Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2 ಕೋಟಿ ಉಳಿತಾಯ ಇದ್ದರೂ ಬಿಕಾರಿಯಾಗಿದ್ದ...

2 ಕೋಟಿ ಉಳಿತಾಯ ಇದ್ದರೂ ಬಿಕಾರಿಯಾಗಿದ್ದ "ಕನಕ"ಲತಾ

ಭಿಕ್ಷುಕಿಯಾಗಿ ಬದುಕು ಮುಗಿಸಿದ ಕೋಟ್ಯಾಧೀಶೆ!

ವಾರ್ತಾಭಾರತಿವಾರ್ತಾಭಾರತಿ1 May 2016 3:54 PM IST
share
2 ಕೋಟಿ ಉಳಿತಾಯ ಇದ್ದರೂ ಬಿಕಾರಿಯಾಗಿದ್ದ ಕನಕಲತಾ

ಅಜ್ಮೀರ್: ಹೆಸರು ಕನಕಲತಾ. ದೇವಾಲಯ ಆವರಣದ ಪುಟ್ಟ ಕೋಣೆಯಲ್ಲಿ ವಾಸ. ನೆರೆಯವವರು ನೀಡಿದ ಭಿಕ್ಷೆಯಿಂದ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಆ 70ರ ವೃದ್ಧೆ ನಿನ್ನೆ ಮೃತಪಟ್ಟಳು. ಅಂತ್ಯಸಂಸ್ಕಾರಕ್ಕಾಗಿ ಅಕ್ಕಪಕ್ಕದವರು ಒಂದಷ್ಟು ಹಣ ಕೂಡಿಸಿದರು. ಇದರಲ್ಲೇನು ವಿಶೇಷ ಎಂದು ಮೂಗು ಮುರಿಯಬೇಡಿ. ಆಕೆಯ ಕೊಠಡಿಯನ್ನು ಜಾಲಾಡಿದಾಗ ಒಂದಷ್ಟು ಬ್ಯಾಂಕ್ ಠೇವಣಿಪತ್ರಗಳು ದೊರೆತವು. ತೆರೆದು ನೋಡಿದಾಗ ಬರೋಬ್ಬರಿ ಎರಡು ಕೋಟಿ ರೂಪಾಯಿ ಠೇವಣಿ ಆಕೆಯ ಹೆಸರಿನಲ್ಲಿತ್ತು!

ಈ ಠೇವಣಿಗಳಿಗೆ ಯಾವ ನಾಮನಿರ್ದೇಶನವೂ ಇಲ್ಲದ್ದರಿಂದ ಬ್ಯಾಂಕುಗಳು ಇದೀಗ ಯಾರು ಈ ಠೇವಣಿಯ ಮೇಲೆ ಹಕ್ಕುಪ್ರತಿಪಾದನೆಗೆ ಮುಂದಾಗುತ್ತಾರೆ ಎಂದು ಎದುರು ನೋಡುತ್ತಿವೆ.

ಕನಕಲತಾಗೆ ಮಕ್ಕಳಿಲ್ಲ: ಗಂಡ ಪ್ರೇಮನಾರಾಯಣ್ ಕಳೆದ ವರ್ಷ ಮೃತಪಟ್ಟಿದ್ದರು. "ಆಕೆ ನುಲ್ಲಾ ಬಜಾರ್‌ನ ದೇವಸ್ಥಾನ ಆವರಣದ ಪುಟ್ಟ ಕೋಣೆಯಲ್ಲಿ ಅನಾಥೆಯಂತೆ ಬದುಕು ನಡೆಸುತ್ತಿದ್ದಳು" ಎಂದು ಸ್ಥಳೀಯರಾದ ರಾಜು ಮಿಶ್ರಾ ಹೇಳುತ್ತಾರೆ.

ಆಕೆಯ ಸ್ಥಿತಿ ಕಂಡು ನೆರೆಹೊರೆಯವರು ಆಕೆಗೆ ಆಹಾರ ಹಾಗೂ ಬಟ್ಟೆ ಮತ್ತಿತರ ಅಗತ್ಯ ವಸ್ತುಗಳನ್ನು ಒದಗಿಸುತ್ತಿದ್ದರು. ಗಂಡ ಕಳೆದ ವರ್ಷ ಮೃತಪಟ್ಟ ಬಳಿಕವಂತೂ ಆಕೆಗೆ ಏನೂ ಉಳಿದಿಲ್ಲ ಎಂದು ಹೇಳಲಾಗುತ್ತಿತ್ತು. ಎರಡು ವರ್ಷ ಹಿಂದೆ ಆಕೆಯ ಪತಿ ತೀವ್ರವಾಗಿ ಅಸ್ವಸ್ಥಗೊಂಡಾಗ ಕೂಡಾ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದು ಸರದಿಯಲ್ಲಿ ನಿಂತು ಚಿಕಿತ್ಸೆ ಪಡೆದರು ಎಂದು ಭಾರತಿ ಎಂಬ ಮಹಿಳೆ ವಿವರಿಸುತ್ತಾರೆ.

ಕೆಲ ವರ್ಷಗಳ ಹಿಂದೆ ಪುಟ್ಟ ಕೊಠಡಿಯನ್ನು ಬಾಡಿಗೆಗೆ ಪಡೆದು ವಾಸವಾಗಿದ್ದರು. ಅವರು ಬಡವರು. ಆದರೆ ಒಳ್ಳೆಯವರು. ಯಾರಿಗೂ ಅವರಿಂದ ತೊಂದರೆ ಇರಲಿಲ್ಲ ಎಂದು ಸ್ಥಳೀಯರು ಹೇಳುತ್ತಾರೆ. ಎರಡು ದಿನಗಳಿಂದ ಆಕೆ ದೇವಾಲಯ ಆವರಣದಲ್ಲಿ ಕಾಣಿಸಿಕೊಳ್ಳದಿದ್ದಾಗ ಜನ ಹೋಗಿ ಆಕೆಯ ಕೊಠಡಿಯಲ್ಲಿ ನೋಡಿದರು. ಆಗ ಆಕೆ ಮೃತಪಟ್ಟಿರುವುದು ಪತ್ತೆಯಾಯಿತು.

ದೇವಸ್ಥಾನದ ಅರ್ಚಕರು ಹಾಗೂ ಸ್ಥಳೀಯರು ಆಕೆಯ ಕೊಠಡಿಗೆ ಹೋಗಿ ನೋಡಿದಾಗ ಕೆಲ ಹಳೆ ಬಟ್ಟೆಗಳು ಮತ್ತು ಹಳೆಯ ಪೀಠೋಪಕರಣ ಇತ್ತು. ಆಕೆಯ ಮಂಚದ ಕೆಳಗೆ ಇದ್ದ ಒಂದು ಕಬ್ಬಿಣದ ಪೆಟ್ಟಿಗೆ ತೆರೆದು ನೋಡಿದಾಗ, ವಿವಿಧ ಬ್ಯಾಂಕ್‌ಗಳ ಠೇವಣಿ ಪ್ರಮಾಣಪತ್ರಗಳು ಪತ್ತೆಯಾದವು. ಎಲ್ಲವನ್ನೂ ಲೆಕ್ಕ ಹಾಕಿದಾಗ ಅದು ಎರಡು ಕೋಟಿ ರೂಪಾಯಿ ಇತ್ತು ಎಂದು ವಿವರಿಸುತ್ತಾರೆ. ಇದೀಗ ಆಕೆಯ ಅಳಿಯ ಎಂದು ಹೇಳಿಕೊಂಡು ಛತ್ತೀಸ್‌ಗಢದಿಂದ ಒಬ್ಬ ವ್ಯಕ್ತಿ ಬಂದಿದ್ದು, ಆಕೆಯ ಸಂಪತ್ತಿನ ಬಗ್ಗೆ ಹಕ್ಕು ಪ್ರತಿಪಾದಿಸಿದ್ದು, ಅದನ್ನು ಮಾನ್ಯಮಾಡುವುದು ಬ್ಯಾಂಕುಗಳಿಗೆ ಬಿಟ್ಟ ವಿಚಾರ ಎಂದು ನುಲ್ಲಾ ಬಜಾರ್‌ನ ಮುಕೇಶ್ ಹೇಳುತ್ತಾರೆ. ಆ ಹಣದಲ್ಲಿ ಅವರ ಹೆಸರಲ್ಲಿ ದೇವಸ್ಥಾನ ನಿರ್ಮಿಸುವುದು ತನ್ನ ಗುರಿ ಎಂದು ಆ ವ್ಯಕ್ತಿ ಹೇಳಿಕೊಂಡಿದ್ದಾನೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X