಾರಿಗೆ ಬಾಕಿಯಿವೆ. ಜಿಲ್ಲಾಧಿಕಾರಿ ಕಚೇರಿ ಅಪೀಲ್ ಪ್ರಕರಣಗಳನ್ನು ಪೂರ್ಣವಾಗಿ ಚುಕ್ತಗೊಳಿಸಲಾಗಿದೆ. ಬಾಕಿಯಿರುವ ಕಡತಗಳನ್ನು ತಕ್ಷಣ ವಿಲೇವಾರಿಗೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ 481ಕಂದಾಯ ಅದಾಲತ್ ನಡೆಸಲಾಗಿದ್ದು, 92,667 ಅರ್ಜಿಗಳನ್ನು ಸ್ವೀಕರಿಸಲಾಗಿತ್ತು, ಇದರಲ್ಲಿ 70,876ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದರು.

ಅಕ್ರಮ ಸಕ್ರಮ ಅರ್ಜಿ ಸ್ವೀಕಾರ: ಅಕ್ರಮ ಸಕ್ರಮ ಯೋಜನೆ 94(ಸಿ) ಅಡಿ ಗ್ರಾಮೀಣ ಪ್ರದೇಶ ಹಾಗೂ 94(ಸಿಸಿ) ಅಡಿ ನಗರ ಪ್ರದೇಶ ವ್ಯಾಪ್ತಿಯಲ್ಲಿ ಆಗಸ್ಟ್ 27ರವರೆಗೆ ನಾಡಕಚೇರಿಗಳಲ್ಲಿ ಅರ್ಜಿಯನ್ನು ಸ್ವೀಕರಿಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಉತ್ತರಕನ್ನಡ ಜಿಲ್ಲೆಯಲ್ಲಿ ಸಿಆರ್‌ಝಡ್ ಮತ್ತು ಹಾಡಿ ಭೂಮಿಯಲ್ಲಿ ಹಲವಾರು ಮಂದಿ ಮನೆಗಳನ್ನು ಕಟ್ಟಿ ವಾಸಿಸುತ್ತಿದ್ದು, ಇವರನ್ನು ಸಹ ಈ ಯೋಜನೆಯಡಿ ಪರಿಗಣಿಸುವಂತೆ ಸರಕಾರಕ್ಕೆ ಶಿಫಾರಸು ಮಾಡಲಾಗುವುದು. ಇದೇ ರೀತಿ ಸಾಂಪ್ರದಾಯಿಕ ಮೀನುಗಾರರು ಸಿಆರ್‌ಝಡ್ ಪ್ರದೇಶದಲ್ಲಿ ಗುಡಿಸಲುಗಳನ್ನು ಕಟ್ಟಿದ್ದರೆ ಅವರನ್ನೂ 94 (ಸಿ) ಅಡಿ ತರಲು ಪ್ರಯತ್ನಿಸಲಾಗುವುದು ಎಂದರು.

ಭಟ್ಕಳ ಉಪ ವಿಭಾಗಾಧಿಕಾರಿ ಕಚೇರಿಯಲ್ಲಿ ಹಲವಾರು ಕಡತಗಳು ಕಳೆದು ಹೋಗಿದ್ದು, ಅವುಗಳನ್ನು ಪತ್ತೆ ಹಚ್ಚಿ ರೆಕಾರ್ಡ್ ಕೊಠಡಿಯನ್ನು 6ತಿಂಗಳ ಒಳಗಾಗಿ ಸಮರ್ಪಕಗೊಳಿಸುವಂತೆ ಉಪವಿಭಾಗಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ. ಶಾಸಕರಾದ ಸತೀಶ್ ಸೈಲ್, ಮಂಕಾಳು ವೈದ್ಯ, ಜಿಲ್ಲಾಧಿಕಾರಿ ಉಜ್ವಲ್ ಕುಮಾರ್ ಘೋಷ್, ಕಂದಾಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X