Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅನುಮತಿ ನೀಡಲು ಒತ್ತಾಯಿಸಿ ಅಜ್ಜಾವರ...

ಅನುಮತಿ ನೀಡಲು ಒತ್ತಾಯಿಸಿ ಅಜ್ಜಾವರ ಗ್ರಾಪಂಗೆ ಮುತ್ತಿಗೆ

ಮೇನಾಲದಲ್ಲಿ ಸದ್ಭಾವನಾ ಹಿಂದೂ ಸಂಗಮ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ2 May 2016 11:32 PM IST
share
ಅನುಮತಿ ನೀಡಲು ಒತ್ತಾಯಿಸಿ ಅಜ್ಜಾವರ ಗ್ರಾಪಂಗೆ ಮುತ್ತಿಗೆ

 ಸುಳ್ಯ, ಮೇ 2: ಸಂಘ ಪರಿವಾರದ ಸಂಘಟನೆಗಳಾದ ವಿಶ್ವ ಹಿಂದೂ ಪರಿಷತ್, ಭಜರಂಗದಳದ ನೇತೃತ್ವದಲ್ಲಿ ಮೇ.15ರಂದು ಮೇನಾಲ ಮೈದಾನದಲ್ಲಿ ಸದ್ಭಾವನಾ ಸಂಗಮ ಹೆಸರಿನಡಿ ಹಿಂದೂ ಸಮಾಜೋತ್ಸವ ನಡೆಯಲಿದ್ದು, ಕಾರ್ಯಕ್ರಮ ನಡೆಸಲು ಅಜ್ಜಾವರ ಗ್ರಾಪಂ ಅನುಮತಿ ನಿರಾಕರಣೆಯ ವಿರುದ್ಧ ಸಂಘಟನೆಗಳ ಕಾರ್ಯಕರ್ತರು ಗ್ರಾಪಂಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ನಡೆದಿದೆ.

   ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸುಬೋಧ್ ಶೆಟ್ಟಿ ಮೇನಾಲ, ವಿವಾದಿತ ಮೇನಾಲದ ಮೈದಾ ಎಲ್ಲರ ಕಾರ್ಯಕ್ರಮಕ್ಕಾಗಿ ಮುಕ್ತವಾಗಿದೆ ಎಂದು ಇತ್ತೀಚೆಗಷ್ಟೆ ಸಹಾಯಕ ಕಮಿಷನರ್ ಸಂದರ್ಭದಲ್ಲಿ ಹೇಳಿದ್ದಾರೆ. ಕಾರ್ಯಕ್ರಮ ನಡೆಸಲು ಅಜ್ಜಾವರ ಗ್ರಾಪಂ ಒಪ್ಪಿಗೆ ನೀಡಿಲ್ಲ. ಪಂಚಾಯತ್ ಹಿಂದೂ ವಿರೋಧಿ ನೀತಿಯ ಮೂಲಕ ಆಡಳಿತ ನಡೆಸುತ್ತಿದೆ. ಕೂಡಲೇ ಪಂಚಾಯತ್ ಹಿಂದೂ ವಿರೋಧಿ ನೀತಿಯನ್ನು ಕೈ ಬಿಡಬೇಕು. ಕೇವಲ ಒಂದು ವರ್ಗವನ್ನು ತೃಪ್ತಿ ಪಡಿಸಲು ಪಂಚಾಯತ್ ಆಡಳಿತ ಕಸರತ್ತು ನಡೆಸುತ್ತಿದೆ. ಪಂಚಾಯತ್ ಸಭೆೆಯಲ್ಲಿ ನಿರ್ಣಯ ಮಾಡಿ ಸಮಾರಂಭಕ್ಕೆ ಅನುಮತಿ ನೀಡಬೇಕು. ಇಲ್ಲದಿದ್ದರೆ ಅದೇ ಮೈದಾನದ ಸ್ಥಳದಲ್ಲಿ ನಾವು ಕಾರ್ಯಕ್ರಮ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಹಿಂದೂ ಸಂಘಟನೆಯ ಮುಖಂಡ ರಾಜೇಶ್ ರೈ ಮೇನಾಲ ಮಾತನಾಡಿ, ಕಾಂಗ್ರೆಸ್ ಬೆಂಬಲಿತ ಗ್ರಾಪಂನ ಆಡಳಿತ ಹಿಂದೂ ಸಮಾಜೋತ್ಸವ ನಡೆಸಲು ಸೌಜನ್ಯದಿಂದ ಅನುಮತಿ ನೀಡಬೇಕು. ಅನುಮತಿ ನೀಡದಿದ್ದರೂ ನಾವು ಕಾರ್ಯಕ್ರಮ ಮಾಡಿಯೇ ಸಿದ್ದ. ಅನುಮತಿ ನೀಡದಿದ್ದರೆ ಮೇನಾಲದ ಮೈದಾನವನ್ನು ಹಿಂದೂ ಸಂಘಟನೆಗಳು ಸ್ವಾಧೀನಕ್ಕೆ ಪಡೆದುಕೊಂಡು ಅಲ್ಲಿ ನಿತ್ಯ ಸಂಘದ ಚಟುವಟಿಕೆಗಳನ್ನು ಮಾಡುತ್ತೇವೆ ಎಂದರು.

ಪಂಚಾಯತ್ ಸೂಕ್ತ ನಿರ್ಣಯ ತೆಗೆದುಕೊಳ್ಳುವವರೆಗೂ ನಾವು ಪಂಚಾಯತ್ ಬಿಟ್ಟು ಕದಲುವುದಿಲ್ಲ ಎಂದು ಕಾರ್ಯಕರ್ತರು ಪಟ್ಟು ಹಿಡಿದರು.

 ಬಳಿಕ ಪಂಚಾಯತ್ ಕಾರ್ಯದರ್ಶಿ ಮತ್ತು ಪಂಚಾಯತ್ ಅಧ್ಯಕ್ಷ ಪ್ರಸಾದ್ ರೈ ಮಾತನಾಡಿ, ನಾವು ಅಧಿಕಾರಕ್ಕೆ ಬಂದ ಮೇಲೆ ಪಕ್ಷ, ಜಾತಿಯನ್ನು ನೋಡದೆ ಆಡಳಿತ ನಡೆಸಿದ್ದೇವೆ. ಮೇನಾಲದ ಮೈದಾನದಲ್ಲಿ ಹಿಂದೂ ಸಮಾವೇಶ ನಡೆಸಲು ಕೆಲವರಿಂದ ವಿರೋಧ ಬಂದ ಕಾರಣ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಅನುಮತಿ ನಿರಾಕರಣೆಗೆ ನಿರ್ಣಯ ಆಗಿದೆ. ಮೈದಾನದಲ್ಲಿ ಕಾರ್ಯಕ್ರಮ ನಡೆಸಲು ಎಲ್ಲರಿಗೂ ಅವಕಾಶ ಇದೆ ಎಂದು ಸಹಾಯಕ ಕಮೀಷನರ್ ಅವರ ಮಧ್ಯೆಸ್ಥಿಕೆಯಲ್ಲಿ ತೀರ್ಮಾನ ಆಗಿತ್ತು. ಆದರೆ ಎಸಿ ಅವರ ಆದೇಶದ ಪ್ರತಿ ಪಂಚಾಯತ್‌ಗೆ ಬಂದಿಲ್ಲ. ನಾಳೆ ಪಂಚಾಯತ್ ತುರ್ತು ಸಾಮಾನ್ಯ ಸಭೆಯನ್ನು ಕರೆದು ಚರ್ಚಿಸಿ ಕಾರ್ಯಕ್ರಮಕ್ಕೆ ಅನುಮತಿ ನೀಡುವುದರ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಪ್ರತಿಭಟನೆಯಲ್ಲಿ ತಾಪಂ ಸದಸ್ಯ ಚನಿಯ ಕತ್ಲಡ್ಕ, ಸೊಸೈಟಿ ಅಧ್ಯಕ್ಷ ಶಿವಪ್ರಸಾದ್, ವೆಂಕಟ್ರಮಣ ಮುಳ್ಯ, ಚಂದ್ರಶೇಖರ್ ಅತ್ಯಾಡಿ, ಮಾಜಿ ಗ್ರಾಪಂ ಅಧ್ಯಕ್ಷೆ ಜಯಂತಿ, ವೆಂಕಟ್ರಮಣ ಅತ್ಯಾಡಿ, ಲತೀಶ್ ಗುಂಡ್ಯ, ಗ್ರಾಪಂ ಸದಸ್ಯ ಕಮಲಾಕ್ಷ ರೈ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X