ಜನ, ಜಾನುವಾರುಗಳಿಗೆ ಕುಡಿಯುವ ನೀರು ಪೂರೈಸಿ: ಸಚಿವ ಜಯಚಂದ್ರ

ಚಿಕ್ಕಮಗಳೂರು, ಮೇ 2: ಜಿಲ್ಲೆಯಲ್ಲಿ ಈ ಬಾರಿ ಬರ ಪರಿಸ್ಥಿತಿ ತಲೆ ದೋರಿದೆ. ಮಳೆಗಾಲ ಪ್ರಾರಂಭ ಆಗುವವರೆಗೂ ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶದ ಜನರಿಗೆ ಸಮರ್ಪಕವಾಗಿ ಕುಡಿ ಯುವ ನೀರು ಪೂರೈಕೆ ಮಾಡಬೇಕು ಎಂದು ಕಾನೂನು ಸಚಿವ ಟಿ.ಬಿ ಜಯಚಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅವರು ಸೋಮವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಏರ್ಪಡಿಸಲಾಗಿದ್ದ ಸಚಿವ ಸಂಪುಟ ಉಪ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಾನುವಾರುಗಳ ಹಿತರಕ್ಷಣೆಗೂ ಆದ್ಯತೆ ನೀಡಬೇಕು. ಅಗತ್ಯ ಇರುವ ಕಡೆಗಳಲ್ಲಿ ಗೋ ಶಾಲೆಯನ್ನು ಕೂಡಲೆ ಪ್ರಾರಂಭಿಸಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಈ ವರ್ಷ ವಾಡಿಕೆ ಮಳೆ ವಿಫಲವಾದ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ತಲೆದೋರಿದೆ. ಜಿಲ್ಲೆಯಲ್ಲಿ ಈಗಾಗಲೆ 6 ಗೋಶಾಲೆಗಳನ್ನು ಪ್ರಾರಂಭಿಸಲು ಜಾಗ ಗುರುತಿಸಲಾಗಿದೆ. ಇನ್ನೂ ಕೆಲವೆಡೆ ಗೋಶಾಲೆಗಳನ್ನು ಪ್ರಾರಂಭಿಸುವಂತೆ ಶಾಸಕ ರುಗಳು ಒತ್ತಾಯಿಸಿದ್ದಾರೆ. ಅಗತ್ಯವಿರುವ ಎಲ್ಲೆಡೆ ಗೋ ಶಾಲೆಗಳನ್ನು ಪ್ರಾರಂಭಿಸಿ, ಜಾನುವಾ ರುಗಳಿಗೆ ಸಮ ರ್ಪಕ ಮೇವು ಮತ್ತು ಕುಡಿಯುವ ನೀರು ಪೂರೈಸಬೇಕು ಎಂದು ಹೇಳಿ ದರು. ಮೇವು ಸಂಗ್ರಹಣೆಗೆ ಹೆಚ್ಚಿನ ಆದ್ಯತೆ ನೀಡ ಬೇಕಿದೆ. ಮೇಮ ಬ್ಯಾಂಕ್ ಸ್ಥಾಪಿಸಿ ಮೇವು ದಾಸ್ತಾನು ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು. ಮುಂಗಾರು ಹಂಗಾಮಿ ನಲ್ಲಿ ಜಿಲ್ಲೆಯಲ್ಲಿ 24,700 ಹೆ. ಬೆಳೆ ಹಾನಿಯಾಗಿದ್ದು, ಸರಕಾರದಿಂದ 21.37 ಕೋಟಿ ರೂ. ಬೆಳೆಪರಿಹಾರ ನಿಧಿ ಬಿಡುಗಡೆ ಮಾಡಿತ್ತು. ಈಗಾಗಲೇ 58,715 ರೈತರಿಗೆ 20.65 ಕೋಟಿ ರೂ.
ವಿತರಣೆ ಮಾಡಲಾಗಿದೆ ಎಂದರು. ಜಿಲ್ಲೆಯಲ್ಲಿ ತೀವ್ರ ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ 8 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮಳೆ ಬಾರದೆ ಇದ್ದ ಸಂದಭರ್ದಲ್ಲಿ ನೀರಿನ ಸಮಸ್ಯೆ ಉದ್ಭವಿಸಬಹುದೆಂದು 239 ಗ್ರಾಮಗಳನ್ನು ಗುರುತಿಸಲಾಗಿದ್ದು, ಇದಕ್ಕಾಗಿ ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಣೆ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಂತ್ರಿಗಳು, ಕುಡಿಯುವ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಜನ ಜಾನುವಾರುಗಳಿಗೆ ಅಗತ್ಯ ಇರುವ ನಿಗದಿತ ಪ್ರಮಾಣದಲ್ಲಿ ಸಮರ್ಪಕವಾಗಿ ನೀರು ಪೂರೈಕೆ ಮಾಡುವುದು ಸರಕಾರದ ಆಶಯವಾಗಿದೆ. ಕುಡಿಯುವ ನೀರಿನ ವಿಷಯದಲ್ಲಿ ಯಾವುದೆ ಹಣದ ಕೊರತೆ ಇಲ್ಲ. ಈಗಾಗಲೇ ಜಿಲ್ಲೆಗೆ ತುರ್ತು ಕುಡಿಯುವ ನೀರಿನ ಕಾಮಗಾರಿಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ ಎಂದ ಅವರು, ಕುಡಿಯುವ ನೀರು, ಮೇವಿನ ವಿಷಯದಲ್ಲಿ ಅಧಿಕಾರಿಗಳು ಯಾವುದೆ ನಿರ್ಲಕ್ಷ್ಯ ವಹಿಸಬಾರದು ಎಂದರು.
ಶಾಸಕಿ ಮೋಟಮ್ಮ ಮಾತನಾಡಿ, ವಲೆನಾಡು ಭಾಗದಲ್ಲಿ ಮಳೆಯ ಕೊರತೆಯಿಂದಾಗಿ ತೋಟಗಾರಿಕೆ ಬೆಳೆಗಳಾದ ಕಾಫಿ ಗಿಡಗಳಲ್ಲಿ ಹೂವುಗಳು ಅರಳಿಲ್ಲ. ಮೆಣಸಿನ ಬಳ್ಳಿಗಳು ಒಣಗುತ್ತಿವೆ ಅಲ್ಲದೆ ಕುಡಿಯುವ ನೀರಿಗೆ ತೊಂದರೆಯಾಗಿದೆ ಮಲೆನಾಡು ಪ್ರದೇಶವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು ಎಂದರು. ಶಾಸಕ ಸಿ.ಟಿ.ರವಿ ಮಾತನಾಡಿ, ಜಿಲ್ಲೆಯಲ್ಲಿ ಕೃಷಿ ಹಾಗೂ ತೋಟಗಾರಿಕೆ ಬೆಳೆಗಳ ಬೆಳೆ ಹಾನಿಯ ಬಗ್ಗೆ ಸರಿಯಾಗಿ ಸಮೀಕ್ಷೆಯಾಗಿರುವುದಿಲ್ಲ ಎಂದಾಗ ಮಂತ್ರಿ ಡಾ.ಎಚ್.ಸಿ.ಮಹದೇವಪ್ಪ, ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಪ್ರಾಯೋಗಿಕವಾಗಿ ಕೆಲವು ಹಳ್ಳಿಗಳನ್ನು ಮರುಸಮಿಕ್ಷೆ ಮಾಡಬೇಕು ಎಂದು ಹೇಳಿದರು. ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸುವುದರಿಂದ ಶಾಶ್ವತವಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬಹುದು ಎಂದರು. ಇದಕ್ಕೆ ಮಂತ್ರಿ ಮಹದೇವ್ ಪ್ರಸಾದ್ ಅಧಿಕಾರಿಗಳಿಗೆ ಬಾಕಿ ಉಳಿದಿರುವ ಈ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲು ಸೂಚಿಸಿದರು.
ಉದ್ಯೊಗ ಖಾತ್ರಿ ಯೋಜನೆಯ ಕೂಲಿ ಹಣ ಹಾಗೂ ಬೆಳೆ ಹಾನಿ ಪರಿಹಾರದ ಹಣವನ್ನು ಬ್ಯಾಂಕಿನವರು ಸಾಲದ ಖಾತೆಗೆ ಜಮಾ ಮಾಡಿರುವುದರಿಂದ ಜನರಿಗೆ ಸಮಸ್ಯೆ ಉಂಟಾ ಗುತ್ತಿದೆ ಎಂದು ಸಭೆಯ ಗಮನಕ್ಕೆ ತಂದರು. ಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಹಾಗೂ ಗ್ರಾಹಕ ವ್ಯವಹಾರಗಳ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಬಿ.ಬಿ.ನಿಂಗಯ್ಯ, ಜಿ.ಎಚ್. ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಂ.ಕೆ.ಪ್ರಾಣೇಶ್, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್, ಜಿಪಂ ಸಿಇಒ ಡಾ.ಆರ್.ರಾಗಪ್ರಿಯ, ನಗರಸಭೆ ಅಧಕ್ಷ ದೇವರಾಜ ಶೆಟ್ಟಿ ಮತ್ತಿತರಿದ್ದರು.







