ಮಂಜೇಶ್ವರ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
ಮಂಜೇಶ್ವರ, ಮೇ 2: ಪೈವಳಿಕೆ ಸಮೀಪದ ಚಿಪ್ಪಾರು ಎಂಬಲ್ಲಿ ಮನೆಯೊಳಗೆ ಯುವಕನೋರ್ವನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಪೈವಳಿಕೆ ಸಮೀಪದ ಚಿಪ್ಪಾರಿನ ದಿ.ಶೀನ ಆಚಾರ್ಯ ಎಂಬವರ ಪುತ ಸುಧಾಕರ ಆಚಾರ್ಯ(35)ಮೃತ ಯುವಕ. ಈತ ಒಬ್ಬಂಟಿಯಾಗಿ ಜೀವಿಸುತ್ತಿದ್ದು, ಜೀವನ ನಿರ್ವಹಣೆಗೆ ಬಡಗಿ ವೃತ್ತಿ ಮಾಡಿಕೊಂಡಿದ್ದರು.
ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸುಮಾರು ಐದು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ಪಂಚನಾಮೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





