Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಮಿಕರು ಹೋರಾಟದ ಮೂಲಕ ಗುಲಾಮಗಿರಿಯಿಂದ...

ಕಾರ್ಮಿಕರು ಹೋರಾಟದ ಮೂಲಕ ಗುಲಾಮಗಿರಿಯಿಂದ ಹೊರಬನ್ನಿ: ಎಸ್. ವರಲಕ್ಷ್ಮೀ

ಮೂಡುಬಿದಿರೆಯಲ್ಲಿ ಕಾರ್ಮಿಕ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ2 May 2016 6:52 PM IST
share
ಕಾರ್ಮಿಕರು ಹೋರಾಟದ ಮೂಲಕ ಗುಲಾಮಗಿರಿಯಿಂದ ಹೊರಬನ್ನಿ: ಎಸ್. ವರಲಕ್ಷ್ಮೀ

ಮೂಡುಬಿದಿರೆ, ಮೇ 2: ನಮಗೆ ಸಮಾನತೆ ಸಿಗಬೇಕೆಂಬ ಉದ್ದೇಶದಿಂದ ಸರಕಾರಗಳನ್ನು ಆಯ್ಕೆ ಮಾಡಲಾಗಿದೆ. ಆದರೆ ನಮ್ಮನ್ನಾಳುವ ಸರಕಾರಗಳು ಕಾರ್ಮಿಕ ವಿರೋಧಿ ನೀತಿಗಳನ್ನು ಜಾರಿಗೆ ತರುವ ಮೂಲಕ ಮತ್ತೊಮ್ಮೆ ಕಾರ್ಮಿಕರನ್ನು ಗುಲಾಮಗಿರಿಯ ಸಂಕೋಲೆಯಲ್ಲಿ ಬಂಧಿಸಲು ಪ್ರಯತ್ನಿಸುತ್ತಿದ್ದು, ಕಾರ್ಮಿಕರು ಬೀದಿಗಿಳಿದು ಹೋರಾಟ ಮಾಡುವ ಮೂಲಕ ಗುಲಾಮಗಿರಿಯಿಂದ ಹೊರ ಬರಬೇಕಾಗಿದೆ ಎಂದು ಸಿಐಟಿಯುನ ರಾಜ್ಯ ಸಮಿತಿಯ ಪ್ರಧಾನ ಕಾರ್ಯದರ್ಶಿ ಎಸ್.ವರಲಕ್ಷ್ಮೀ ಕರೆ ನೀಡಿದ್ದಾರೆ.

ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆಯ ಅಂಗವಾಗಿ ಸಿಐಟಿಯು ವತಿಯಿಂದ ಮೂಡುಬಿದಿರೆಯ ಸಮಾಜಮಂದಿರದಲ್ಲಿ ಸೋಮವಾರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ತಂಬಾಕು ಹಾಗೂ ಬೀಡಿಯನ್ನು ನಿಷೇಧಿಸುವ ಮೂಲಕ ಸರಕಾರಗಳು ಕೋಟಿಗಟ್ಟಲೆ ಕಾರ್ಮಿಕರ ಹೊಟ್ಟೆಗೆ ಹೊಡೆಯುತ್ತಿವೆ ಹೊರತು ಪರ್ಯಾಯ ವ್ಯವಸ್ಥೆಯನ್ನು ಮಾಡಲು ಯತ್ನಿಸದೆ ಉಳ್ಳವರ ಸಂಪತ್ತನ್ನು ಕ್ರೋಢೀಕರಿಸಲು ಸಹಾಯ ಮಾಡುತ್ತಿವೆ ಎಂದು ಆರೋಪಿಸಿದರು. ಶಾಂತಿಯುತವಾಗಿ ಹೋರಾಟ ಮಾಡಿದರೆ ಸರಕಾರ ಹಾಗೂ ಮಾಧ್ಯಮಗಳ ಗಮನ ಸೆಳೆಯಲು ಸಾಧ್ಯವಾಗುತ್ತಿಲ್ಲ. ಆದರೆ ಜೀವ ತೆಗೆಯುವಂತಹ ಹೋರಾಟ ಅಥವಾ ಬಸ್‌ಗಳಿಗೆ ಬೆಂಕಿ ಹಾಕಿದಾಗ ಮಾತ್ರ ಮಾಧ್ಯಮಗಳು ಆ ಸುದ್ದಿಗಳನ್ನು ಹಗಲು ರಾತ್ರಿ ಎನ್ನದೆ ಬಿತ್ತರಿಸುತ್ತವೆ ಎಂದು ವಿಷಾದ ವ್ಯಕ್ತಪಡಿಸಿದ ಅವರು, ತಾವು ಶಾಂತಿಯುತವಾಗಿ ಸರಕಾರದ ಗಮನ ಸೆಳೆಯುವಂತೆ ಹೋರಾಟಗಳನ್ನು ಮಾಡಿ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳೋಣ ಎಂದರು. 

 ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಯಾದವ ಶೆಟ್ಟಿ, ಸಿಐಟಿಯು ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ, ಸಿಐಟಿಯು ಮುಖಂಡೆ ರಮಣಿ, ವಲಯಾಧ್ಯಕ್ಷ ಶಂಕರ ವಾಲ್ಪಾಡಿ, ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಸೀತಾರಾಮ ಶೆಟ್ಟಿ, ರೈತ ಸಂಘದ ಅಧ್ಯಕ್ಷ ಸುಂದರ ಶೆಟ್ಟಿ, ಗೇರು ಉದ್ಯಮ ಕಾರ್ಮಿಕರ ಸಂಘದ ಅಧ್ಯಕ್ಷೆ ಯಶೋಧಾ ಹಾಗೂ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವಿಜಯಾ ಉಪಸ್ಥಿತರಿದ್ದರು.

ಸಿಐಟಿಯು ವಲಯ ಪ್ರಧಾನ ಕಾರ್ಯದರ್ಶಿ ರಾಧಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅಕ್ಷರ ದಾಸೋಹದ ಅಧ್ಯಕ್ಷೆ ಗಿರಿಜಾ ವಂದಿಸಿದರು.

 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X