Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನ್ನ ಆಯ್ಕೆ ಕ್ರಮಬದ್ಧವಾಗಿದೆ: ಹಾಜಿ...

ನನ್ನ ಆಯ್ಕೆ ಕ್ರಮಬದ್ಧವಾಗಿದೆ: ಹಾಜಿ ಅಬ್ದುರ್ರಶೀದ್

ಉಳ್ಳಾಲ ದರ್ಗಾ ಅಧ್ಯಕ್ಷ ವಿವಾದ

ವಾರ್ತಾಭಾರತಿವಾರ್ತಾಭಾರತಿ30 April 2016 10:03 PM IST
share

ಮಂಗಳೂರು, ಎ.30: ಉಳ್ಳಾಲ ಕೇಂದ್ರ ಜುಮಾ ಮಸೀದಿ ಮತ್ತು ದರ್ಗಾ ಆಡಳಿತ ಸಮಿತಿಗೆ ನನ್ನ ಆಯ್ಕೆ ಕ್ರಮಬದ್ಧವಾಗಿದೆ ಎಂದು ಮಾಜಿ ಮಂಡಲ ಪ್ರಧಾನ ಹಾಜಿ ಅಬ್ದುರ್ರಶೀದ್ ಪ್ರತಿಕ್ರಿಯಿಸಿದ್ದಾರೆ.

ಸಮಿತಿಯಲ್ಲಿರುವ 50 ಸದಸ್ಯರ ಪೈಕಿ 49 ಮಂದಿ ಸದಸ್ಯರಿಗೆ ಸಮಿತಿಯ ಅಧ್ಯಕ್ಷರು ನೋಟಿಸ್ ನೀಡಿ ಎ.26ರಂದು ಬೆಳಗ್ಗೆ 10 ಗಂಟೆಗೆ ನೂತನ ಅಧ್ಯಕ್ಷರ ಆಯ್ಕೆ ಸಂಬಂಧಿತ ಸಭೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದರು. ಅದರಂತೆ ಸಮಿತಿಯ 26 ಮಂದಿ ಸದಸ್ಯರು ಅಂದು ಸಭೆಗೆ ಹಾಜರಾಗಿದ್ದರು. ಸಭೆಯಲ್ಲಿ ಕಾರ್ಯದರ್ಶಿ ಇಲ್ಯಾಸ್ ಕೂಡ ಉಪಸ್ಥಿತರಿದ್ದರು. ಸಭೆಯಲ್ಲಿ ಅಧ್ಯಕ್ಷ ಹಾಜಿ ಹಂಝ ಹಾಜರಿರಬೇಕಿತ್ತು. ಆದರೆ ಬೆಳಗ್ಗೆ 11 ಗಂಟೆಯಾದರೂ ಅವರೇ ಕರೆದಿದ್ದ ಸಭೆಗೆ ಹಾಜರಾಗಲಿಲ್ಲ. ಕಾರ್ಯದರ್ಶಿಯವರು ಹಂಝ ಅವರನ್ನು ಫೋನ್ ಮೂಲಕ ಸಂಪರ್ಕಿಸಿದಾಗ ತನ್ನ ಅನುಪಸ್ಥಿತಿಯಲ್ಲಿ ಸಭೆ ನಡೆಸುವಂತೆ ಸೂಚಿದ್ದಾರೆ ಎಂದು ಕಾರ್ಯದರ್ಶಿಯವರು ತನಗೆ ತಿಳಿಸಿರುವುದಾಗಿ ರಶೀದ್ ವಿವರಿಸಿದರು.

ಅದರಂತೆ ನಾವು 11 ಗಂಟೆಗೆ ಸಭೆ ಸೇರಿದೆವು. 26 ಮಂದಿ ಸಮಿತಿ ಸದಸ್ಯರು ಇದ್ದುದರಿಂದ ನಿಯಮ ಪ್ರಕಾರ ಕೋರಂ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಸಭೆ ಮುಂದುವರಿಯಿತು. ಸಭೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಕೇಳಿ ಬಂತು. ಎಲ್ಲರ ಅನುಮೋದನೆಯಂತೆ ಅಂತಿಮವಾಗಿ ಸಮಿತಿಯ ಅಧ್ಯಕ್ಷರನ್ನಾಗಿ ನನ್ನನ್ನು ಆಯ್ಕೆ ಮಾಡಲಾಯಿತು. ನನ್ನ ಆಯ್ಕೆಯು ನಿಯಮ ಪ್ರಕಾರ ಮತ್ತು ಕ್ರಮಬದ್ಧವಾಗಿಯೇ ನಡೆದಿದೆ. ಇದಕ್ಕೆ ಸಮಿತಿಯ ಕಾರ್ಯದರ್ಶಿಯವರೇ ಸಾಕ್ಷಿಯಾಗಿದ್ದಾರೆ. ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ಬಳಿಕ ಕಾರ್ಯದರ್ಶಿಯವರೇ ನನಗೆ ಅಧ್ಯಕ್ಷರ ಕಚೇರಿಯ ಕೀಲಿ ಕೈ ಮತ್ತು ನಿರ್ಣಯ ಪುಸ್ತಕವನ್ನು ಹಸ್ತಾಂತರ ಮಾಡಿದ್ದಾರೆ ಎಂದು ಅವರು ತಿಳಿಸಿದರು.

ಆದರೆ, ‘ಇತ್ತೀಚೆಗೆ ಉಳ್ಳಾಲ ವ್ಯಾಪ್ತಿಯಲ್ಲಿ ಕೆಲವು ಅಹಿತಕರ ಘಟನೆಗಳು ಸಂಭವಿಸಿರುವ ಹಿನ್ನೆಲೆಯಲ್ಲಿ ಸೆಕ್ಷನ್ 144 ಜಾರಿಯಾಗಿರುವುದರಿಂದ ಪೊಲೀಸರ ಮನವಿ ಮೇರೆಗೆ ಸಭೆಯನ್ನು ಮುಂದೂಡಲಾಗಿತ್ತು’ ಎಂಬುದರಲ್ಲಿ ಸತ್ಯಾಂಶವಿಲ್ಲ. ಸೆಕ್ಷನ್ ಜಾರಿಯಾಗಿರುವುದು ಸಂಜೆ 6 ಗಂಟೆಯ ನಂತರ. ಆದ್ದರಿಂದ ಸಭೆಯು ಸೆಕ್ಷನ್ 144 ಜಾರಿಯಾಗುವ ಮುನ್ನವೇ ನಡೆದಿದೆ. ನಿಯಮ ಮೀರಿ ಸಂಜೆ 7 ಗಂಟೆ ಹೊತ್ತಿಗೆ ಇನ್ನೊಂದು ಸಭೆ ನಡೆಸಿರುವುದು ಸರಿಯಲ್ಲ. ಈ ಸಭೆಯಲ್ಲಿ ಅಬ್ದುಲ್ಲಾ ಬುಖಾರಿ ಕಲ್ಲಾಪು ಎಂಬವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಕ್ರಮಬದ್ಧವಲ್ಲ ಎಂದರು.

ಅಧ್ಯಕ್ಷರ ಆಯ್ಕೆ ಸಂಬಂಧಿತ ಸಭೆಯಲ್ಲಿ ಉಳ್ಳಾಲ ಖಾಝಿ ಫಝಲ್ ಹಾಮಿದ್ ಕೋಯಯ್ಮ ತಂಙಳ್ ಕೂರತ್‌ರ ಹಾಜರಾತಿ ಕಡ್ಡಾಯವಲ್ಲ. ಸಂಪ್ರದಾಯದಂತೆ ಅವರನ್ನು ಸಭೆಗೆ ಕರೆಸುತ್ತಾರೆ. ಅವರು ಸಭೆಯಲ್ಲಿ ಪಾಲ್ಗೊಂಡು ಅಧ್ಯಕ್ಷರ ಆಯ್ಕೆಯಾದ ಬಳಿಕ ಪ್ರಮಾಣ ವಚನ ಬೋಧಿಸುತ್ತಾರೆ ಎಂದು ರಶೀದ್ ತಿಳಿಸಿದರು.

‘ಕೂರತ್ ತಂಙಳ್ ಬಗ್ಗೆ ಗೌರವವಿದೆ’

ಉಳ್ಳಾಲ ಖಾಝಿ ಫಝಲ್ ಹಾಮಿದ್ ಕೋಯಯ್ಮ ತಂಙಳ್ ಕೂರತ್‌ರ ಬಗ್ಗೆ ನನಗೆ ಹಿಂದಿನಿಂದಲೂ ಗೌರವವಿದೆ. ಸಮಿತಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಮದ್ರಸ ಮತ್ತು ಶೈಕ್ಷಣಿಕ ಸಂಸ್ಥೆಗಳಿಗೆ ಅವರ ತಂದೆ ಉಳ್ಳಾಲ ತಂಙಳ್ ತಾಜುಲ್ ಉಲಮಾ ನೀಡಿರುವ ಕೊಡುಗೆ ಅನನ್ಯವಾಗಿದೆ. ಅದನ್ನು ನಾನು ಮರೆಯುವಂತಿಲ್ಲ. ಕೂರತ್ ತಂಙಳ್ ಮತ್ತು ತಾಜುಲ್ ಉಲಮಾ ಅವರಿಬ್ಬರ ಬಗ್ಗೆಯೂ ನಾನು ಅಪಾರ ಗೌರವವನ್ನು ಹೊಂದಿದ್ದೇನೆ ಎಂದು ಹಾಜಿ ಅಬ್ದುರ್ರಶೀದ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X