Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಡಿಗೆರೆ ಪಪಂ ನಿರ್ಲಕ್ಷ: ಕುಡಿಯುವ ನೀರು...

ಮೂಡಿಗೆರೆ ಪಪಂ ನಿರ್ಲಕ್ಷ: ಕುಡಿಯುವ ನೀರು ಪೋಲು

ವಾರ್ತಾಭಾರತಿವಾರ್ತಾಭಾರತಿ2 May 2016 10:26 PM IST
share
ಮೂಡಿಗೆರೆ ಪಪಂ ನಿರ್ಲಕ್ಷ: ಕುಡಿಯುವ ನೀರು ಪೋಲು

ಮೂಡಿಗೆರೆ, ಮೇ 2: ಒಂದೆಡೆ ಭೀಕರ ಬರಗಾಲದಿಂದ ತತ್ತರಿಸಿರುವ ಮಲೆನಾಡಿ ನಲ್ಲಿ ಕುಡಿಯುವ ನೀರಿಲ್ಲದೇ ಜನರು ಪರದಾಡುತ್ತಿದ್ದಾರೆ. ಇಲ್ಲಿನ ಪಪಂ ವ್ಯಾಪ್ತಿಯಲ್ಲಿ ಪಟ್ಟಣದ ಜನರು ಕುಡಿಯಲು ನೀರು ಸರಬ ರಾಜಾಗುವ ಪೈಪ್‌ಗಳು ಅಲ್ಲಲ್ಲಿ ತುಂಡಾಗಿ ನೀರು ಪೋಲಾಗುತ್ತಿರುವುದು ಸರ್ವೇ ಸಾಮಾನ್ಯವಾಗಿದೆ.

 ರಾತ್ರಿ ವೇಳೆ ವಿದ್ಯುತ್ ತ್ರೀಫೇಸ್ ಇರುವಾಗ ಬೀಜುವಳ್ಳಿಯ ಸುಂಡೇಕೆರೆ ಹಳ್ಳದಿಂದ ಹಾಗೂ ಕಿತ್ತಳೆಗಂಡಿ ಹೇಮಾವತಿ ನದಿ ಪಕ್ಕದ ನೀರು ಶುದ್ಧೀಕರಣ ಘಟಕದಿಂದ ಪಟ್ಟಣದ ದೊಡ್ಡಿಬೀದಿಯಲ್ಲಿರುವ ಎರಡು ಬೃಹತ್ ಟ್ಯಾಂಕ್‌ಗಳಲ್ಲಿ ನೀರು ಶೇಖರಣೆಯಾಗುತ್ತಿದೆ. ಬೆಳಗ್ಗೆ 5:30ರ ಸಮಯದಲ್ಲಿ ಈ ಟ್ಯಾಂಕ್‌ಗಳು ತುಂಬಿ ಪುನಃ ಗಂಟೆಗಟ್ಟಲೆ ನೀರು ಕೆಳಗೆ ಸೋರಿಕೆಯಾಗಿ ಬಾಕ್ಸ್ ಚರಂಡಿಯಲ್ಲಿ ಭಾರೀ ಗಾತ್ರದಲ್ಲಿ ಹರಿದು ಸುಂಡೇಕೆರೆ ಹಳ್ಳವನ್ನು ತಲುಪುತ್ತಿದೆ. ಕಳೆದ ಎರಡು ವರ್ಷಗಳಿಂದಲೂ ಈ ಮಟ್ಟದಲ್ಲಿ ನೀರು ಪೋಲಾಗುತ್ತಿರುವುದು ಕಂಡು ಬರುತ್ತಿದೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸುತ್ತಾರೆ. ಮಾರ್ಕೆಟ್ ರಸ್ತೆಯ ಬದಿ ಕಳೆದ ಹತ್ತು ತಿಂಗಳ ಹಿಂದೆ ಕೋಳಿ, ಮೀನು, ಕುರಿ ಮಾಂಸದ ಅಂಗಡಿಗಳಿಗೆಂದು 37 ಲಕ್ಷ ರೂ. 12 ಕೊಠಡಿಗಳ ಮಳಿಗೆ ಕಟ್ಟಲು ಪ್ರಾರಂಭಿಸಿದ್ದ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ಕಾಮಗಾರಿಯ ವೇಳೆ ಸಲಕರಣೆ ಸಾಗಿಸುವ ಸಮಯದಲ್ಲಿ ರಸ್ತೆ ಬದಿಯ ಕುಡಿಯುವ ನೀರಿನ ಪೈಪ್‌ಲೈನ್ ಟಿಪ್ಪರ್ ಚಕ್ರಕ್ಕೆ ಸಿಲುಕಿ ಜಖಂಗೊಂಡಿದ್ದು, ಕುಡಿಯುವ ನೀರೆಲ್ಲವೂ ಚರಂಡಿ ಪಾಲಾಗುವಂತಾಗಿದೆ.

ಪಟ್ಟಣದ ಜನರಿಗೆ ನೀರು ಸಿಗದಿರಲು ಪೈಪ್‌ಲೈನ್ ದುರಸ್ತಿ ಮಾಡದಿರುವುದೇ ಪ್ರಮುಖ ಕಾರಣವಾಗಿದೆ ಎನ್ನುವುದು ನಿವಾಸಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಪಪಂ ಅಧಿಕಾರಿಗಳು ಇನ್ನಾದರೂ ಎಚ್ಚೆತ್ತುಕೊಳ್ಳದಿದ್ದರೆ ಹೋರಾಟದ ದಾರಿ ಹಿಡಿಯುವುದು ಅನಿವಾರ್ಯವಾಗಲಿದೆ ಎನ್ನುವುದು ನಾಗರಿಕರ ಎಚ್ಚರಿಕೆ ಧ್ವನಿಯಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X