ಬಸವ ರಾಷ್ಟ್ರೀಯ ಪುರಸ್ಕಾರಕ್ಕೆ ಗೋ.ರು.ಚ ಆಯ್ಕೆ

ಬೆಂಗಳೂರು, ಮೇ 3: ಖ್ಯಾತ ಬರಹಗಾರ, ಚಿಂತಕ ಗೋ.ರು.ಚನ್ನಬಸಪ್ಪ ಅವರಿಗೆ ಪ್ರಸಕ್ತ ಸಾಲಿನ 'ಬಸವ ರಾಷ್ಟ್ರೀಯ ಪುರಸ್ಕಾರ'ಕ್ಕೆ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ಹೇಳಿದ್ದಾರೆ.
1986ರಿಂದ ಬೆಂಗಳೂರಿನಲ್ಲಿ ಶರಣ ಸಾಹಿತ್ಯ ಪರಿಷತ್ತನ್ನು ಕಟ್ಟಿ ಬೆಳೆಸಿ ಶರಣ ಸಾಹಿತ್ಯ ಮತ್ತು ಸಂಸ್ಕೃತಿಯನ್ನು ವಿಶ್ವದ್ಯಾದ್ಯಂತ ಪ್ರಚುರ ಪಡಿಸಲು ಶ್ರಮಿಸುತ್ತಿರುವುದನ್ನು ಪರಿಗಣಿಸಿ ಗೋ.ರು.ಚನ್ನಬಸಪ್ಪ ಅವರನ್ನು ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಮೇ 9ರಂದು ಮೈಸೂರಿನ ಕಲಾಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಗೋ.ರು.ಚನ್ನಬಸಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಈ ಪ್ರಶಸ್ತಿಯು 10ಲಕ್ಷ ರೂ.ಗಳ ನಗದು, ಬಸವಣ್ಣನವರ ಪುತ್ಥಳಿ ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ ಎಂದು ಸಚಿವೆ ಉಮಾಶ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





