Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತಾಂತರ ಮಾಡಿದ ಕ್ರೈಸ್ತರ ವಿರುದ್ಧ...

ಮತಾಂತರ ಮಾಡಿದ ಕ್ರೈಸ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ

ಬಜರಂಗದಳದ ಜೊತೆ ಚರ್ಚ್ ದಾಳಿ ಮಾಡಿದ ಮಧ್ಯ ಪ್ರದೇಶ ಹಿಂದುಳಿದ ವರ್ಗದ ಇಲಾಖೆಯ ಸದಸ್ಯನ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ2 May 2016 11:58 AM IST
share
ಮತಾಂತರ ಮಾಡಿದ ಕ್ರೈಸ್ತರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ

ಭೋಪಾಲ್, ಮೇ 1: ಸತ್ನಾದ ಚರ್ಚ್ ಒಂದರಲ್ಲಿ ಎಪ್ರಿಲ್ 27ರಂದು  ಮದುವೆಯೊಂದು ನಡೆಯುತ್ತಿದ್ದಾಗ ಅಲ್ಲಿ ವಿವಾಹವಾಗುತ್ತಿರುವ ಜೋಡಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದೆಯೆಂದು ಆರೋಪಿಸಿ ಚರ್ಚ್‌ಗೆ ಬಜರಂಗದಳದವರು ದಾಳಿ ನಡೆಸಿ ಮದುವೆ ನಿಲ್ಲಿಸಿದ ಸಂದರ್ಭ ಅಲ್ಲಿ ಹಾಜರಿದ್ದ ಮಧ್ಯ ಪ್ರದೇಶ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸದಸ್ಯ ಲಕ್ಷ್ಮಿ ಯಾದವ್, "ಇತರ ಹಿಂದುಳಿದ ವರ್ಗದ ಜೋಡಿಯೊಂದನ್ನು ಮತಾಂತರಿಸಿ ಅವರಿಗೆ ವಿವಾಹ ಮಾಡಲು ಯತ್ನಿಸಿ ಕ್ರೈಸ್ತರು ಸಿಕ್ಕಿ ಬಿದ್ದ ಪ್ರಥಮ ಘಟನೆ ಇದಾಗಿದೆ,’’ ಎಂದು ಹೇಳಿದ್ದಾರೆ. ‘‘ ಆ ಯುವ ಜೋಡಿಯನ್ನು ನಾವು ಮರು ಮತಾಂತರಗೊಳಿಸುತ್ತೇವೆ, ಅವರ ಮೇಲೆ ಗಂಗಾಜಲ ಸಿಂಪಡಿಸಿ ಅವರಿಗೆ ಹಿಂದು ಪದ್ಧತಿಯಂತೆ ವಿವಾಹ ಮಾಡುತ್ತೇವೆ,’’ ಎಂದು ಹೇಳಿದ ಯಾದವ್ ಮತಾಂತರ ನಡೆಸಿದವರ ವಿರುದ್ಧ ದೇಶದ್ರೋಹದ ಆರೋಪ ಹೊರಿಸಬಹುದೇ ಎಂಬ ಬಗ್ಗೆ ತಾನು ಕಾನೂನು ಸಲಹೆ ಕೇಳುವುದಾಗಿ ತಿಳಿಸಿದ್ದಾರೆ.

ಈ ಘಟನೆ ನಡೆದು ಎರಡು ದಿನಗಳ ನಂತರ ಬಜರಂಗದಳ ನಡೆಸಿದ ಪ್ರತಿಭಟನೆಯ ಸಂದರ್ಭ ಸತ್ನಾದ ಕ್ಯಾಥೊಲಿಕ್ ಶಾಲೆಯೊಂದರ ಎದುರು ಪೋಪರ ಪ್ರತಿಕೃತಿಯನ್ನು ದಹಿಸಲಾಗಿತ್ತು.

ವಿವಾಹವಾಗಬೇಕಿದ್ದ ಜೋಡಿ ಅರುಣ್ (24) ಹಾಗೂ ಸುಭದ್ರ ತಾವೇನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿಲ್ಲವೆಂದು ವಾದಿಸುತ್ತಾರೆ. ‘‘ನಮ್ಮಅನಾರೋಗ್ಯ ಪೀಡಿತ ಹೆತ್ತವರು ಹಲವರು ವೈದ್ಯರನ್ನು ಸಂದರ್ಶಿಸಿ ಚಿಕಿತ್ಸೆ ಪಡೆದರೂ ಗುಣವಾಗದಿದ್ದಾಗ ಆರನೆಯವರು (ಕ್ರಿಸ್ತ) ಅವರನ್ನು ಗುಣಪಡಿಸಿದ ನಂತರ ನಾವು ಮನ ಪರಿವರ್ತನೆಗೊಂಡಿದ್ದೇವೆ,’’ ಎಂದವರು ಹೇಳುತ್ತಾರೆ.

ಮತಾಂತರಗೊಳ್ಳದೇ ಇದ್ದಲ್ಲಿ ಅವರೇಕೆ ಚರ್ಚಿನಲ್ಲಿ ವಿವಾಹ ಕಾರ್ಯಕ್ರಮ ಏರ್ಪಡಿಸಬೇಕಿತ್ತು ಎಂಬುದು ಬಜರಂಗದಳದ ಪ್ರಶ್ನೆಯಾಗಿದೆ. ಚರ್ಚಿನ ಪ್ಯಾಸ್ಟರ್ ಸ್ಯಾಮ್ ಸಾಮ್ಯುಯೆಲ್ ಪ್ರಕಾರ ಚರ್ಚ್ 1998ರಲ್ಲಿ ಸ್ಥಾಪನೆಯಾದಂದಿನಿಂದ ಇದು ಅಲ್ಲಿ ನಡೆಯುತ್ತಿರುವ ಪ್ರಥಮ ವಿವಾಹವಾಗಿತ್ತು.

ಆದರೆ ಪೊಲೀಸರು ಸುಭದ್ರಾಳ 8ನೇ ತರಗತಿಯ ಮಾರ್ಕ್ ಶೀಟನ್ನು ಪರಿಶೀಲಿಸಿ ಆಕೆಗೆ 18 ತುಂಬಲು ಇನ್ನೂ 10 ದಿನವಿದೆ ಎಂದು ಹೇಳಿ ಅರುಣ್, ಆರು ಮಂದಿ ಪ್ಯಾಸ್ಟರುಗಳ ಸೇರಿದಂತೆ ಒಂಬತ್ತು ಮಂದಿಯನ್ನು ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ.

ಇಷ್ಟೆಲ್ಲಾ ಬೆಳವಣಿಗೆಯ ನಂತರವೂ ಅರುಣ್ ಹಾಗೂ ಸುಭದ್ರಾ ವಿವಾಹವಾಗುವ ದೃಢ ಸಂಕಲ್ಪ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X