ಲೇಡಿಗೋಷನ್ ಕಾಮಗಾರಿಯ ಪ್ರಗತಿ ಪರಿಶೀಲನೆ

ಮಂಗಳೂರು, ಮೇ 1: ಲೇಡಿಗೋಶನ್ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ವಿಳಂಬವಾಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಇಂದು ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಆಸ್ಪತ್ತೆ ಕಟ್ಟಡದ ಹೆಚ್ಚಿನ ಕಾಮಗಾರಿ ಮುಗಿದಿದ್ದರೂ ಕಾರ್ಯಾರಂಭ ಮಾಡಲು ಇನ್ನೂ 9.5 ಕೋಟಿ ರೂ. ಅಗತ್ಯವಿದೆ ಎಂದು ಆಸ್ಪತ್ರೆಯ ಅಧೀಕ್ಷಕಿ ಡಾ.ಸವಿತಾ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಅಗತ್ಯವಿರುವ ಅನುದಾನದ ಬಗ್ಗೆ ಮುಖ್ಯಮಂತ್ರಿಯೊಂದಿಗೆ ಚರ್ಚಿಸುವುದಾಗಿ ಹೇಳಿದರು.
ಸಭೆಯಲ್ಲಿ ಮೇಯರ್ ಹರಿನಾಥ್, ಮೂಡ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಶಾಸಕ ಜೆ.ಆರ್. ಲೋಬೊ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮನಪಾ ಸದಸ್ಯ ಶಶಿಧರ್ ಹೆಗ್ಡೆ, ಜಿಲ್ಲಾಧಿಕಾರಿ ಎ.ಬಿ.ಇಬ್ರಾಹೀಂ ಉಪಸ್ಥಿತರಿದ್ದರು.
Next Story





