ಬರ ಪರಿಸ್ಥಿತಿ ಅವಲೋಕನಕ್ಕೆ ರಾಜ್ಯಗಳ ಮುಖ್ಯಕಾರ್ಯದರ್ಶಿಗಳ ಸಭೆ ಕರೆದ ಕೇಂದ್ರ ಸರಕಾರ

ಹೊಸದಿಲ್ಲಿ,ಮೆ 1; ಬರ ಪರಿಸ್ಥಿತಿಯ ಕುರಿತು ಅವಲೋಕನ ನಡೆಸಲಿಕ್ಕಾಗಿ ಕೇಂದ್ರ ಸರಕಾರ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳ ಸಭೆಯನ್ನು ಕರೆದಿದೆ.ಪ್ರಧಾನಿ ನರೇಂದ್ರ ಮೋದಿ ಸೂಚನೆ ಪ್ರಕಾರ ಕ್ಯಾಬಿನೆಟ್ ಕಾರ್ಯದರ್ಶಿ ಸಭೆಯನ್ನು ಕರೆದಿದ್ದಾರೆಂದು ವರದಿಯಾಗಿದೆ.
ನಾಳೆ ದಿಲ್ಲಿಯಲ್ಲಿ ನಡೆಯುವ ಸಭೆಯಲ್ಲಿ ರಾಜ್ಯಗಳ ಮುಖ್ಯಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ.ಸಭೆಯಲ್ಲಿ ಬರ ಪರಿಸ್ಥಿತಿಯನ್ನು ಎದುರಿಸಲು ಫಲಪ್ರದವಾದ ಉಪಾಯವನ್ನು ಕೈಗೊಳ್ಳುವುದು,ಆರ್ಥಿಕ ಸಹಾಯ, ಮಳೆ ನೀರು ಸಂಗ್ರಹ ಮುಂತಾದ ವಿಷಯಗಳನ್ನು ಚರ್ಚಿಸಲಾಗುವುದು ಎಂದು ವರದಿಯಾಗಿದೆ.
Next Story





